"ನೀನು ನಿನ್ನ ದುಃಖವನ್ನು ಅವರಿಗೆ ಹೀಗೆಂದು ವ್ಯಕ್ತಪಡಿಸು - ’ರಾತ್ರಿ ಹಗಲು ನನ್ನ ಕಣ್ಣೀರು ಸುರಿಯಲಿ ನಿರಂತರವಾಗಿ ಏಕೆಂದರೆ ನನ್ನ ಜನವೆಂಬ ಯುವತಿ ಗಾಯಗೊಂಡಿದ್ದಾಳೆ ತೀವ್ರವಾಗಿ, ಹೌದು, ಅವಳಿಗೆ ಪೆಟ್ಟುಬಿದ್ದಿದೆ ಗಡುಸಾಗಿ. ಊರುಬಿಟ್ಟು ಹೊರಗೆ ಹೋದರೆ ಅಲ್ಲಿ ಕಾಣಿಸುತ್ತಾರೆ ಖಡ್ಗದಿಂದ ಸತ್ತವರು. ಊರ ಒಳಗೆ ಬಂದರೆ ಅಲ್ಲಿ ಕಾಣಿಸುತ್ತಾರೆ ಕ್ಷಾಮದಿಂದ ನರಳುವವರು. ಅಪರಿಚಿತ ನಾಡಿಗೆ ಗಡೀಪಾರಾಗಿದ್ದಾರೆ ಪ್ರವಾದಿಗಳು ಮತ್ತು ಯಾಜಕರು’." "ಸ್ವಾಮಿ, ನೀವು ಜುದೇಯವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರೋ? ಸಿಯೋನಿನ ಬಗ್ಗೆ ನಿಮಗೆ ಮನಃಪೂರ್ವಕವಾದ ಅಸಹ್ಯ ಹುಟ್ಟಿದೆಯೊ? ಗುಣವಾಗದಂಥ ಪೆಟ್ಟನ್ನು ನಮಗೆ ಕೊಟ್ಟಿರುವಿರಿ ಏಕೆ? ಸುಖವನ್ನು ನಿರೀಕ್ಷಿಸಿದೆವು, ಸಿಗಲಿಲ್ಲ ನಮಗೆ ಯಾವ ಫಲ. ಸುಕ್ಷೇಮವನ್ನು ಎದುರು ನೋಡಿದೆವು, ಇಗೋ ಬಂದೊದಗಿದೆ ಸಂಕಟ. ಹೇ ಸರ್ವೇಶ್ವರಾ, ಒಪ್ಪಿಕೊಂಡಿದ್ದೇವೆ ನಮ್ಮ ದುಷ್ಟತನವನ್ನು ನಮ್ಮ ಪೂರ್ವಜರು ಎಸಗಿದ ದುರಾಚಾರವನ್ನು ನಾವು ಮಾಡಿದ ಪಾಪ ನಿಮಗೆ ವಿರುದ್ಧವೆಂಬುದನ್ನು. ನಿಮ್ಮ ನಾಮವನ್ನು ಮುಂದಿಟ್ಟು, ನಮಗೆ ಅವಮಾನ ಮಾಡಬೇಡಿ ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ ನಮ್ಮೊಡನೆ ಮಾಡಿದ ಒಡಂಬಡಿಕೆಯನ್ನು ನೆನೆಯಿರಿ. ಅದನ್ನು ಭಂಗಪಡಿಸಬೇಡಿ. ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವಾರಾ, ಸೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ."
ಕೀರ್ತನೆ: 27-8, 9,11,13 ಶ್ಲೋಕ: ದೇವಾ, ನೆರವಾಗು ನಿನ್ನ ನಾಮ ಮಹಿಮೆಯ ನಿಮಿತ್ತ.
ಶುಭಸಂದೇಶ: ಮತ್ತಾಯ: 13: 36-43
ಯೇಸುಸ್ವಾಮಿ ಜನರನ್ನು ಬೀಳ್ಕೊಟ್ಟು ಮನೆಗೆ ಬಂದರು. ಶಿಷ್ಯರು ಅವರ ಬಳಿಗೆ ಬಂದು, "ಹೊಲದಲ್ಲಿ ಬಿತ್ತಲಾದ ಕಳೆಗಳ ಸಾಮತಿಯನ್ನು ನಮಗೆ ವಿವರಿಸಿರಿ," ಎಂದು ಕೇಳಿಕೊಂಡರು. ಅದಕ್ಕೆ ಯೇಸು, "ಒಳ್ಳೆಯ ಗೋಧಿಯನ್ನು ಬಿತ್ತುವವನು ಎಂದರೆ ನರಪುತ್ರನು; ಹೊಲವೇ ಈ ಲೋಕ; ಒಳ್ಳೆಯ ಕಾಳುಗಳೇ ಶ್ರೀಸಾಮ್ರಾಜ್ಯದ ಮಕ್ಕಳು; ಕಳೆಗಳೇ ಕೇಡಿಗನ ಮಕ್ಕಳು. ಆ ಕಳೆಗಳನ್ನು ಬಿತ್ತಿದ ವೈರಿಯೇ ಪಿಶಾಚಿ. ಸುಗ್ಗಿಯೇ ಕಾಲಾಂತ್ಯ, ಕೊಯ್ಲುಗಾರರೇ ದೇವದೂತರು. ಕಳೆಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟು ಹಾಕಿದಂತೆ ಕಾಲಾಂತ್ಯದಲ್ಲೂ ನಡೆಯುವುದು. ನರಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದಿಂದ ಪಾಪಕ್ಕೆ ಕಾರಣವಾದುದೆಲ್ಲವನ್ನೂ ಮತ್ತು ದುಷ್ಕರ್ಮಿಗಳೆಲ್ಲರನ್ನೂ ಒಟ್ಟುಗೂಡಿಸಿ ಅಗ್ನಿಕುಂಡದಲ್ಲಿ ಹಾಕುವರು; ಅಲ್ಲಿ ಅವರು ಕಟಕಟನೆ ಹಲ್ಲು ಕಡಿದುಕೊಂಡು ಗೋಳಾಡುವರು. ಸದ್ದರ್ಮಿಗಳು ತಮ್ಮ ತಂದೆಯ ಸಾಮ್ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಿಸಿಕೊಳ್ಳಲಿ!" ಎಂದರು.
No comments:
Post a Comment