ಸಾಧಾರಣ ಕಾಲದ 26ನೇ ಗುರುವಾರ
ಮೊದಲನೇಯ ವಾಚನ - ಯೋಬ 19:21-27
ಕರುಣೆ ತೋರಿ ಗೆಳೆಯರೇ, ಕರುಣೆತೋರಿ ನನಗೆ! ಏಕಂದರೆ ದೇವರ ಕೈ ನನ್ನನ್ನು ದಂಡಿಸಿದೆ, ದೇವರಂತೆ ನೀವು ನನ್ನನ್ನು ದಂಡಿಸುವುದೇಕೆ? ನನ್ನನ್ನು ಛಿನ್ನಪಿನ್ನವಾಗಿಸಿದ್ದೀರಿ, ಇದು ಸಾಲದೆ ನಿಮಗೆ? ನನ್ನ ಮಾತುಗಳನ್ನು ಬರೆದಿಟ್ಟರೆ ಎಷ್ಟೋ ಮೇಲು! ಸುರುಳಿಯಲ್ಲಿ ಅದು ಲಿಖಿತವಾದರೆ ಎಷ್ಟೋ ಲೇಸು! ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸೆ, ಎರೆದು ಶಾಶ್ವತ ಶಾಸನವಾಗಿಸಿದ್ದರೆ ಎಷ್ಟೋ ಒಳಿತು. ನಾನಂತು ಬಲ್ಲೆ. ನನ್ನ ಉದ್ಧಾರಕ ಜೀವಸ್ವರೂಪನೆಂದು ಕಡೆಯ ದಿನದಂದು ಧರೆಗಾತ ಇಳಿದು ಬರುವನೆಂದು. ನನ್ನ ಚರ್ಮ ಹೀಗೆ ಬಿರಿದು ಹಾಳಾದರೂ ದೇಹಧಾರಿಯಾಗಿಯೇ ನಾನು ನೋಡುವೆನು ದೇವರನು. ಕಣ್ಣಾರೆ ಆತನನು ಕಾಣುವೆನು ಮತ್ತೊಬ್ಬನಾಗಲ್ಲ, ನಾನಾಗೇ ನೋಡುವೆನು. ಹಂಬಲಿಕೆಯಿಂದ ಕುಂದಿದೆ ನನ್ನ ಅಂತರಂಗವು.
ಕೀರ್ತನೆ: 27:7-8a, 8b-9abc, 13, 14
ಶ್ಲೋಕ: ಪ್ರಭುವಿನೊಳಿತನು ನಾ ಕಾಣುವೆನು ಜೀವಲೋಕದೊಳು.
ಶುಭಸಂದೇಶ: ಲೂಕ 10:1-12
ಇದಾದ ಮೇಲೆ, ಯೇಸುಸ್ವಾಮಿ ಇನ್ನೂ ಎಪ್ಪತ್ತೆರಡು ಮಂದಿಯನ್ನು ನೇಮಿಸಿ ಅವರನ್ನು ಇಬ್ಬಿಬ್ಬರನ್ನಾಗಿ ತಾವೇ ಹೋಗಲಿದ್ದ ಊರುಗಳಿಗೂ ಸ್ಥಳಗಳಿಗೂ ಮುಂದಾಗಿ ಕಳಿಸಿದರು. ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, "ಬೆಳೆಯೇನೋ ಹೇರಳವಾಗಿದೆ; ಕೊಯ್ಲುಗಾರರೋ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ. ಹೋಗಿರಿ, ತೋಳಗಳ ನಡುವೆ ಕುರಿಮರಿಗಳನ್ನು ಬಿಟ್ಟಂತೆ ನಾನುನಿಮ್ಮನ್ನು ಕಳುಹಿಸುತ್ತೇನೆ. ಹಣದ ಚೀಲವನ್ನಾಗಲಿ, ಜೋಳಿಗೆಯನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗದಿರಿ. ದಾರಿಯಲ್ಲಿ ಯಾರಿಗೂ ವಂದನೋಪಚಾರಗಳನ್ನು. ಮಾಡಿಕೊಂಡಿರಬೇಡಿ. ನೀವು ಯಾವ ಮನೆಗೆ ಹೋದರೂ, "ಈ ಮನೆಗೆ ಶಾಂತಿ," ಎಃದು ಆಶೀರ್ವಾದ ಮಾಡಿ. ಶಾಂತಿ ಪ್ರೀಯನು ಅಲ್ಲಿದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನಿಲಸುವುದು. ಇಲ್ಲವಾದರೆ, ಅದು ನಿಮಗೆ ಹಿಂದಿರುಗುವುದು. ಮನೆಯಿಃದ ಮನೆಗೆ ಹೋಗದೆ ಆಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು. ನೀವು ಯಾವ ಊರಿಗೆ ಹೋದರೂ ಜನರು ನಿಮ್ಮನ್ನು ಸ್ವಾಗತಿಸಿದಾಗ, ಅವರು ಬಡಿಸಿದ್ದನ್ನು ಭುಜಿಸಿರಿ. ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. "ದೇವರ ಸಾಮ್ರಾಜ್ಯ ನಿಮ್ಮನ್ನು ಸಮೀಪಿಸಿದೆ," ಎಂದು ತಿಳಿಸಿರಿ. ಆದರೆ ನೀವು ಹೋಗುವ ಊರಿನ ಜನರು ನಿಮ್ಮನ್ನು ಸ್ವಾಗತಿಸದೆ ಹೋದರೆ, ರಸ್ತೆಗಳಿಗೆ ಹೋಗಿ, 'ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮಗೆ ವಿರುದ್ಧವಾಗಿ ಒದರಿಬಿಡುತ್ತೇವೆ. ಆದರೂ ದೇವರ ಸಾಮ್ರಾಜ್ಯ ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ,' ಎಂದು ತಿಳಿಸಿರಿ. ತೀರ್ಪಿನ ದಿನ ಈ ಊರಿನ ಗತಿ ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದೆಂದು ನಾನು ನಿಮಗೆ ಹೇಳುತ್ತೇನೆ," ಎಂದರು.
No comments:
Post a Comment