12.09.2018

ಸಾಧಾರಣ ಕಾಲದ ಇಪ್ಪತ್ತಮೂರನೆಯ ವಾರ - ಬುಧವಾರ

ಮೊದಲನೇ ವಾಚನ: 1 ಕೊರಿಂಥಿಯರಿಗೆ 7:25-31

ಅವಿವಾಹಿತರ ಬಗ್ಗೆ ಪ್ರಭುವಿನಿಂದ ಬಂದ ಕಟ್ಟಳೆ ಯಾವುದೂ ನನ್ನಲ್ಲಿಲ್ಲ. ಪ್ರಭುವಿನ ಕೃಪೆಯಿಂದ ನಂಬಿಕೆಗೆ  ಅಹ೯ನಾದ  ವ್ಯಕ್ತಿಯಂತೆ ನನ್ನ ಅಭಿಪ್ರಾಯಗಳನ್ನು ನಿಮ್ಮ ಮುಂದೆ ಇಡುತ್ತೇನೆ. ಇಂದಿನ ಸಂದಿಗ್ದ ಪರಿಸ್ಥಿತಿಯಲ್ಲಿ ಒಬ್ಬನು ತಾನು ಇದ್ದ ಸ್ಥಿತಿಯಲ್ಲೇ ಇರುವುದು ಉತ್ತಮವೆಂದು ಭಾವಿಸುತ್ತೇನೆ. ನಿನಗೆ ವಿವಾಹವಾಗಿದೆಯೋ ವಿವಾಹ ವಿಚ್ಛೇದನಕ್ಕೆ ಯತ್ನಿಸಬೇಡ.  ನೀನು ಅವಿವಾಹಿತನೋ? ವಿವಾಹವಾಗಲು ಅವಸರಪಡಬೇಡ. ಹಾಗೇನಾದರೂ ನೀನು ವಿವಾಹ ಮಾಡಿಕೊಂಡರೆ ಅದು ಪಾಪವಲ್ಲ. ಅಂತೆಯೇ, ಅವಿವಾಹಿತ ಸ್ತ್ರಿಯೊಬ್ಬಳು ವಿವಾಹ ಮಾಡಿಕೊಂಡರೆ ಅದು ಪಾಪವಲ್ಲ. ಆದರೆ ದಂಪತಿಗಳಿಗೆ ತಾಪತ್ರಯಗಳು ಅನೇಕ. ಇವುಗಳು ನಿಮ್ಮನ್ನು ಬಾಧಿಸದಿರಲೆಂಬುದೇ ನನ್ನ ಹಾರೈಕೆ. ಪ್ರಿಯ ಸಹೋದರರೇ, ನನ್ನ ಅಭಿಪ್ರಾಯ ಇದು: ಉಳಿದಿರುವ ಕಾಲವು ಕೊಂಚಮಾತ್ರ. ಆದ್ದರಿಂದ ಮದುವೆಯಾದವರು ಮದುವೆಯಾಗದವರೋ ಎಂಬಂತೆ ನಡೆದುಕೊಳ್ಳಲಿ. ದುಃಖಿತರು ದುಃಖವಿಲ್ಲದವರಂತೆ, ಸಂತೋಷಭರಿತರು ಸಂತೋಷರಹಿತರಂತೆ ಹಾಗು ಕೊಂಡುಕೊಳ್ಳುವವರು ಕೊಂಡದ್ದು ತಮ್ಮದಲ್ಲವೋ ಎಂಬಂತೆ ನಡೆದುಕೊಳ್ಳಲಿ. ಲೋಕದ ವ್ಯವಹಾರದಲ್ಲಿ ಇರುವವರು ಅದರಲ್ಲಿಯೇ ತಲ್ಲಿನರಾಗದಿರಲಿ. ಏಕೆಂದರೆ, ಲೋಕದ ರೂಪರೇಷೆಗಳು ಗತಿಸಿ ಹೋಗುತ್ತವೆ.

 ಕೀರ್ತನೆ: 45:11-12, 14-15, 16-17

 ಶ್ಲೋಕ: ಎಲೇ ಕುವರಿಯೇ ಕೇಳು, ಎನ್ನ ಮೊರೆಗೆ ಕಿವಿಗೊಡು.

 ಶುಭಸಂದೇಶ: ಲೂಕ 6:20-26

ಯೇಸುಸ್ವಾಮಿ ತಮ್ಮ ಶಿಷ್ಯರ ಕಡೆಗೆ ದೃಷ್ಟಿಸಿ ನೋಡಿ ಹೀಗೆಂದು ಬೋಧಿಸಿದರು. "ದೀನದಲಿತರೇ, ನೀವು ಭಾಗ್ಯವಂತರು! ದೇವರ ಸಾಮ್ರಾಜ್ಯ ನಿಮ್ಮದು. ಈಗ ಹಸಿದಿರುವವರೇ, ನೀವು ಭಾಗ್ಯವಂತರು! ಸಂತೃಪ್ತಿಯಾಗುವುದು, ಈಗ ಅತ್ತು ಗೋಳಾಡುವವರೇ, ನೀವು ಭಾಗ್ಯವಂತರು! ನೀವು ನಕ್ಕು ನಲಿದಾಡುವಿರಿ! ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ, ಬಹಿಷ್ಕರಿಸಿ, ಧಿಕ್ಕರಿಸಿ, ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸುವಾಗ ನೀವು ಭಾಗ್ಯವಂತರು! ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದ್ದರು. ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡಿರಿ. ಏಕಂದರೆ, ನಿಮಗೆ ಲಭಿಸುವ ಪ್ರತಿಫಲವು ಮಹತ್ತರವಾದುದು. ಆದರೆ ಧನಿಕರೇ, ನಿಮಗೆ ದಿಕ್ಕಾರ! ನೀವು ಸುಖಜೀವನವನ್ನು ಅನುಭವಿಸಿ ಆಗಿದೆ. ಈಗ ತಿಂದು ತೃಪ್ತಿಯಾಗಿರುವವರೇ, ನಿಮಗೆ ಧಿಕ್ಕಾರ! ನೀವು ಹಸಿದು ಬಳಲುವಿರಿ. ಈಗ ನಕ್ಕು ನಲಿದಾಡುವವರೇ, ನಿಮಗೆ ಧಿಕ್ಕಾರ! ನೀವು ದುಃಖಿಸಿ ಗೋಳಾಡುವಿರಿ. ಜನರೆಲ್ಲರಿಂದ ಹೊಗಳಿಸಿಕೊಳ್ಳುವಾಗ ನಿಮಗೆ ಧಿಕ್ಕಾರ! ಕಪಟ ಪ್ರವಾದಿಗಳೂ ಈ ಜನರ ಪೂರ್ವಜನರಿಂದ ಹೀಗೆಯೇ ಹೊಗಳಿಸಿಕೊಂಡಿದ್ದರು."



No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...