ಸಾಧಾರಣ ಕಾಲದ 27ನೇ - ಶನಿವಾರ
ಮೊದಲನೇ ವಾಚನ: ಗಲಾತ್ಯರಿಗೆ: 3: 22-29
ಸಹೋದರರೇ, ಸಮಸ್ತ ಲೋಕವು ಪಾಪಕ್ಕೆ ಒಳಗಾಯಿತು ಎಂದು ಪವಿತ್ರ ಗ್ರಂಥ ಸ್ಪಷ್ಟೀಕರಿಸುತ್ತದೆ. ಹೀಗೆ, ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸು ಕ್ರಿಸ್ತರಲ್ಲಿ ವಿಶ್ವಾಸವಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ. ಕ್ರೈಸ್ತ ವಿಶ್ವಾಸ ಕಾಲವು ಬರುವುದಕ್ಕೆ ಮೊದಲು ನಾವು ಧರ್ಮಶಾಸ್ತ್ರದ ನಿರ್ಬಂಧಕ್ಕೆ ಒಳಗಾಗಿ ಕೈದಿಗಳಂತೆ ಇದ್ದೆವು. ಈ ವಿಶ್ವಾಸವು ಪ್ರಕಟವಾಗುವವರೆಗೂ ಇದೇ ಪರಿಸ್ಥಿತಿ ಇತ್ತು. ಅಂತೆಯೇ, ವಿಶ್ವಾಸದ ಮೂಲಕ ನಾವು ದೇವರೊಡನೆ ಸತ್ಸಂಬಂಧ ಹೊಂದುವಂತೆ ಕ್ರಿಸ್ತ ಯೇಸು ಬರುವವರೆಗೆ ಅದು ನಮಗೆ ಕಾವಲಾಗಿತ್ತು. ಈಗ ಕ್ರೈಸ್ತ ವಿಶ್ವಾಸವು ಆಗಮಿಸಿರುವುದರಿಂದ ಇನ್ನು ನಾವು ಧರ್ಮಶಾಸ್ತ್ರದ ಅಧೀನದಲ್ಲಿ ಇಲ್ಲ. ಕ್ರಿಸ್ತ ಯೇಸುವಿನಲ್ಲಿ ಇಟ್ಟಿರುವ ವಿಶ್ವಾಸದ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರಿ. ಹೇಗೆಂದರೆ, ಕ್ರಿಸ್ತ ಯೇಸುವಿನಲ್ಲಿ ಒಂದಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತಂಬರರಾಗಿದ್ದೀರಿ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ, ಧಣಿ, ಗಂಡು-ಹೆಣ್ಣು ಎಂಬ ಭೇದವಿಲ್ಲ. ನೀವು ಕ್ರಿಸ್ತ ಯೇಸುವಿಗೆ ಸೇರಿದವರಾಗಿದ್ದರೆ ಅಬ್ರಹಾಮನ ಸಂತತಿಯೂ ಹಾಗಿದ್ದೀರಿ; ದೈವ ವಾಗ್ದಾನದ ಪ್ರಕಾರ ವಾರಸುದಾರರು ಆಗಿದ್ದೀರಿ.
ಕೀರ್ತನೆ: 105: 2-3, 4-5, 6-
ಶ್ಲೋಕ: ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು
ಶುಭಸಂದೇಶ: ಲೂಕ: 11: 27-28
No comments:
Post a Comment