ಮೊದಲನೇ ವಾಚನ: 2 ಕೊರಿಂಥಿ 9:6-10
ವಿರಳವಾಗಿ ಬಿತ್ತುವವನು ವಿರಳವಾಗಿ ಕೊಯ್ಯುತ್ತಾನೆ. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ. ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಷ್ಟು ನೀಡಲಿ. ಒಲ್ಲದ ಮನಸ್ಸಿನಿಂದಾಗಲೀ, ಬಲಾತ್ಕಾರದಿಂದಾಗಲೀ ಕೊಡುವುದು ಬೇಡ. ನಗುನಗುತ್ತಾ ನೀಡುವಾತನನ್ನು ದೇವರು ಪ್ರೀತಿಸುತ್ತಾರೆ. ಸಕಲ ವಿಧವಾದ ವರದಾನಗಳನ್ನು ನಮಗೆ ಯಥೇಚ್ಛವಾಗಿ ನೀಡಬಲ್ಲ ಶಕ್ತಿ ದೇವರಿಗಿದೆ. ನೀವು ಸದಾ ಸಮೃದ್ಧಿಯಿಂದಿರುವಿರಿ. ಹೀಗೆ ಸಕಲ ಸತ್ಕಾರ್ಯಗಳಿಗೆ ಹೃತ್ಪೂರ್ವಕವಾಗಿ ನೆರವಾಗುವಿರಿ. "ದೀನದಲಿತರಿಗೆ ಧಾರಾಳವಾಗಿ ನೀಡುವವನು; ಅನವರತ ಇರುವುದು ಅವನ ದಾನಧರ್ಮದ ಫಲವು," ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ಊಟವನ್ನೂ ಒದಗಿಸುವ ದೇವರು, ಬಿತ್ತನೆಗೆ ಬೇಕಾದ ಬೀಜವನ್ನು ನಿಮಗೂ ಕೊಟ್ಟು ಅದನ್ನು ಬೆಳೆಸುವರು. ನಿಮ್ಮ ದಾನಧರ್ಮದ ಫಲಗಳು ಸಮೃದ್ಧಿಗೊಳ್ಳುವಂತೆ ಮಾಡುವರು.
ಕೀರ್ತನೆ: 112:1-2,5-6, 7-8, 9
ಶ್ಲೋಕ: ದಯೆತೋರಿ ಧನಸಹಾಯ ಮಾಡುವವನು ಭಾಗ್ಯವಂತನು.
ಶುಭಸಂದೇಶ: ಯೊವಾನ್ನ 12:24-26
ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಗೋಧಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಅದು ಒಂಟಿಯಾಗಿ ಉಳಿಯುತ್ತದೆ; ಅದು ಸತ್ತರೆ ಮಾತ್ರ ಸಮೃದ್ಢಿಯಾದ ಫಲವನ್ನು ಕೊಡುತ್ತದೆ. ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ತನ್ನ ಪ್ರಾಣವನ್ನು ಈ ಲೋಕದಲ್ಲಿ ದ್ವೇಷಿಸುವವನು ಅದನ್ನು ನಿತ್ಯ ಜೀವಕ್ಕಾಗಿ ಕಾಯ್ದಿರಿಸಿಕೊಳ್ಳುತ್ತಾನೆ. ನನ್ನ ಸೇವೆ ಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆ ಮಾಡುವವನು ನನ್ನ ಪಿತನಿಂದ ಸನ್ಮಾನ ಹೊಂದುತ್ತಾನೆ," ಎಂದರು.
nice
ReplyDeleteThank you
ReplyDelete