ಮೊದಲನೇ ವಾಚನ: ಯೆರೆಮೀಯ 31:1-7
ಸರ್ವೇಶ್ವರಸ್ವಾಮಿ ಹೀಗೆನ್ನುತ್ತಾರೆ: "ಕಾಲ ಬರಲಿದೆ, ಆಗ ಇಸ್ರಯೇಲಿನ ಸಕಲ ಗೋತ್ರಗಳಿಗೆ ನಾನೇ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು. ಇದು ಸರ್ವೇಶ್ವರನಾದ ನನ್ನ ನುಡಿ. ಅಳಿದುಳಿದಾ ಜನಕ್ಕೆ ಅರಣ್ಯದಲ್ಲಿ ದಯೆ ದೊರೆಯಿತು. ಇಸ್ರಯೇಲ್ ಶಾಂತಿಯನ್ನು ಅರಸುತ್ತಾ ಹೋಗುವಾಗ ಸರ್ವೇಶ್ವರನಾದ ನಾನು ದೂರದಿಂದ ಅದಕ್ಕೆ ದರ್ಶನಕೊಟ್ಟು: "ನಾನು ನಿನ್ನನ್ನು ಪ್ರೀತಿಸುವುದು ಶಾಶ್ವತ ಪ್ರೆಮದಿಂದ. ಈ ಕಾರಣದಿಂದ ನಿನ್ನನ್ನು ಆಕರ್ಷಿಸಿಕೊಂಡಿದ್ದೇನೆ ಅಚಲ ಪ್ರೇಮದಿಂದ. ಇಸ್ರಯೇಲೆಂಬ ಯುವತಿಯೇ, ನಿನ್ನ ಪಾಳು ಬಿದ್ದ ಪ್ರದೇಶಗಳನ್ನು ನಾನು ಪುನಃ ಕಟ್ಟುವೆನು, ಅವು ಕಟ್ಟಡಗಳಿಂದ ಕೂಡಿರುವುವು. ನೀನು ಮತ್ತೆ ತಾಳಮೇಳಗಳನ್ನು ತೆಗೆದುಕೊಂಡು ನಲಿದಾಡುವವರ ನಾಟ್ಯಗಳಲ್ಲಿ ಭಾಗವಹಿಸುವೆ. ಸಮಾರಿಯದ ಗುಡ್ಡಗಳಲ್ಲಿ ಮರಳಿ ದ್ರಾಕ್ಷಾ ತೋಟಗಳನ್ನು ಮಾಡಿಕೊಳ್ಳುವೆ. ನೆಡುವವರೇ ನೆಟ್ಟ ಫಲಗಳನ್ನು ಸವಿಯುವರು. ಹೌದು, ದಿನ ಬರುವುದು. ಆಗ ಕಾವಲುಗಾರರು ಎಫ್ರಯಿಮಿನ ಗುಡ್ಡಗಳ ಮೇಲೆ ನಿಂತು, 'ಎದ್ದೇಳಿ, ಹೋಗೋಣ. ಬನ್ನಿ ಸಿಯೋನಿಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಾನಕ್ಕೆ' ಎಂದು ಕೂಗಿ ಕರೆನೀಡುವರು." ಸರ್ವೇಶ್ವರ ಹೀಗೆನ್ನುತ್ತಾರೆ: "ಯಕೋಬನನ್ನು ಕುರಿತು ಹರ್ಷಧ್ವನಿಗೈಯಿರಿ ಜನಾಂಗಗಳಾ ಶಿರೋಮಣಿಗೆ ಜೈಕಾರ ಮಾಡಿರಿ. "ಸರ್ವೇಶ್ವರ ಅಳಿದುಳಿದಾ ಇಸ್ರಯೇಲರನ್ನು ರಕ್ಷಿಸಿಹನು" ಎಂದು ಘೋಷಿಸುತ್ತಾ ಸ್ತುತಿಸಿರಿ.
ಯೆರೆಮಿಯ: 31:10, 11-12ab,13
ಶ್ಲೋಕ: ಕುರಿಮಂದೆಯನ್ನು ಕಾಯುವ ಕುರುಬನಂತೆ ಪ್ರಭು ನಮ್ಮನ್ನು ಕಾಪಾಡುವರು.
ಶುಭಸಂದೇಶ: ಮತ್ತಾಯ 15:21-28
ಯೇಸುಸ್ವಾಮಿ ನಜ಼ರೇತಿನಿಂದ ಹೊರಟು ಟೈರ್ ಹಾಗು ಸಿದೋನ್ ಪ್ರಾಂತ್ಯಕ್ಕೆ ಹೋದರು. ಆಲ್ಲಿ ವಾಸವಾಗಿದ್ದ ಕಾನಾನ್ ನಾಡಿನ ಮಹಿಳೆ ಒಬ್ಬಳು ಅವರ ಬಳಿಗೆ ಬಂದಳು. "ಸ್ವಾಮೀ ದಾವೀದ ಕುಲಪುತ್ರರೇ, ನನಗೆ ದಯೆತೋರಿ, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಸಂಕಟ ಪಡುತ್ತಿದ್ದಾಳೆ." ಎಂದು ಕೂಗಿಕೊಂಡಳು. ಯೇಸು ಆಕೆಗೆ ಒಂದು ಮಾತನ್ನೂ ಹೇಳಲಿಲ್ಲ. ಶಿಷ್ಯರು ಹತ್ತಿರಕ್ಕೆ ಬಂದು, "ಇವಳನ್ನು ಕಳಿಸಿಬಿಡಿ, ಒಂದೇ ಸಮನೆ ಗೋಳಾಡುತ್ತಾ, ನಮ್ಮನ್ನು ಬೆಂಬತ್ತಿ ಬರುತ್ತಿದ್ದಾಳೆ," ಎಂದು ಕೇಳಿಕೊಂಡರು. ಆಗ ಯೇಸು, "ನನ್ನನ್ನು ಕಳಿಸಿರುವುದು ತಪ್ಪಿಹೋದ ಕುರಿಗಳಂತಿರುವ ಇಸ್ರಯೇಲ್ ಜನಾಂಗದವರ ಬಳಿಗೆ ಮಾತ್ರ," ಎಂದರು. ಆದರೂ ಆಕೆ ಯೇಸುವಿಗೆ ಅಡ್ಡಬಿದ್ದು, "ಸ್ವಾಮೀ, ಸಹಾಯ ಮಾಡಿ," ಎಂದು ಯಾಚಿಸಿದಳು. ಅದಕ್ಕೆ ಯೇಸು, "ಮಕ್ಕಳ ಅಹಾರವನ್ನು ತೆಗೆದು ನಾಯಿಗಳಿಗೆ ಎಸೆಯುವುದು ಸರಿಯಲ್ಲ," ಎಂದರು. ಆಗ ಆಕೆ, "ಅದು ನಿಜ ಸ್ವಾಮೀ, ನಾಯಿಗಳಾದರೂ ತಮ್ಮ ಯಜಮಾನನ ಮೇಜಿನಿಂದ ಕೆಳಕ್ಕೆ ಬೀಳುವ ಚೂರುಪಾರನ್ನು ತಿನ್ನುತ್ತವೆ, ಅಲ್ಲವೇ?" ಎಂದು ಉತ್ತರ ಕೊಟ್ಟಳು.ಆಗ ಯೇಸು, "ತಾಯಿ, ನಿನ್ನ ವಿಶ್ವಾಸ ಅಚಲವಾದುದು. ನಿನ್ನ ಕೋರಿಕೆ ನೆರವೇರಲಿ," ಎಂದರು. ಅದೇ ಕ್ಷಣದಲ್ಲಿ ಆಕೆಯ ಮಗಳು ಗಣಹೊಂದಿದಳು.

No comments:
Post a Comment