ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ. ಇಹಲೋಕದ ಜಾಣತನವು ದೇವರ ದೃಷ್ಟಿಯಲ್ಲಿ ಹುಚ್ಚುತನವೇ ಸರಿ. "ದೇವರು ಜ್ಞಾನಿಗಳನ್ನು ಅವರ ಜಾಲವುದಲ್ಲಿಯೇ ಸಿಕ್ಕಿಸುವರು" ಎಂದೂ ಲಿಖಿತವಾಗಿದೆಯಲ್ಲವೇ? ಆದ್ದರಿಂದ ಕೇವಲ ನರಮಾನವರನ್ನೇ ನೆಚ್ಚಿಕೊಂಡು ಯಾರೂ ಹೆಚ್ಚಳ ಪಡದಿರಲಿ. ವಾಸ್ತವವಾಗಿ ಸಮಸ್ತವೂ ನಿಮ್ಮದೇ. ಪೌಲ, ಅಪೊಲೋಸ್, ಕೇಫ - ಇವರಾಗಲಿ; ಜಗತ್ತು, ಜೀವ ಮರಣ - ಇವುಗಳಾಗಲಿ, ಅಥವಾ ವರ್ತಮಾನ, ಭವಿಷ್ಯತ್ಕಾಲಗಳಾಗಲಿ, ಇವೆಲ್ಲವೂ ನಿಮ್ಮವೇ, ಆದರೆ ನೀವು ಕ್ರಿಸ್ತ ಯೇಸುವಿಗೆ ಸೇರಿದವರು; ಕ್ರಿಸ್ತಯೇಸು ದೇವರಿಗೆ ಸೇರಿದವರು.
ಕೀರ್ತನೆ: 24: bc-2, 3-4ab, 5-6
ಶ್ಲೋಕ: ಜಗವೂ ಅದರ ಜೀವಜಂತುಗಳೆಲ್ಲವೂ ಪ್ರಭುವಿನದೇ.
ಶುಭಸಂದೇಶ: ಲೂಕ 5:1-11
ಒಮ್ಮೆ ಯೇಸುಸ್ವಾಮಿ ಗೆನೆಸರೇತ್ ಎಂಬ ಸರೋವರದ ತೀರದಲ್ಲಿ ನಂತಿದ್ದಾಗ, ಜನಸಮೂಹವು ದೇವರ ವಾಕ್ಯವನ್ನು ಕೇಳಲು ನೂಕುನುಗ್ಗಲಾಗಿ ಬಂದು ಅವರನ್ನು ಒತ್ತರಿಸುತ್ತಿತ್ತು. ಆಗ ದಡದ ಮೇಲಿದ್ದ ಎರಡು ದೋಣಿಗಳು ಯೇಸುವಿನ ಕಣ್ಣಿಗೆ ಬಿದ್ದವು. ಬೆಸ್ತರು ದೋಣಿಗಳನ್ನು ಅಲ್ಲಿಯೇ ಬಿಟ್ಟು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.ಆ ದೋಣಿಗಳಲ್ಲಿ ಒಂದು ಸಿಮೋನನದು. ಯೇಸು ಅದನ್ನು ಹತ್ತಿ, ದಡದಿಂದ ಸ್ವಲ್ಪ ದೂರ ತಳ್ಳಲು ಹೇಳಿ, ಅದರಲ್ಲೇ ಕುಳಿತುಕೊಂಡು ತಮ್ಮ ಬೋಧನೆಯನ್ನು ಮುಂದುವರಿಸಿದರು. ಬೋಧನೆ ಮುಗಿದದ್ದೇ ಸಿಮೋನನಿಗೆ, "ನೀರು ಆಳವಾಗಿರುವ ಸ್ಥಳಕ್ಕೆ ದೋಣಿಯನ್ನು ಹಾಯಿಸಿ, ಮೀನುಬೇಟೆಗೆ ನಿಮ್ಮ ಬಲೆಗಳನ್ನು ಹಾಕಿರಿ," ಎಂದರು. ಅದಕ್ಕೆ ಸಿಮೋನನು "ಗರುವೇ, ನಾವು ರಾತ್ರಿಯೆಲ್ಲಾ ದುಡಿದಿದ್ದೇವೆ; ಏನೂ ಸಿಗಲಿಲ್ಲ. ಆದರೂ ನಿಮ್ಮ ಮಾತಿಗೆ ಬೆಲೆ ಕೊಟ್ಟು ಬಲೆಗಳನ್ನು ಹಾಕುತ್ತೇವೆ," ಎಂದನು. ಬಲೆಗಳನ್ನು ಹಾಕಿದ್ದೇ ಮೀನುಗಳು ರಾಶಿ ರಾಶಿಯಾಗಿ ಸಿಕ್ಕಿಕೊಂಡವು; ಬಲೆಗಳು ಹರಿದುಹೋಗುವುದರಲ್ಲಿದ್ದವು. ಆದುದರಿಂದ ಬೇರೆ ದೋಣಿಯಲಿದ್ದ ತಮ್ಮ ಸಂಗಡಿಗರಿಗೆ ಸನ್ನೆ ಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಸೇರಿ ಮೀನುಗಳನ್ನು ತುಂಬಿಕೊಳ್ಳಲು, ದೋಣಿಗಳೆರಡೂ ಮುಳುಗಲು ಆರಂಭಿಸಿದವು. ಇದನ್ನು ಕಂಡ ಸಿಮೋನ್ ಪೇತ್ರನು ಯೇಸುವಿನ ಕಾಲಿಗೆ ಬಿದ್ದು, "ಸ್ವಾಮೀ ನಾನು ಪಪಾತ್ಮ; ನನ್ನಿಂದ ದೂರವಿರಿ!" ಎಂದನು. ಹಿಡಿದ ಮೀನಿನ ರಶಿಯನ್ನು ಕಂಡು ಅವನ ಸಂಗಡಿಗರೆಲ್ಲರೂ ನಿಬ್ಬೆರಗಾಗಿ ಹೋಗಿದ್ದರು. ಸಿಮೋನನ ಪಾಲುಗಾರರಾದ ಜೆಬೇದಾಯನ ಮಕ್ಕಳು - ಯಕೋಬ ಮತ್ತು ಯೊವಾನ್ನರು - ಹಾಗೆಯೇ ಬೆರಗಾಗಿದ್ದರು. ಆಗ ಯೇಸು ಸಿಮೋನನಿಗೆ, "ಹೆದರಬೇಡ, ಇಂದಿನಿಂದ ನೀನು ಮೀನು ಹಿಡಿಯುವ ಬದಲು ಮನುಷ್ಯರನ್ನೆ ಹಿಡಿಯುವವನು ಆಗುವೆ," ಎಂದರು. ಆ ಬೆಸ್ತರು ದೋಣಿಗಳನ್ನು ದಡಕ್ಕೆ ಸಾಗಿಸಿದ್ದೇ ಎಲ್ಲವನ್ನೂ ತ್ಯಜಿಸಿಬಿಟ್ಟು ಯೇಸುವನ್ನು ಹಿಂಬಾಲಿಸಿದರು.
No comments:
Post a Comment