ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

24.07.2018


ಪ್ರವಾದಿ ಮೀಕನ ಗ್ರಂಥದಿಂದ ವಾಚನ 7 : 14-15, 18-20

ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ. ಈಜಿಪ್ಟ್ ದೇಶದಿಂದ ನಮ್ಮನ್ನು ಹೊರತಂದ ದಿನಗಳಲ್ಲಿ ನೀವು ಮಾಡಿದ ಮಹತ್ಕಾರ್ಯಗಳನ್ನು ಮರಳಿ ಮಾಡಿ ತೋರಿಸಿರಿ. ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಸಂತುಷ್ಟರಾಗುವಿರಿ. ಮತ್ತೊಮ್ಮೆ ನಮಗೆ ದಯೆತೋರಿ. ನಮ್ಮ ಅಪರಾಧಗಳನ್ನು ಅಳಿಸಿಬಿಡಿ; ಅವನ್ನು ತುಳಿದು ಸಮುದ್ರದ ತಳಕ್ಕೆ ತಳ್ಳಿಬಿಡಿ. ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಗಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ.

ಕೀರ್ತನೆ 85: 1-3, 4-5, 6-7

ಶ್ಲೋಕ : ತೋರಿಸೆಮಗೆ ಪ್ರಭೂ ಕರುಣೆಯನು |

ಸಂತ ಮತ್ತಾಯರು ಬರೆದ ಶುಭಸಂದೇಶದಿಂದ ವಾಚನ 12 : 46-50

ಯೇಸುಸ್ವಾಮಿ ತಮ್ಮನ್ನು ಸುತ್ತುವರಿದಿದ್ದ ಜನರಿಗೆ ಇನ್ನೂ ಬೋಧನೆ ಮಾಡುತ್ತಿದ್ದರು. ಆಗ ಅವರ ತಾಯಿ ಮತ್ತು ಸಹೋದರರು ಬಂದು ಅವರೊಡನೆ ಮಾತನಾಡ ಬಯಸಿ ಹೊರಗೆ ನಿಂತಿದ್ದರು. ನಿಮ್ಮ ತಾಯಿ ಮತ್ತು ಸಹೋದರರು ಹೊರಗೆ ನಿಂತಿದ್ದಾರೆ; ನಿಮ್ಮೊಡನೆ ಮಾತನಾಡಬೇಕೆಂದಿದ್ದಾರೆ," ಎಂದು ಒಬ್ಬನು ತಿಳಿಸಿದನು. ಅದಕ್ಕೆ ಯೇಸು, ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?" ಎನ್ನುತ್ತಾ, ತಮ್ಮ ಶಿಷ್ಯರ ಕಡೆಗೆ ಕೈ ತೋರಿಸಿ, ಇಗೋ ನೋಡಿ, ನನ್ನ ತಾಯಿ, ನನ್ನ ಸಹೋದರರು; ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತವನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ ಮತ್ತು ತಾಯಿ," ಎಂದರು.

No comments:

Post a Comment