ಮೊದಲನೇ ವಾಚನ: ಯೆರೆಮೀಯ 18:1-6
ಸರ್ವೇಶ್ವರಸ್ವಾಮಿ ನನಗೆ: "ನೀನೆದ್ದು ಕುಂಬಾರನ ಮನೆಗೆ ಇಳಿದಹೋಗು, ಅಲ್ಲೇ ನನ್ನ ನುಡಿಯನ್ನು ನಿನಗೆ ಕೇಳಮಾಡುತ್ತೇನೆ," ಎಂದು ತಿಳಿಸಿದರು. ಅಂತೆಯೇ ನಾನು ಕುಂಬಾರನ ಮನೆಗೆ ಹೋದೆ. ಅಲ್ಲಿ ಆ ಕುಂಬಾರನು ತಿರುಗುತ್ತಿದ್ದ ಚಕ್ರದ ಮೇಲೆ ಕೆಲಸ ಮಾಡುತ್ತಿದ್ದ. ಅವನು ಜೇಡಿಮಣ್ಣಿನಿಂದ ಮಾಡುತ್ತಿದ್ದ ಒಂದ ಪಾತ್ರೆ ಕೆಟ್ಟು ಹೋಗುತ್ತಿದ್ದಾಗಲೆಲ್ಲ ಅದನ್ನು ಮತ್ತೆ ತನಗೆ ಸರಿ ತೋಚಿದ ಹಾಗೆ ಹೊಸ ಪಾತ್ರೆಯನ್ನಾಗಿ ಮಾಡುತ್ತಿದ್ದ. ಆಗ ಸರ್ವೇಶ್ವರ ನನಗೆ ಅನುಗ್ರಹಿಸಿದ ಸಂದೇಶ; "ಇಸ್ರಯೇಲಿನ ವಂಶಜರೇ, ಈ ಕುಂಬಾರನು ಮಾಡಿದಂತೆ ನಾನು ನಮ್ಮನ್ನು ಮಾಡಕೂಡದೇ? ಇಸ್ರಯೇಲಿನ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ ಹಾಗೆಯೇ ನೀವು ನನ್ನ ಕೈಯಲ್ಲಿ ಇದ್ದೀರಿ.
ಕೀರ್ತನೆ: 146: 1b-2, 3-4, 5-6ab
ಶ್ಲೋಕ: ಇಸ್ರಯೇಲ ಕುಲದೇವರು ಯಾರಿಗೆ ಉದ್ಧಾರಕನೋ ಅವನೇ ಧನ್ಯನು.
ಶುಭಸಂದೇಶ: ಮತ್ತಾಯ 13:47-53
"ಸ್ವರ್ಗ ಸಾಮ್ರಾಜ್ಯವನ್ನು ಒಂದು ಮೀನುಬಲೆಗೆ ಹೋಲಿಸಬಹುದು. ಬೆಸ್ತರು ಬಲೆಯನ್ನು ಸಮುದ್ರದಲ್ಲಿ ಬೀಸಿ ಎಲ್ಲಾ ಜಾತಿಯ ಮೀನುಗಳನ್ನು ಹಿಡಿಯುತ್ತಾರೆ. ಬಲೆ ತುಂಬಿದ ಮೇಲೆ ಅದನ್ನು ದಡಕ್ಕೆ ಎಳೆದು, ಕುಳಿತುಕೊಂಡು, ಒಳ್ಳೆಯ ಮೀನುಗಳನ್ನು ಮಾತ್ರ ಆರಿಸಿಕೊಂಡು ಬುಟ್ಟಿಗೆ ಹಾಕಿಕೊಳ್ಳುತ್ತಾರೆ; ಕೆಟ್ಟವನ್ನು ಎಸೆದುಬಿಡುತ್ತಾರೆ. ಕಾಲಾಂತ್ಯದಲ್ಲಿ ಇದರಂತೆಯೇ ಆಗುವುದು; ದೇವದೂತರು ಹೊರಟುಬಂದು ದುರ್ಜನರನ್ನು ಸಜ್ಜನರಿಂದ ಬೇರ್ಪಡಿಸುವರು. ದುರ್ಜನರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಲ್ಲಿ ಅವರು ಕಟಕಟನೆ ಹಲ್ಲು ಕಡಿದುಕೊಂಡು ಗೋಳಾಡುವರು. "ಇದೆಲ್ಲ ನಿಮಗೆ ಅರ್ಥವಾಯಿತೇ?" ಎಂದು ಯೇಸುಸ್ವಾಮಿ ಕೇಳಿದರು. ಶಿಷ್ಯರು "ಅರ್ಥವಾಯಿತು" ಎಂದರು. ಆಗ ಯೇಸು, "ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ," ಎಂದರು. ಈ ಸಾಮತಿಗಳನ್ನು ಹೇಳಿಯಾದ ಮೇಲೆ ಯೇಸುಸ್ವಾಮಿ ಅಲ್ಲಿಂದ ಹೊರಟು ಹೋದರು.
Very blessed. Thanks to Jesus Christ
ReplyDeleteVery blessed. Thanks to Jesus Christ
ReplyDeleteThank you!!!
DeleteIt is like we attend mass daily wherever we are. Good work
DeleteThank you all