ಮೊದಲನೇ ವಾಚನ: ಆಮೋಸ 9:11-15
ಸರ್ವೇಶ್ವರ ಇಂತೆನ್ನುತ್ತಾರೆ: "ದಿನ ಬರಲಿದೆ, ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು. ಹಾಳಾದುದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು. ಹೀಗೆ ನನ್ನ ಜನರು ಎದೋಮಿನ ಮಿಕ್ಕ ಭಾಗವನ್ನೂ ಸರ್ವೇಶ್ವರನ ಪ್ರಜೆ ಎನ್ನಿಸಿಕೊಂಡ ಸಕಲ ಜನಾಂಗಗಳನ್ನೂ ಸ್ವಾಧೀನಪಡಿಸಿಕೊಳ್ಳುವರು. ಈ ಕಾರ್ಯವನ್ನು ಸಾಧಿಸುವಂಥ ಸರ್ವೆಶ್ವರಸ್ವಾಮಿಯ ನುಡಿಯಿದು; ಕಾಲ ಬರುವುದು; ಆಗ ಹೊಸಬಿತ್ತನೆಯಾಗುವುದು ಕೊಯ್ಯುವವನ ಹಿಂದೆಯೇ; ಹೊಸ ಫಸಲು ಸಿದ್ಧವಾಗುವುದು ದ್ರಾಕ್ಷಿ ತುಳಿಯುವವನ ಮುಂದೆಯೇ. ಸುರಿಸುವುವು ದ್ರಾಕ್ಷಾರಸವನ್ನು ಬೆಟ್ಟಗಳು ಕರಗುವಂತಿರುವುವು ಅದರಿಂದ ಎಲ್ಲ ಗುಡ್ಡಗಳು. ಸನಾತನ ಸೌಭಾಗ್ಯಕ್ಕೆ ಮರಳಿಸುವೆನು ನನ್ನ ಜನರಾದ ಇಸ್ರಯೇಲರನು. ವಾಸಮಾಡುವವರು ಪಳುಬಿದ್ದ ಪಟ್ಟಣಗಳನ್ನು ಮತ್ತೆ ಕಟ್ಟಿಕೊಂಡು. ಕುಡಿಯುವರು ಸಮೃದ್ಧಯಾಗಿ ದ್ರಾಕ್ಷಾತೋಟಗಳನ್ನು ಮಾಡಿಕೊಂಡು. ತಿನ್ನುವರು ಯಥೇಚ್ಛವಾಗಿ ಫಲವೃಕ್ಷಗಳನ್ನು ಬೆಳೆಸಿಕೊಂಡು. ಬೇರೂರೀಸುವೆನು ಅವರನ್ನು ಸ್ವಂತನಾಡಲ್ಲಿ ಕೀಳರಾರೂ ಅವರನ್ನು ಅಲ್ಲಿಂದ ಮರಳಿ." ಇದು ನಿನ್ನ ದೇವರಾದ ಸರ್ವೇಶ್ವರನ ನುಡಿ.
ಕೀರ್ತನೆ: 85:9, 10, 11-12, 13-14
ಶ್ಲೋಕ: ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ.
ಶುಭಸಂದೇಶ: ಮತ್ತಾಯ 9:14-17
ಬಳಿಕ ಯೊವಾನ್ನನ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದರು. "ನಾವೂ ಫರಿಸಾಯರೂ ಉಪವಾಸ ವೃತವನ್ನು ಕೈಗೊಳ್ಳುತ್ತೇವೆ. ಆದರೆ ನಮ್ಮ ಶಿಷ್ಯರು ಏಕೆ ಹಾಗೆ ಮಾಡುವುದಿಲ್ಲ?" ಎಂದು ಪ್ರಶ್ನೆ ಹಾಕಿದರು. ಅದಕ್ಕೆ ಯೇಸು, "ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದುಃಖಪಡುವುದುಂಟೇ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು; ಅಗ ಅವರು ಉಪವಾಸ ಮಾಡುವರು. "ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ. ಏಕೆಂದರೆ ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ. ಅಂತೆಯೇ ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ತುಂಬಿಡುವುದಿಲ್ಲ. ತುಂಬಿಟ್ಟರೆ ಬುದ್ದಲಿಗಳು ಬಿರಿಯುತ್ತವೆ, ಮದ್ಯವು ಚೆಲ್ಲಿ ಹೋಗುತ್ತದೆ; ಬುದ್ದಲಿಗಳೂ ಹಾಳಾಗುತ್ತವೆ. ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡುತ್ತಾರೆ. ಆಗ ಎರಡೂ ಉಳಿಯುತ್ತವೆ." ಎಂದರು.
ಶ್ಲಾಘನೀಯ ಕಾರ್ಯ ಮತ್ತು ಪ್ರಶಂಸೆಗೆ ಪಾತ್ರವಾದದ್ದು.. ನಿಮ್ಮ ಮುಂಬರಲಿರುವ ಯೋಜನೆ ಗಳಲ್ಲಿ ಸದಾ ದೇವರ ಆಶೀರ್ವಾದ ಇರಲೆಂದು ಆಶಿಸುತ್ತೇನೆ... ಹಾಗೆಯೆ.. ಒಮ್ಮೆ ಪ್ರಸಾರ ಮುನ್ನ. ಸಣ್ಣಪುಟ್ಟ ಕಾಗುಣಿತವನ್ನು ಸರಿಪಡಿಸಿಕೊಳ್ಲಿ.. ಇದು ನನ್ನ ಚಿಕ್ಕ ಸಲಹೆ.... ದೇವರ ಆಶೀರ್ವಾದ ನಮ್ಮೆಲ್ಲರ ಮೇಲೆ ಸದಾ ಇರಲ್
ReplyDelete