ಸಾಧಾರಣ ಕಾಲದ 30ನೇ ಗುರುವಾರ
ಮೊದಲನೇ ವಾಚನ; ಪ್ರಕಟನಾ ಗ್ರಂಥ 7:2-4, 9-14
ಕೀರ್ತನೆ: 24:1-2, 3-4, 5-6
ಶ್ಲೋಕ : ಇಂಥವರೇ ದೇವರ ದರ್ಶನಾಭ್ಯರ್ಥಿಗಳು
ಎರಡನೇ ವಾಚನ: 1 ಯೊವಾನ್ನ 3:1-3
ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ. ಪ್ರಿಯರೇ, ನಾವೀಗ ದೇವರ ಮಕ್ಕಳು ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತ ಯೇಸು ಪ್ರತ್ಯಕ್ಷವಾಗುವಾಗ ನಾವು ಅವರಂತೆಯೇ ಇರುತ್ತೇವೆಂದು ಬಲ್ಲೆವು. ಎಕೆಂದರೆ, ಅವರನ್ನು ನಾವು ಅವರ ಯಥಾರ್ಥ ರೂಪದಲ್ಲೇ ಕಾಣುತ್ತೇವೆ. ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ನಿರಿಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಸಿಟ್ಟುಕೊಳ್ಳುತ್ತಾನೆ.
ಶುಭಸಂದೇಶ ಮತ್ತಾಯ 5:1-12
ಜನರ ದೊಡ್ಡ ಗುಂಪನ್ನು ಕಂಡು ಯೇಸುಸ್ವಾಮಿ ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡರು. ಅವರ ಶಿಷ್ಯರು ಸುತ್ತಲೂ ನೆರೆದರು ಆಗ ಯೇಸು ಇಂತೆಂದು ಪ್ರಭೋಧಿಸಿದರು: "ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು, ದುಃಖಿಗಳು ಭಾಗ್ಯವಂತರು; ದೇವರು ಅವರನ್ನು ಸಂತೈಸುವರು; ವಿನಯಶೀಲರು ಭಾಗ್ಯವಂತರು, ದೇವರ ವಾಗ್ದತ್ತ ನಾಡಿಗೆ ಬಾಧ್ಯಸ್ಥರು ಅವರು. ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು, ದೇವರು ಅವರಿಗೆ ತೃಪ್ತಿಯನ್ನಿಯುವರು. ದಯಾವಂತರು ಭಾಗ್ಯವಂತರು, ದೇವರ ದಯೆ ಅವರಿಗೆ ದೊರಕುವುದು. ನಿರ್ಮಲ ಹೃದಯಿಗಳು ಭಾಗ್ಯವಂತರು; ಅವರು ದೇವರನ್ನು ಕಾಣುವರು. ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು. ನ್ಯಾಯ ನೀತಿಯ ನಿಮಿತ್ತ ಹಿಂಸೆಯನ್ನು ತಾಳುವವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು. ನನ್ನ ಶಿಷ್ಯರು ನೀವಾದ್ಧರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು. ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು, ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು. ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು.
No comments:
Post a Comment