ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

02.12.2018

ಮೊದಲನೇ ವಾಚನ: ಯೆರೆಮೀಯ  33:14-16

ಸರ್ವೇಶ್ವರ ಹೀಗೆನ್ನುತ್ತಾರೆ: "ಗಮನಿಸಿರಿ! ದಿನಗಳು ಬರಲಿವೆಇಸ್ರಯೇಲ್ಯೆಹೂದ ವಂಶಗಳ ವಿಷಯವಾಗಿ ನಾನು ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರಲಿವೆ.   ಆ ಕಾಲದಲ್ಲಿಆದಿನಗಳಲ್ಲಿ,  ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯೊಂದನ್ನು ಚಿಗುರಿಸುವೆನು. ಆತನು ನಾಡಿನಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು. ಆಗ ಯೆಹೂದ್ಯರು ಸುರಕ್ಷಿತವಾಗಿರುವರು. ಜೆರುಸಲೇಮಿನವರು ನೆಮ್ಮದಿಯಿಂದ ವಾಸಿಸುವರು. "ಯೆಹೋವಚಿದ್ಕೇನು" (ಅಂದರೆ ಸರ್ವೇಶ್ವರನೇ ನನ್ನ ಸದ್ಧರ್ಮ) ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.

ಕೀರ್ತನೆ: 25:4-5, 8-9, 10-14
ಶ್ಲೋಕ: ಎತ್ತಿರುವೆ ಪ್ರಭೂ ಹೃನ್ಮನಗಳನು ನಿನ್ನತ್ತ

ಎರಡನೇ ವಾಚನ: 1 ಥೆಸಲೋನಿಯರಿಗೆ  3:12-4:2

ಸಹೋದರರೇನಿಮ್ಮ ಮೇಲೆ ನಮಗಿರುವ ಪ್ರೀತಿ ವೃದ್ಧಿಯಾಗುತ್ತಿರುವಂತೆಯೇನಿಮ್ಮ ಪರಸ್ಪರ ಪ್ರೀತಿಯೂ ಸರ್ವಜನಪ್ರೇಮವೂ ಬೆಳೆದು ಸಮೃದ್ಧಿಯಾಗಲೆಂದು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇವೆ. ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನರಾಗಮಿಸುವಾಗನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವೂ ಸಹ ಪರಿಶುದ್ದರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ. ಕಡೆಯದಾಗಿ ಸಹೋದರರೇನೀವು ಹೇಗೆ ಬಾಳಬೇಕುದೇವರು ಮೆಚ್ಚುವಂತೆ ಹೇಗೆ ನಡೆದುಕೊಳ್ಳಬೇಕುಎಂಬುದನ್ನು ನಮ್ಮಿಂದ ಕಲಿತುಕೊಂಡಿರಿ. ಅಂತೆಯೇ ಜೀವಿಸುತ್ತಿದ್ದೀರಿ. ನಿಮ್ಮ ನಡತೆ ಇನ್ನೂ ಉತ್ತಮಗೊಳ್ಳಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ಹಾಗೂ ಪ್ರಭೋಧಿಸುತ್ತೇವೆ. ಪ್ರಭು ಯೇಸುವಿನ ಅಧಿಕಾರದಿಂದ ನಾವು ನಿಮಗೆ ವಿಧಿಸಿದ ನಿಯಮಗಳನ್ನು ನೀವು ಬಲ್ಲಿರಿ.

ಶುಭಸಂದೇಶ: ಲೂಕ 21:25-28, 34-36

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ಸೂರ್ಯಚಂದ್ರನಕ್ಷತ್ರಗಳಲ್ಲಿ ವಿಚಿತ್ರ ಸೂಚನೆಗಳು ಕಾಣಿಸಿಕೊಳ್ಳುವುವುಮೊರೆಯುವ ತರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕು ತೋಚದೆ ತತ್ತರಿಸಿಹೋಗುವುವು. ಗ್ರಹಶಕ್ತಿಗಳು ಕದಲುವುದರಿಂದ ಧರೆಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯಭೀತಿಯಿಂದ ಮಾನವರು ದಿಗ್ಭ್ರಮೆಗೊಳ್ಳುವರು. ಆಗ ನರಪುತ್ರನು ಮಹಾಶಕ್ತಿಯಿಂಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಡನಾಗಿ ಬರುವುದನ್ನು ಜನರು ಕಾಣುವರು. ಇವೆಲ್ಲವೂ  ಸಂಭವಿಸಲು ತೊಡಗುವಾಗ ನೀವು ನಿರೀಕ್ಷಿಸುತ್ತಾ ತಲೆಯೆತ್ತಿ ನಿಲ್ಲಿರಿಎಕೆಂದರೆನಿಮ್ಮ ಉದ್ಧಾರವು ಸಮೀಪಿಸಿತು. ಮಿತಿಮೀರಿದ ಭೋಜನದಿಂದಾಗಲಿಕುಡಿತದಿಂದಾಗಲಿಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತುಜಾಗರೂಕರಾಗಿರಿ! ಜಗತ್ತಿನ ಎಲ್ಲಾ ನಿವಾಸಿಗಳೂ ಅದಕ್ಕೆ ಸಿದ್ಧರಾಗಿರಬೇಕು. ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲ್ಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರಿಕೆಯಿಂದಿರಿ," ಎಂದರು.

No comments:

Post a Comment