ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

02.11.2018

ಮೊದಲನೇ ವಾಚನ : ಜ್ಞಾನ ಗ್ರಂಥ 3:1-9

ಸಜ್ಜನರ ಆತ್ಮಗಳಿರುವುವು ದೇವರ ಕೈಯೊಳು. ಅವರನ್ನು ಮುಟ್ಟದು ಮಹಾಯಾತನೆ ಯಾವುದು. ಮಂದಮತಿಯ ಕಣ್ಣಿಗೆ ಸತ್ತವರಂತೆ  ಅವರು ಕಾಣಿಸಿಕೊಂಡರು. ಅವರು ಗತಿಸಿ ಹೋದುದು ಅವನಿಂದ ತೊಲಗಿದ ಕೇಡಂತಿತ್ತು. ಸಜ್ಜನಿರಿಗಾದ ಸಾವು ಮಹಾ ವಿಪತ್ತು ಎಂದವನಿಗೆ ತೋರಿತು ಅವರಾದರೋ ಶಾಂತಿ ಸಮಾಧಾನದಿಂದ ನೆಮ್ಮದಿಯಾಗಿರುವರು. ಮಾನವನ ದೃಷ್ಟಿಯಲ್ಲಿ ಅವರು ಕಂಡುಬಂದರು ಶಿಕ್ಷಿಸಲ್ಪಟ್ಟವರಂತೆ. ಅವರಲ್ಲಾದರೋ ತುಂಬಿತ್ತು ಅಮರತ್ವದ ನಂಬಿಕೆ ನಿರೀಕ್ಷೆ. ಅವರು ಅನುಭವಿಸಿದ ಶಿಕ್ಷೆ ಅಲ್ಲ, ಹೊಂದುವ ಸೌಭಾಗ್ಯ ಅಪಾರ ಶೋಧಿಸಿದ ತರುವಾಯ ದೇವರಿಗೆ ಅವರು ಕಂಡುಬಂದರು ಯೋಗ್ಯಾರ್ಹ, ಶೋಧಿಸಿದವರನ್ನು ಪುಟಕ್ಕಿಟ್ಟ ಚಿನ್ನದಂತೆ ಅಂಗೀಕೃತರಾದರು ಪೂರ್ಣ ದಹನಬಲಿಯಂತೆ. ಪ್ರಕಾಶಿಸುವರು ದೇವರನು ಸಂದರ್ಶಿಸುವ ಕಾಲದಲಿ. ಹೊಳೆಯುವರು ಒಣಹುಲ್ಲಿನೊಳಗಿನ ಕಿಡಿಗಳೋಪಾದಿ. ನ್ಯಾಯತೀರಿಸುವರವರು ಜನಾಂಗಗಳಿಗೆ. ದೊರೆತನಮಾಡುವರವರು ಜನಗಳ ಮೇಲೆ. ದೇವರ ಪ್ರಜೆಗಳಾಗಿರುವರು. ಸದಾಕಾಲಕ್ಕೆ. ಸತ್ಯವನ್ನು ಅರಿವರು,  ದೇವಲ್ಲಿ ಭರವಸೆಯಿಡುವವರು. ಅವರೊಂದಿಗೆ ಪ್ರೀತಿಯಿಂದ ಬಾಳುವರು ನಂಬಿಗಸ್ತರು ದೇವರಿಂದ ಅಯ್ಕಯಾದವರಿಗಿರುವುದು ಕೃಪಾನುಗ್ರಹವು, ದೇವರೇ ಕಾಪಡುವರು ಸಜ್ಜನರನ್ನು.

 ಕೀರ್ತನೆ; 23:1-3, 3-4, 5,6
 ಶ್ಲೋಕ : ಪ್ರಭು ಕುರಿಗಾಹಿಯಾಗಿರಲುನನಗೆ ಕಂದುಕೊರತೆಗಳೆಲ್ಲಿಯವು ಎನಗೆ?

 ಎರಡನೇ ವಾಚನ: ರೋಮನರಿಗೆ 6:3-9 (ರೋಮನರಿಗೆ 5:5-11)

ಕ್ರಿಸ್ತ ಯೇಸುವಿನವರಾಗಲು ದೀಕ್ಷಾಸ್ನಾನ ಹೊಂದಿರುವ ನಾವು, ಅವರ ಮರಣದಲ್ಲಿ ಪಾಲುಗಾರರಾಗಲು ದೀಕ್ಷಾಸ್ನಾನ ಪಡೆದೆವು ಎಂಬುದು ನಿಮಗೆ ತಿಳಿಯದೆ? "ಹೀಗಿರಲಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡಾಗ ಅವರ ಮರಣದಲ್ಲಿ ಪಾಲುಗಾರರಾದ ನಮಗೆ ಅವರೋಡನೆ ಸಮಾಧಿಯೂ ಆಯಿತು. ಆದುದರಿಂದ ತಂದೆಯ ಮಹಿಮಾಶಕ್ತಿಯಿಂದ ಕ್ರಿಸ್ತಯೇಸು ಮರಣದಿಂದ ಪುನರುತ್ದನ ಹೊಂದಿದಂತೆಯೇ ನಾವು ಸಹ ಹೊಸ ಜೀವವನ್ನು ಹೊಂದಿ ಬಾಳುತ್ತೇವೆ. ಅವರು ಮರಣ ಹೊಂದಿದಂತೆ ನಾವು ಅವರೊಂದಿಗೆ ಐಕ್ಯವಾಗಿ ಮರಣವನ್ನು ಹೊಂದುತ್ತೇವೆ. "ಅಂತೆಯೇ, ಅವರು ಪುನರುತ್ದಾನ ಆದಂತೆ ನಾವು ಅವರೊಡನೆ ಐಕ್ಯವಾಗಿ ಪುನರುತ್ದಾನ ಹೊಂದುತ್ತೇವೆ. ನಮಗೆ ತಿಳಿದಿರುವಂತೆ, ಪಾಪಾಧೀನವಾದ ನಮ್ಮ ಸ್ವಭಾವವು ನಾಶವಾಗುವಂತೆಯೂ ಇನ್ನೂ ಮುಂದೆ ನಾವು ಪಾಪಕ್ಕೆ ದಾಸರಾಗದಂತೆಯೂ ಯೇಸುಕ್ರಿಸ್ತರೊಡನೆ ನಮ್ಮ ಹಳೆಯ ಸ್ವಭಾವವನ್ನು ಶಿಲುಬೆಗೆ  ಜಡಿಯಲಾಗಿದೆ. ಹೀಗೆ ಸತ್ತವನು ಪಾಪಬಂಧದಿಂದ ಬಿಡುಗಡೆ ಹೊಂದಿದ‌ವನು. ಕ್ರಿಸ್ತಯೇಸುವಿನೊಂದಿಗೆ ನಿವು ಮರಣ ಹೊಂದಿದರೆ ಅವರೊಡನೆ ನಾವೂ ಜೀವಿಸುತ್ತೇವೆ; ಇದೇ ನಮ್ಮ ವಿಶ್ವಾಸ. ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಲಾಯಿತು ಎಂಬುದನ್ನು ನಾವು ಬಲ್ಲೆವು. ಆದ್ದರಿಂದ ಅವರು ಎಂದಿಗೂ ಸಾಯುವುದಿಲ್ಲ; ಸಾವಿಗೆ ಅವರ ಮೇಲೆ ಯಾವ ಅಧಿಕಾರವೂ ಇಲ್ಲ.

ಶುಭಸಂದೇಶ: ಮತ್ತಾಯ 25:31-46

ಯೇಸು ತಮ್ಮ ಶಿಷ್ಯರನ್ನು ಉದ್ದೇಶಿಸಿ, "ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು. ಸರ್ವಜನಾಂಗಗಳನ್ನು ಆತನ ಸಮ್ಮುಖದಲ್ಲಿ ಒಟ್ಟುಗೂಡಿಸಲಾಗುವುದು. ಕುರುಬನು ಕುರಿಗಳನ್ನು ಆಡುಗಳಿಂದ ಬೇರ್ಪಡಿಸುವಂತೆ ಆತನು ಅವರನ್ನು ಬೇರ್ಪಡಿಸುವನು. ಕುರಿಗಳನ್ನು ತನ್ನ ಬಲಗಡೆಯಲ್ಲೂ ಆಡುಗಳನ್ನು ತನ್ನ ಎಡಗಡೆಯಲ್ಲೂ ಇರಿಸುವನು. ಆಗ ಅರಸನು ತನ್ನಬಲಗಡೆಯಲ್ಲಿರುವ  ಜನರಿಗೆ, "ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ, ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ರವಾಗಿ ಪಡೆಯಿರಿ. ಏಕೆಂದರೆ, ನಾನು ಹಸಿದಿದ್ದೆ, ನನಗೆ ಅಹಾರ ಕೊಟ್ಟಿರಿ; ಬಾಯಾರಿದ್ದೆ, ಕುಡಿಯಲು ಕೊಟ್ಟಿರಿ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ಕೊಟ್ಟಿರಿ. ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಟ್ಟಿರಿ. ರೋಗದಿಂದಿದ್ದೆ, ನನನ್ನು ಆರೈಕೆ ಮಾಡಿದಿರಿ. ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಿದಿರಿ." ಎಂದು ಹೇಳುವೆನು. ಅದಕ್ಕೆ ಆ ಸಜ್ಜನರು, "ಸ್ವಾಮೀ, ತಾವು ಯಾವಾಗ ಹಸಿದಿದ್ದನ್ನು ಕಂಡು ನಾವು ಅಹಾರ ಕೊಟ್ಟೆವು? ಬಾಯಾರಿದ್ದನ್ನು ಕಂಡು ಕುಡಿಯಲು ಕೊಟ್ಟೆವು? ಯಾವಾಗ ತಾವು ಅಪರಿಚಿತರಾಗಿದ್ದನ್ನು ಕಂಡು ನಾವು ಆಶ್ರಯ ಕೊಟ್ಟೆವು? ಬಟ್ಟೆಬರೆಯಿಲ್ಲದ್ದನ್ನು ಕಂಡು ಉಡಲು ಕೊಟ್ಟೆವು? ತಾವು ರೋಗಿಯಾಗಿರುವುದನ್ನು ಅಥವಾ ಬಂಧಿಯಾಗಿರುವುದನ್ನು  ಕಂಡು ನಾವು ಸಂದಧಿಸಲು ಬಂದೆವು?' ಎಂದು ಕೇಳುವರು. ಆಗ ಅರಸನು ಪ್ರತ್ಯುತ್ತರವಾಗಿ, 'ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲ ಅದನ್ನು ನನಗೇ ಮಾಡಿದಿರಿ. ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ', ಎನ್ನುವನು. "ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ’ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ದಮಾಡಿರುವ ಆರದ ಬೆಂಕಿಗೆ ಬೀಳಿರಿ. ಏಕೆಂದರೆ ನಾನು ಹಸಿದಿದ್ದೆ, ನೀವು ನನಗೆ ಆಹಾರ ಕೊಡಲಿಲ್ಲ; ಬಾಯಾರಿದ್ದೆ, ಕುಡಿಯಲು ಕೊಡಲಿಲ್ಲ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ನೀಡಲಿಲ್ಲ. ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಡಲಿಲ್ಲ; ರೋಗಿಯಾಗಿದ್ದೆ, ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಲಿಲ್ಲ,’ ಎಂದು ಹೇಳುವನು. ಅದಕ್ಕೆ ಅವರು ಕೂಡ, ’ಸ್ವಾಮೀ, ತಾವು ಯಾವಾಗ ಹಸಿದಿದ್ದಿರಿ, ಬಾಯಾರಿದ್ದಿರಿ, ಅಪರಿಚಿತರಾಗಿದ್ದಿರಿ, ಯಾವಾಗ ಬಟ್ಟೆಬರೆ ಇಲ್ಲದೆ ಇದ್ದಿರಿ, ರೋಗಿಯಾಗಿದ್ದಿರಿ, ಬಂಧಿಯಾಗಿದ್ದಿರಿ ಮತ್ತು ನಾವು ಅವನ್ನು ಕಂಡು ನಿಮಗೆ ಉಪಚಾರಮಾಡದೆ ಹೋದೆವು? ಎಂದು ಪ್ರಶ್ನಿಸುವರು. ಅದಕ್ಕೆ ಮ್ರತ್ಯುತ್ತರವಾಗಿ ಅರಸನು; ಇವರಲ್ಲಿ ಒಬ್ಬನಿಗೆ, ಅವನಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆಹೋದಾಗ ಅದನ್ನು ನನಗೇ ಮಾಡಲಿಲ್ಲ,’ ಎನ್ನುವನು. "ಹೀಗೆ ಮಾಡದೆಹೋದಾಗ ಅದನ್ನು ನನಗೇ ಮಾಡಲಿಲ್ಲ,’ ಎನ್ನುವನು. "ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು," ಎಂದು ಹೇಳಿದರು ಸ್ವಾಮಿ.

No comments:

Post a Comment