ಪ್ರವಾದಿ
ಯೆಶಾಯನ ಗ್ರಂಥದಿಂದ ವಾಚನ 1:11-17
ಸ್ವಾಮಿ
ಇಂತೆನ್ನುತ್ತಾರೆ : “ನೀವು ಅರ್ಪಿಸುವ ಅಸಂಖ್ಯಾತ ಬಲಿದಾನಗಳಿಂದ ನನಗೇನು
ಪ್ರಯೋಜನ? ಟಗರುಗಳು, ಸರ್ವಾಂಗ ಹೋಮ,
ಪುಷ್ಟಪಶುಗಳ ಕೊಬ್ಬು ಇವೆಲ್ಲ ನನಗೆ ಬೇಸರ. ಹೋತ ಹೋರಿಗಳ,
ಕುರಿಮರಿಗಳ ರಕ್ತ ನನಗೆ ತಾತ್ಸಾರ. ನನ್ನ ಸನ್ನಿಧಾನಕ್ಕೆ
ಬರುವಾಗ ಇದನ್ನೆಲ್ಲ ತರಬೇಕೆಂದು ನಿಮಗೆ ಹೇಳಿದವರಾರು? ನಿಮ್ಮ ನೈವೇದ್ಯಗಳನ್ನು
ಇನ್ನು ತರಬೇಡಿ. ನಿಮ್ಮ ಧೂಪಾರತಿ ನನಗೆ ಅಸಹ್ಯ. ನೀವು ಆಚರಿಸುವ ಹಬ್ಬ ಹುಣ್ಣಿಮೆ, ಸಬ್ಬತ್ ವಿಶ್ರಾಂತಿ,
ನಿಮ್ಮ ಸಭೆ ಕೂಟಗಳು ನನಗೆ ಬೇಡ. ಅಧರ್ಮದಿಂದ ಕೂಡಿದ ಇಂಥ
ಸಮಾರಂಭಗಳು ನನಗೆ ಇಷ್ಟವಿಲ್ಲ. ನಿಮ್ಮ ಹಬ್ಬ ಹುಣ್ಣಿಮೆಗಳು, ಉತ್ಸವ ದಿನಗಳು ನನ್ನ ಮನಕ್ಕೆ ವಿರುದ್ಧ, ಹೊರಲಾಗದ ಭಾರ,
ಸಹಿಸಲಾಗದ ಬೇಸರ. ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು.
ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ. ತೊಳೆದುಕೊಳ್ಳಿರಿ,
ನಿಮ್ಮನ್ನೇ ಶುದ್ಧ ಮಾಡಿಕೊಳ್ಳಿರಿ. ಕಣ್ಣಿಗೆ ಕಟ್ಟಿದಂತಿರುವ
ನಿಮ್ಮ ದುಷ್ಕೃತ್ಯಗಳು ನೀಗಿ ಹೋಗಲಿ. ಕೇಡನ್ನು ಬಿಟ್ಟು ಒಳಿತನ್ನು ಕೈಗೊಳ್ಳಿರಿ.
ನ್ಯಾಯನೀತಿಗಳಲ್ಲಿ ನಿರತರಾಗಿರಿ. ಹಿಂಸಾತ್ಮಕರನ್ನು ತಿದ್ದಿ
ಸರಿಪಡಿಸಿರಿ. ಅನಾಥರಿಗೆ ನ್ಯಾಯ ದೊರಕಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.
ಕೀರ್ತನೆ
50 8-9,16-17, 21,23
ಶ್ಲೋಕ : ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು
ಸಂತ ಮತ್ತಾಯರು
ಬರೆದ ಶುಭಸಂದೇಶದಿಂದ ವಾಚನ 10: 34 11:1
ಯೇಸುಸ್ವಾಮಿ
ತಮ್ಮ ಶಿಷ್ಯರಿಗೆ ಹೀಗೆಂದರು : “ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆನೆಂದು ಭಾವಿಸಬೇಡಿ;
ಸಮಾಧಾನವನ್ನಲ್ಲ; ಛೇದಿಸುವ ಖಡ್ಗವನ್ನು ತರಲು ಬಂದೆನು.
ತಂದೆಗೆ ವಿರುದ್ಧ ಮಗನಿಗೂ, ತಾಯಿಗೆ ವಿರುದ್ಧ ಮಗಳಿಗೂ,
ಅತ್ತೆಗೆ ವಿರುದ್ಧ ಸೊಸೆಗೂ ಭೇದ ಹುಟ್ಟಿಸಲು ಬಂದೆನು; ಒಡಹುಟ್ಟಿದವರೇ ಒಬ್ಬನ ಕಡುವೈರಿಗಳಾಗುವರು. ನನ್ನನ್ನು ಪ್ರೀತಿಸುವುದಕ್ಕಿಂತ
ಹೆಚ್ಚಾಗಿ ತನ್ನ ತಂದೆಯನ್ನು ಅಥವಾ ತಾಯಿಯನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.
ತನ್ನ ಶಿಲುಬೆಯನ್ನು ಹೊತ್ತು ನನ್ನನ್ನು ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ.
ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವವನು ಅದನ್ನು ಕಳೆದುಕೊಳ್ಳುತ್ತಾನೆ.
ನನಗೋಸ್ಕರವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಾಪಾಡಿಕೊಳ್ಳುತ್ತಾನೆ.
ನಿಮ್ಮನ್ನು ಸ್ವಾಗತಿಸುವವನು ನನ್ನನ್ನು ಸ್ವಾಗತಿಸುತ್ತಾನೆ; ನನ್ನನ್ನು ಸ್ವಾಗತಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವಾಗತಿಸುತ್ತಾನೆ.
ಪ್ರವಾದಿಯನ್ನು ಪ್ರವಾದಿಯೆಂದು ಸ್ವಾಗತಿಸುವವನು ಪ್ರವಾದಿಗೆ ಸಿಗುವ ಪ್ರತಿಫಲವನ್ನು
ಪಡೆಯುತ್ತಾನೆ. ಸತ್ಪುರುಷನನ್ನು ಸತ್ಪುರುಷನೆಂದು ಸ್ವಾಗತಿಸುವವನು ಸತ್ಪುರುಷನಿಗೆ
ಸಿಗುವ ಪ್ರತಿಫಲವನ್ನು ಪಡೆಯುತ್ತಾನೆ. ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ
ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು
ಪಡೆಯದೆ ಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.’’
Thank you praise the Lord Jesus Christ.
ReplyDelete