ಮೊದಲನೇ ವಾಚನ: ಯೆಶಾಯ 48:17-19
ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ
ಸರ್ವೇಶ್ವರಸ್ವಾಮಿಯೆ ನುಡಿದಿಹನು: "ನಿನಗೆ ಕ್ಷೇಮಕರವಾದ ಮಾರ್ಗವನು ಭೋಧಿಸುವವನೂ ನೀ
ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರಸ್ವಾಮಿ ದೇವರು ನಾನು. ಎಷ್ಟೋ
ಚೆನ್ನಾಗಿರುತ್ತಿತ್ತು ನೀ ನನ್ನ ಆಜ್ಞೆಗಳನ್ನು ಪಾಲಿಸಿದ್ದರೆ ಇರುತಿತ್ತು ನಿನಗೆ ಸುಖಶಾಂತಿ
ಮಹಾನದಿಯಂತೆ ನಿನ್ನ ಸತ್ಯಸಂಧತೆ ಸಮುದ್ರ ಅಲೆಗಳಂತೆ. ಅಗಣಿತವಾಗಿರುತಿತ್ತು ನಿನ್ನ ಸಂತತಿ ಕಡಲ
ಮರಳಿನಂತೆ, ನಿನ್ನ ಕರುಳಿನ ಕುಡಿಗಳು ಉಸುಬಿನ
ಅಣುರೇಣುಗಳಂತೆ, ಅವರ ಹೆಸರುಗಳು ಕೆಟ್ಟು
ಅಳಿದುಹೋಗುತ್ತಿರಲಿಲ್ಲ ನನ್ನ ಮುಂದೆ."
ಕೀರ್ತನೆ: 1:1-2,
3, 4, 6
ಶ್ಲೋಕ: ನಾನೇ ಜಗಜ್ಯೋತಿ,
ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ,
ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.
ಶುಭಸಂದೇಶ: ಮತ್ತಾಯ 11:16-19
"ಈ ಪೀಳಿಗೆಯನ್ನು ನಾನು ಯಾರಿಗೆ ಹೋಲಿಸಲಿ? ನಾವು ಕೊಳಲನೂದಲು ನೀವು
ಕುಣಿದಾಡಲಿಲ್ಲ; ನಾವು ಶೋಕಗೀತೆಗಳ ಹಾಡಲು
ನೀವು ಕಣ್ಣೀರಿಡಲಿಲ್ಲ," ಎಂದು ಪೇಟೆಬೀದಿಗಳಲ್ಲಿ
ಕುಳಿತು, ಒಬ್ಬರಿಗೊಬ್ಬರು ಕೂಗಾಡುವ
ಮಕ್ಕಳನ್ನು ಇವರು ಹೋಲುತ್ತಾರೆ. ಏಕೆಂದರೆ, ಯೊವಾನ್ನನು ಬಂದನು; ಅವನು ಅನ್ನಪಾನೀಯವನ್ನು
ಸೇವಿಸಲಿಲ್ಲ. ಅದಕ್ಕೆ 'ಇವನಿಗೆ ದೆವ್ವ ಹಿಡಿದಿದೆ' ಎಂದರು. ನರಪುತ್ರನು ಬಂದನು; ಅನ್ನಪಾನೀಯಗಳನ್ನು ಸೇವಿಸಿದನು. ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಟರ ಗೆಳೆಯ ಎನ್ನುತ್ತಾರೆ. ಆದರೆದೈವಜ್ಞಾನವೇ ನಿಜವಾದ ಜ್ಞಾನವೆಂದು
ಅದರ ಕಾರ್ಯಗಳಿಂದಲೇ ಸಮರ್ಥಿಸಲಾಗುತ್ತದೆ," ಎಂದರು.
No comments:
Post a Comment