ಸಾಧಾರಣ ಕಾಲದ 25ನೇ - ಶುಕ್ರವಾರ
ಮೊದಲನೇ ವಾಚನ: ಉಪದೇಶಕ: 3: 1-11
ಪ್ರತಿಯೊಂದು ಕಾರ್ಯಕ್ಕೂ ನಿಗದಿಯಾದ ಕಾಲವಿದೆ. ಜಗತ್ತಿನಲ್ಲಿ ನಡೆಯುವ ಒಂದೊಂದು ಕೆಲಸಕ್ಕೂ ಸೂಕ್ತ ಸಮಯವಿದೆ. ಹುಟ್ಟುವ ಸಮಯ, ಸಾಯುವ ಸಮಯ, ನೆಡುವ ಸಮಯ, ನೆಟ್ಟದ್ದನ್ನು ಕೀಳುವ ಸಮಯ, ಕೊಲ್ಲುವ ಸಮಯ, ಗುಣಪಡಿಸುವ ಸಮಯ, ಕೆಡವಿಬಿಡುವ ಸಮಯ, ಕಟ್ಟಿಎಬ್ಬಿಸುವ ಸಮಯ, ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ, ಕಲ್ಲುಗಳನ್ನು ಬಿಸಾಡುವ ಸಮಯ, ಕಲ್ಲುಗಳನ್ನು ಕೂಡಿಸಿಡುವ ಸಮಯ, ಆಲಿಂಗನ ಮಾಡುವ ಸಮಯ, ಆಲಿಂಗನ ಮಾಡದ ಸಮಯ, ಗಳಿಸುವ ಸಮಯ, ಕಳೆದುಕೊಳ್ಳುವ ಸಮಯ, ಕಾಪಾಡುವ ಸಮಯ, ಬಿಸಾಡುವ ಸಮಯ, ಹರಿಯುವ ಸಮಯ, ಹೊಲಿಯುವ ಸಮಯ, ಸುಮ್ಮನಿರುವ ಸಮಯ, ಮಾತಾಡುವ ಸಮಯ, ಪ್ರೀತಿಸುವ ಸಮಯ, ದ್ವೇಷಿಸುವ ಸಮಯ, ಯುದ್ದ ಮಾಡುವ ಸಮಯ, ಸಮಾಧಾನ ಮಾಡುವ ಸಮಯ. ಹೀಗೆ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು. ಕಷ್ಟ ಪಟ್ಟುಮಾಡುವ ದುಡಿಮೆಯಿಂದ ಒಬ್ಬನಿಗೆ ಸಿಗುವ ಲಾಭವಾದರೂ ಏನು? ನರಮಾನವರ ಕರ್ತವ್ಯವೆಂದು ದೇವರು ವಿಧಿಸಿರುವ ದುಡಿಮೆಯನ್ನು ನಾನು ಗಮನಿಸಿದ್ದೇನೆ. ಒಂದೊಂದು ವಸ್ತುವನ್ನೂ ಸಮಯಕ್ಕೆ ತಕ್ಕಂತೆ ಸುಂದರವಾಗಿ ನಿರ್ಮಿಸಿದ್ದಾರೆ ದೇವರು. ಇದಲ್ಲದೇ, ಮನುಷ್ಯನ ಹೃದಯದಲ್ಲಿ ಅಮರತ್ವದ ಪ್ರತಿಯನ್ನು ಮೂಡಿಸಿದ್ದಾರೆ.
ಕೀರ್ತನೆ: 144: 1ಬಿ, 2ಎಬಿಸಿ, 3-4
ಶ್ಲೋಕ: ಸ್ತುತಿಸ್ತೋತ್ರ ಪ್ರಭುವಿಗೆ ನನ್ನ ಆಶ್ರಯ ದುರ್ಗಕೆ.
ಶುಭಸಂದೇಶ: ಲೂಕ: 9: 18-22
ಒಮ್ಮೆ ಯೇಸುಸ್ವಾಮಿ ಏಕಾಂಗಿಯಾಗಿ ಪ್ರಾರ್ಥನೆ ಮಾಡುತ್ತಿದ್ದಾಗ ಶಿಷ್ಯರು ಸಮೀಪದಲ್ಲೇ ಇದ್ದರು. "ಜನಸಾಮಾನ್ಯರು ನನ್ನನ್ನು ಯಾರೆನ್ನುತ್ತಾರೆ?" ಎಂದು ಯೇಸು ಅವರನ್ನು ಪ್ರಶ್ನಿಸಿದರು. ಅದಕ್ಕೆ ಅವರು, "ಹಲವರು ತಮ್ಮನ್ನು ’ಸ್ನಾನಿಕ ಯೊವಾನ್ನ’ ಎನ್ನುತ್ತಾರೆ; ಕೆಲವರು ’ಎಲೀಯನು’ ಎನ್ನುತ್ತಾರೆ; ಮತ್ತೆ ಕೆಲವರು ’ ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ಮರಳಿ ಜೀವಂತನಾಗಿದ್ದಾನೆ’ ಎನ್ನುತ್ತಾರೆ," ಎಂದು ಉತ್ತರವಿತ್ತರು. ಆಗ ಯೇಸು, "ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?" ಎಂದು ಪುನಃ ಪ್ರಶ್ನಿಸಿದರು. ಅದಕ್ಕೆ ಪೇತ್ರನು, "ದೇವರಿಂದ ಅಭಿಷಿಕ್ತರಾದ ಲೋಕೋದ್ದಾರಕ ತಾವೇ" ಎಂದು ಉತ್ತರ ಕೊಟ್ಟನು. ಈ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಯೇಸು ಶಿಷ್ಯರನ್ನು ಆಜ್ಞಾಪೂರ್ವಕವಾಗಿ ಎಚ್ಚರಿಸಿದರು. ಇದಲ್ಲದೆ, "ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾ ಪ್ರಮುಖರಿಂದಲೂ ಮುಖ್ಯ ಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು. ಆದರೆ ಮೂರನೆ ದಿನ ಆತನು ಪುನರುತ್ಥಾನ ಹೊಂದುವನು," ಎಂದು ಅವರಿಗೆ ತಿಳಿಸಿದರು.
ಚಿಂತನೆ : ಇಂದಿನ ಮೊದಲ ವಾಚನ ಸಮಯದ ಬಗ್ಗೆ ಮಾತನಾಡುತ್ತದೆ. ಹುಟ್ಟುವ, ಸಾಯುವ ಸಮಯವೂ ನಿಗದಿಯಾಗಿದ್ದೂ, ಅದರ ನಡುವಿನ ಎಲ್ಲಕ್ಕೂ ದೇವರು ಸಮಯವನ್ನು ನಿಗದಿಪಡಿಸಿದ್ದಾರೆ ಎನ್ನುವ ವಿಷಯವೇ ದೇವರ ಅಗಾಧತೆಗೆ ಸಾಕ್ಷಿಯಾಗಿದೆ. ಅಂತಹ ತಕ್ಕ ಸಮಯವು ಬರುವ ತನಕ ತಾವೇ ಅಭಿಷಿಕ್ತರಾದ ಲೋಕೋದ್ಧಾರಕ ಎಂಬುದನ್ನು ಯಾರಿಗೂ ತಿಳಿಸಬಾರದೆಂದು ಯೇಸು ಆಜ್ಞಾಪಿಸುತ್ತಾರೆ. ಅಂತೆಯೇ ದೇವರ ಸಮಯವೆಂಬ ಚಿತ್ತಕ್ಕೆ ನಾವೆಲ್ಲರೂ ತಲೆಬಾಗಲೇ ಬೇಕಾಗುತ್ತದೆ.
ಚಿಂತನೆ : ಇಂದಿನ ಮೊದಲ ವಾಚನ ಸಮಯದ ಬಗ್ಗೆ ಮಾತನಾಡುತ್ತದೆ. ಹುಟ್ಟುವ, ಸಾಯುವ ಸಮಯವೂ ನಿಗದಿಯಾಗಿದ್ದೂ, ಅದರ ನಡುವಿನ ಎಲ್ಲಕ್ಕೂ ದೇವರು ಸಮಯವನ್ನು ನಿಗದಿಪಡಿಸಿದ್ದಾರೆ ಎನ್ನುವ ವಿಷಯವೇ ದೇವರ ಅಗಾಧತೆಗೆ ಸಾಕ್ಷಿಯಾಗಿದೆ. ಅಂತಹ ತಕ್ಕ ಸಮಯವು ಬರುವ ತನಕ ತಾವೇ ಅಭಿಷಿಕ್ತರಾದ ಲೋಕೋದ್ಧಾರಕ ಎಂಬುದನ್ನು ಯಾರಿಗೂ ತಿಳಿಸಬಾರದೆಂದು ಯೇಸು ಆಜ್ಞಾಪಿಸುತ್ತಾರೆ. ಅಂತೆಯೇ ದೇವರ ಸಮಯವೆಂಬ ಚಿತ್ತಕ್ಕೆ ನಾವೆಲ್ಲರೂ ತಲೆಬಾಗಲೇ ಬೇಕಾಗುತ್ತದೆ.
No comments:
Post a Comment