ಮೊದಲನೇ ವಾಚನ: ದಾನಿಯೇಲ 12:1-3
"ಆ ಕಾಲದಲ್ಲಿ ನಿನ್ನ ಜನರ ಪಕ್ಷ ವಹಿಸುವ ಮಹಾದೂತನಾದ ಮಿಕಾಯೇಲನು ಕಾಣಿಸಿಕೊಳ್ಳುವನು. ಮೊತ್ತ ಮೊದಲು, ಮಾನವ ಜನಾಂಗ ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದ ಘೋರ ಸಂಕಟ ಉಂಟಾಗುವುದು. ಆಗ ನಿನ್ನ ಜನರಲ್ಲಿ ಯಾರ ಯಾರ ಹೆಸರುಗಳು ಜೀವ ಭಾದ್ಯರ ಪಟ್ಟಿಯಲ್ಲಿ ಇರುವುದೋ ಅವರೆಲ್ಲರು ಜೀವೋದ್ಧಾರವನ್ನು ಪಡೆಯುವರು. ಸತ್ತ ಧೂಳಿನ ಮಣ್ಣಿನಲ್ಲಿ 'ದೀರ್ಘನಿದ್ರೆ' ಮಾಡುತ್ತಿರುವ ಅನೇಕರು ಏಳುವರು, ಎಚ್ಚೆತ್ತವರಲ್ಲಿ ಕೆಲವರು ನಿತ್ಯ ಜೀವವನ್ನು ಅನುಭವಿಸುವರು; ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು. ಬುದ್ಧಿವಂತರು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಕ್ಕೂ ನಕ್ಷತ್ರಗಳಂತೆ ಹೊಳೆಯುವರು."
-ಪ್ರಭುವಿನ ವಾಕ್ಯ
-ಪ್ರಭುವಿನ ವಾಕ್ಯ
ಕೀರ್ತನೆ: 16:5, 8, 9-10, 11
ಶ್ಲೋಕ: ನೀಡು ದೇವಾ ರಕ್ಷಣೆಯನು, ನಾ ನಿನಗೆ ಶರಣಾಗತನು.
ಎರಡನೇ ವಾಚನ: ಹಿಬ್ರಿಯರಿಗೆ 10: 11-14, 18
ಪ್ರತಿಯೊಬ್ಬ ಯಾಜಕನು ಅನುದಿನವೂ ತನ್ನ ಸೇವೆಯನ್ನು ನಿರ್ವಹಿಸುತ್ತಾನೆ. ಆದರೆ ಇವುಗಳಿಂದ ಎಂದಿಗೂ ಪಾಪ ನಿವಾರಣೆ ಆಗದು. ಕ್ರಿಸ್ತ ಯೇಸು ಪಾಪ ನಿವಾರಣೆಗೆಂದು ಎಲ್ಲಾ ಕಾಲಕ್ಕೂ ಏಕೈಕ ಬಲಿಯನ್ನು ಅರ್ಪಿಸಿ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ. ಅವರ ಶತ್ರುಗಳು ತಮ್ಮ ಕಾಲಡಿಗೆ ಬರುವತನಕ ಅಲ್ಲೇ ಕಾದಿರುತ್ತಾರೆ. ತಾವು ಪುನೀತಗೊಳಿಸಿದವರನ್ನು ಒಂದೇ ಒಂದು ಬಲಿಯರ್ಪಣೆಯಿಂದ ಯೇಸು ನಿರಂತರ ಸಿದ್ಧಿಗೆ ತಂದಿದ್ದಾರೆ. ಪಾಪ ಕ್ಷಮಾಪಣೆಯಾದ ಬಳಿಕ ಪಾಪ ಪರಿಹಾರಕ ಬಲಿಯ ಅವಶ್ಯಕತೆ ಇಲ್ಲ.
-ಪ್ರಭುವಿನ ವಾಕ್ಯ
ಶುಭಸಂದೇಶ: ಮಾರ್ಕ 13:24-32
ಶುಭಸಂದೇಶ: ಮಾರ್ಕ 13:24-32

No comments:
Post a Comment