ಮೊದಲನೇ ವಾಚನ : ಹೊಶೇಯ 11:1-4, 8-9
ಸರ್ವೇಶ್ವರ ಇಂತೆನ್ನುತ್ತಾರೆ: " ಪ್ರೀತಿಸಿದೆನು ಇಸ್ರಯೇಲನ್ನು ಅದರ ಬಾಲ್ಯಾವಸ್ಥೆಯಿಂದ: ಕರೆದೆನು ನಾ ಆ ಪುತ್ರನನ್ನು ಈಜಿಪ್ಟಿನಿಂದ. ದೂರ ಸರಿದರು ಆ ಇಸ್ರಯೇಲರು ನಾ ಕರೆದರೂ ನನ್ನ ಬಳಿಗೆ ಅರ್ಪಿಸುತ್ತಾ ಬಂದರು. ಯಜ್ಞವನ್ನು ಬಾಳ್‍ದೇವತೆಗಳಿಗೆ ಧೂಪಾರತಿ ಬೆಳಗುತ್ತಾ ಬಂದರು ಆ ವಿಗ್ರಹಗಳಿಗೆ. ಎಫ್ರಯಿಮಿಗೆ ಅಂಬೆಗಾಲಿಡಲು ಕಲಿಸಿದವನು ನಾನೇ ಅದನ್ನು ಕೈಗಳಲ್ಲಿ ಎತ್ತಿಕೊಂಡು ಆಡಿಸಿದವನು ನಾನೇ ಆ ಜನರನ್ನು ಸ್ವಸ್ಥ ಮಾಡಿದವನೂ ನಾನೇ: ಆದರೆ ಅರಿತುಕೊಳ್ಳದೆ ಹೋದರು ಈ ವಿಷಯವನ್ನೇ. ಬೆಳೆಸಿದನು ಅವರನ್ನು ಕರುಣೆಯ ಕಟ್ಟುಗಳಲಿ, ಪ್ರೀತಿಯ ಬಂಧನದಲ್ಲಿ ಸುಧಾರಿಸಿದೆ ಅವರ ಹೆಗಲಿಗೆ ಬಿಗಿದಿದ್ದ ನೊಗವನ್ನು ಬಿಚ್ಚಿ ಊಟ ಬಡಿಸಿದೆ ಅವರಿಗೆ ನೆಲಸಮ ಬಗ್ಗಿ. ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನ್ನು ಹೇಗೆ ಕೈ ಬಿಡಲಿ ಇಸ್ರಯೇಲೇ? ನಿನ್ನನ್ನು. ಹೇಗೆ ಈಡು ಮಾಡಲಿ ದುರ್ಗತಿಗೆ ನಿನ್ನನ್ನು ಅದ್ಮದಂತೆ, ಹೇಗೆ ನಾಶ ಮಾಡಲಿ ನಿನ್ನನ್ನು ಚೆಬೋಯೀಮನಂತೆ? ತಡೆಯಿಡಿಯುವೆನು ನನ್ನ ಉಗ್ರಕೋಪವನು ನಾಶ ಪಡಿಸಲಾರೆ ಮರಳಿ ಎಫ್ರಯಿಮನು. ನರಮಾನವನಲ್ಲ, ದೇವರು ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿಯು ನನ್ನದಲ್ಲಿ ನಾಶ ಮಾಡುವ ರೋಷವು"
ಕೀರ್ತನೆ : 80:2ac, 3b, 15-16
ಶ್ಲೋಕ: ದೇವರೇ, ಬೆಳಗಲಿ ನಿನ್ನ ಮುಖಕಾಂತಿ ಪಡೆವೆವು ರಕ್ಷಣೆಯನು
ಶುಭಸಂದೇಶ: ಮತ್ತಾಯ: 10: 7-15
ಹೋಗುತ್ತಾ, ’ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆ ಮಾಡಿರಿ. ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ, ದೆವ್ವಗಳನ್ನು ಬಿಡಿಸಿರಿ. ಉಚಿತವಾಗಿ ಪಡೆಯುವಿರಿ, ಉಚಿತವಾಗಿ ಕೊಡಿ. ಜೇಬಿನಲ್ಲಿ ಚಿನ್ನ, ಬೆಳ್ಳಿ, ತಾಮ್ರವನ್ನಾಗಲಿ, ಪ್ರಯಾಣಕ್ಕೆಂದು ಜೋಳಿಗೆಯನ್ನಾಗಲಿ, ಎರಡು ಅಂಗಿಗಳನ್ನಾಗಲಿ, ಕಾಲಿಗೆ ಕೆರವನ್ನಾಗಲಿ, ಕೈಗೆ ದಂಡವನ್ನಾಗಲಿ ತೆಗೆದುಕೊಳ್ಳಬೇಡಿ. ಏಕೆಂದರೆ, ದುಡಿಮೆಗಾರನು ಜೀವನಾಧಾರಕ್ಕೆ ಬಾಧ್ಯನು. "ನೀವು ಒಂದು ಪಟ್ಟಣಕ್ಕಾಗಲೀ, ಹಳ್ಳಿಗಾಗಲೀ ಹೋದಾಗ, ಅಲ್ಲಿ ನಿಮ್ಮನ್ನು ಬರಮಾಡಿಕೊಳ್ಳಲು ಯೋಗ್ಯನು ಯಾರೆಂದು ಕಂಡುಹಿಡಿಯಿರಿ. ಅಲ್ಲಿಂದ ಮುಂದಕ್ಕೆ ಸಾಗುವವರೆಗೂ ಅವನಲ್ಲೇ ತಂಗಿರಿ. ನೀವು ಒಂದು ಮನೆಗೆ ಹೋದಾಗ, "ಈ ಮನೆಗೆ ಶುಭವಾಗಲಿ!" ಎಂದು ಹರಸಿರಿ. ಆ ಮನೆಯವರು ನಿಮ್ಮನ್ನು ಸ್ವಾಗತಿಸಿದರೆ, ನಿಮ್ಮ ಆಶೀರ್ವಾದ ಅವರ ಮೇಲೆ ನೆಲಸಲಿ. ನಿಮ್ಮನ್ನು ಸ್ವಾಗತಿಸದೆ ಹೋದರೆ, ನಿಮ್ಮ ಆಶೀರ್ವಾದ ನಿಮಗೇ ಹಿಂದಿರುಗಲಿ. ಒಂದು ಮನೆಯೇ ಆಗಲಿ, ಊರೇ ಆಗಲಿ, ನಿಮ್ಮನ್ನು ಸ್ವಾಗತಿಸದೆ ಅಥವಾ ನಿಮಗೆ ಕಿವಿಗೊಡದೆ ಹೋದರೆ, ಆ ಮನೆಯನ್ನು ಅಥವಾ ಊರನ್ನು ಬಿಟ್ಟು ಮುಂದಕ್ಕೆ ಹೋಗಿರಿ. ಹೋಗುವಾಗ ನಿಮ್ಮ ಪಾದಗಳಿಗೆ ಅಂಟಿರುವ ಧೂಳನ್ನು ಝೂಡಿಸಿಬಿಡಿ. ತೀರ್ಪಿನ ದಿನ ಆ ಊರಿನ ಗತಿ ಸೊದೋಮ್ ಮತ್ತು ಗೊಮೋರ ಊರುಗಳ ಗತಿಗಿಂತ ಕಠಿಣವಾಗಿರುವುದೆಂದು ನಾನು ನಿಮಗೆ ಒತ್ತಿ ಹೇಳುತ್ತೇನೆ.
ಶುಭಸಂದೇಶ: ಮತ್ತಾಯ: 10: 7-15

No comments:
Post a Comment