ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

05.12.2018

ಮೊದಲನೇ ವಾಚನ: ಯೆಶಾಯ  25:6-10

ಇದಲ್ಲದೆ ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನು ಶ್ರೇಷ್ಟವಾದ ದ್ರಾಕ್ಷಾರಸವನ್ನು ಭೋಜನಕ್ಕಾಗಿ ಅಣಿಗೊಳಿಸುವರು. ಸಮಸ್ತ ರಾಷ್ಟ್ರಗಳನ್ನು ಆವರಿಸಿರುವ ಮುಸುಕನ್ನೂ ಸಕಲ ದೇಶಗಳನ್ನು ಮುಚ್ಚಿರುವ ತೆರೆಯನ್ನೂ ಇದೇ ಪರ್ವತದಲ್ಲಿ ನಾಶಮಾಡುವರು. ಸರ್ವೇಶ್ವರಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರಸ್ವಾಮಿಯೇ ಇಂತೆಂದು ನುಡಿದಿದ್ದಾರೆ. ಇದು ನೆರವೇರಿದಾಗ ಜನರು: "ಇವರೇ ನಮ್ಮ ದೇವರುನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು. ಇವರೇ ಸರ್ವೇಶ್ವರಇವರನ್ನೇ ನೆಚ್ಚಿಕೊಂಡಿದ್ದೆವು ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ!" ಎಂದು ಹೇಳಿಕೊಳ್ಳುವರು. ಸರ್ವೇಶ್ವರಸ್ವಾಮಿಯ ಅಭಯ ಹಸ್ತವು ಈ ಪರ್ವತದ ಮೇಲೆ ಶಾಶ್ವತವಾಗಿ ನೆಲಸುವುದು. ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿತಕ್ಕೆ ಈಡಾಗುವಂತೆ ತಾನಿದ್ದಲ್ಲೇ ತುಳಿತಕ್ಕೀಡಾಗುವುದು.

ಕೀರ್ತನೆ: 23:1-3a, 3b-6 
ಶ್ಲೋಕ: ದೇವಮಂದಿರದಲ್ಲಿ ನಾ ವಾಸಿಸುವೆ ಚಿರಕಾಲವೆಲ್ಲ

ಶುಭಸಂದೇಶ: ಮತ್ತಾಯ  15:29-37

ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟುಗಲಿಲೇಯ ಸರೋವರದ ತೀರದಲ್ಲೇ ನಡೆದುಒಂದು ಗಡ್ಡವನ್ನು ಹತ್ತಿ ಅಲ್ಲಿ ಕುಳಿತುಕೊಂಡರು. ಜನರು ಗುಂಪುಗುಂಪಾಗಿ ಅಲ್ಲಿಗೆ ಬಂದರು. ಕುಂಟರುಕುರುಡರುಮೂಕರುಅಂಗವಿಕಲರು ಮುಂತಾದ ಅನೇಕರನ್ನು ತಮ್ಮೊಡನೆ ಕರೆತಂದು ಯೇಸುವಿನ ಪಾದಸನ್ನಿಧಿಯಲ್ಲಿ ಬಿಟ್ಟರು. ಯೇಸು ಅವರನ್ನು ಗಣಪಡಿಸಿದರು. ಮೂಕರು ಮಾತನಾಡುವುದನ್ನೂ ಅಂಗವಿಕಲರು ಸ್ವಸ್ಥರಾಗುವುದನ್ನೂ ಕುಂಟರು ನಡೆಯುವುದನ್ನೂ ಕುರುಡರು ನೋಡುವುದನ್ನೂ ಈ ಜನರು ಕಂಡು ಆಶ್ಚರ್ಯಚಕಿತರಾಗಿ ಇಸ್ರಯೇಲಿನ ದೇವರನ್ನು ಕೊಂಡಾಡಿದರು. ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು, "ಈ ಜನಸ್ತೋಮಕಳೆದ ಮೂರು ದಿನಗಳಿಂದಲೂ ನನ್ನ ಬಳಿ ಇದೆ. ಊಟಕ್ಕೆ ಇವರಲ್ಲಿ ಏನೂ ಇಲ್ಲ. ಇವರನ್ನು ಕಂಡು ನನ್ನ ಹೃದಯ ಕರಗುತ್ತದೆ ಇವರನ್ನು ಹಸಿದ ಹೊಟ್ಟೆಯಲ್ಲಿ ಕಳಿಸಿಬಿಡಲು ನನಗೆ ಇಷ್ಟವಿಲ್ಲದಾರಿಯಲ್ಲಿ ಬಳಲಿ ಬಿದ್ದಾರು," ಎಂದರು. ಅದಕ್ಕೆ ಶಿಷ್ಯರು, "ಇಷ್ಟು ದೊಡ್ಡ ಗುಂಪಿಗೆ ಆಗುವಷ್ಟು ರೊಟ್ಟಿಯನ್ನು ಈ ಅಡವಿಯಲ್ಲಿ ನಾವು ತರುವುದಾದರೂ ಎಲ್ಲಿಂದ?" ಎಂದು ಕೇಳಿದರು. "ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?" ಎಂದು ಯೇಸು ಕೇಳಿದರು. "ಏಳು ರೊಟ್ಟಿಗಳು ಮತ್ತು ಕೆಲವು ಸಣ್ಣ ಮೀನುಗಳಿವೆ," ಎಂದು ಶಿಷ್ಯರು ಉತ್ತರ ಕೊಟ್ಟರು. ಆಗ ಜನ ಸಮೂಹಕ್ಕೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಯೇಸು ಆಜ್ಞಾಪಿಸಿದರು. ಆನಂತರ ಆ ಏಳು ರೊಟ್ಟಿಗಳನ್ನು ಮೀನುಗಳನ್ನು ತೆಗೆದುಕೊಂಡುದೇವರಿಗೆ ಸ್ತೋತ್ರ ಸಲ್ಲಿಸಿಅವುಗಳನ್ನು ಮುರಿದು ತಮ್ಮ ಶಿಷ್ಯರಿಗೆ ಕೊಟ್ಟರುಶಿಷ್ಯರು ಜನರಿಗೆ ಬಡಿಸಿದರು. ಜನರೆಲ್ಲರೂ ಉಂಡು ತೃಪ್ತರಾದರು. ಉಳಿದ ತುಂಡುಗಳನ್ನು ಶಿಷ್ಯರು ಏಳು ಕುಕ್ಕೆಗಳ ತುಂಬ ತುಂಬಿಸಿಕೊಂಡರು.

No comments:

Post a Comment