ಮೊದಲನೇ ವಾಚನ: 1 ಕೊರಿಂಥಿಯರಿಗೆ 11:17-26, 33
ಸಹೋದರರೇ, ಈಗ ನಾನು ಹೇಳಲಿರುವ ವಿಷಯದಲ್ಲಿ ನಿಮ್ಮನ್ನು ಮೆಚ್ಚಿಸಲಾರೆ. ನೀವು ಸಭೆ ಸೇರುವುದು ಒಳಿತಿಗಿಂತಲೂ ಹೆಚ್ಚಾಗಿ ಕೇಡನ್ನೆ ಉಂಟುಮಾಡುತ್ತಿದೆ. ಮೊದಲನೆಯದಾಗಿ, ನೀವು ಸೇರುವ ಸಭೆಯಲ್ಲಿ ಪಂಗಡಗಳಿವೆಯಂತೆ. ಸ್ವಲ್ಪ ಮಟ್ಟಿಗಾದರೂಈ ಸಮಾಚಾರ ನಿಜವೆಂದು ನನಗನಿಸುತ್ತದೆ. ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಇರುವುದು ಸಹಜ. ಹಾಗಿರುವಾಗಲೇ ಪ್ರಮಾಣಿಕರು ಯಾರೆಂದು ಕಂಡುಕೊಳ್ಳಲು ಸಾಧ್ಯ. ಆದರೂ ನೀವೆಲ್ಲಾ ಒಂದಾಗಿ ಸೇರುವಾಗ ನೀವು ಮಾಡುವ ಭೋಜನ ಪ್ರಭುವಿನ ಭೋಜನವಲ್ಲ. ಏಕೆಂದರೆ, ಭೋಜನ ಸಮಯದಲ್ಲಿ ಒಬ್ಬೊಬ್ಬನೂ ತಾನು ತಂದಿದ್ದನ್ನು ತಿನ್ನಲು ಇತರರಿಗಿಂತ ಮುಂಚಿತವಾಗಿಯೇ ಕುಳಿತುಕೊಳ್ಳುತ್ತಾನೆ. ಒಬ್ಬನು ಹಸಿದಿರುತ್ತಾನೆ; ಇನ್ನೊಬ್ಬನು ಕುಡಿದು ಮತ್ತನಾಗಿರುತ್ತಾನೆ. ತಿನ್ನಲು, ಕುಡಿಯಲು ನಿಮಗೆ ಸ್ವಂತ ಮನೆಗಳಿಲ್ಲವೇ? ನಿರ್ಗತಿಕರನ್ನು ನಾಚಿಕೆಗೀಡುಮಾಡಿ, ದೇವರ ಸಭೆಯನ್ನು ಉಪೇಕ್ಷಿಸಬೇಕೆಂದಿರುವಿರೋ? ಇದರ ಬಗ್ಗೆ ನಿಮಗೆ ನಾನು ಏನು ಹೇಳಲಿ? ನಿಮ್ಮನ್ನು ಹೊಗಳುವುದೋ, ತೆಗಳುವುದೋ? ಖಂಡಿತವಾಗಿ ನಿಮ್ಮನ್ನು ಹೊಗಳಲಾರೆ. ನಿಮಗೆ ಮಾಡಿದ ಉಪದೇಶವನ್ನು ನಾನು ಪ್ರಭುವಿನಿಂದಲೇ ಪಡೆದೆನು. ಅದೇನೆಂದರೆ; ಪ್ರಭುಯೇಸು, ತಮ್ಮನ್ನು ಹಿಡಿದುಕೊಡಲಾದ ಆ ರಾತ್ರಿ ರೊಟ್ಟಿಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಸಿ ಅದನ್ನು ಮುರಿದು, "ಇದು ನಿಮಗಾಗಿ ಒಪ್ಪಿಸಲಾಗುವ ನನ್ನ ಶರೀರ, ಇದನ್ನು ನನ್ನ ಸ್ಮರಣೆಗಾಗಿ ಮಾಡಿ," ಎಂದರು. ಅಂತೆಯೇ ಭೋಜನದ ಕೊನೆಯಲ್ಲಿ ಪಾನ ಪಾತ್ರೆಯನ್ನು ತೆಗೆದುಕೊಂಡು, "ಈ ಪಾತ್ರೆ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ; ಇದನ್ನು ನೀವು ಪಾನ ಮಾಡುವಾಗಲೆಲ್ಲಾ ನನ್ನ ಸ್ಮರಣೆಗಾಗಿ ಮಾಡಿರಿ," ಎಂದರು. ಎಂದೇ, ನೀವು ಈ ರೊಟ್ಟಿಯನ್ನು ಭುಜಿಸಿ ಈ ಪಾತ್ರೆಯಿಂದ ಪಾನಮಾಡುವಾಗಲೆಲ್ಲಾ ಪ್ರಭು ಬರುವ ತನಕ ಅವರ ಮರಣವನ್ನು ಸಾರುತ್ತೀರಿ. ಆದ್ದರಿಂದ ಪ್ರಿಯ ಸಹೋದರರೇ, ಪ್ರಭುವಿನ ಭೋಜನಕ್ಕಾಗಿ ನೀವು ಒಂದಾಗಿ ಸೇರುವಾಗ ಒಬ್ಬರಿಗೊಬ್ಬರು ಕಾದುಕೊಂಡಿರಿ.
ಕೀರ್ತನೆ: 40:7-8, 8-9, 10, 17
ಶ್ಲೋಕ: ಪ್ರಭು ಬರುವ ತನಕ ಅವರ ಮರಣವನ್ನು ಸಾರುತ್ತೀರಿ .
ಶುಭಸಂದೇಶ: ಲೂಕ 7:1-10
No comments:
Post a Comment