ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

22.12.2018

ಮೊದಲನೇ ವಾಚನ: 1  ಸಮುವೇಲ  1:24-28

ಹನ್ನಳು ಮಗನನ್ನು ಶಿಲೋವಿನಲ್ಲಿದ್ದ ಸರ್ವೇಶ್ವರನ ಮಂದಿರಕ್ಕೆ ತಂದಳು. ಅವನು ಇನ್ನೂ ಚಿಕ್ಕವನು ಆಗಿದ್ದನು. ಜೊತೆಗೆ ಅವರು ಮೂರು ವರ್ಷದ ಹೋರಿಯೊಂದನ್ನು, ಹತ್ತು ಕಿಲೋಗ್ರಾಂ ಹಿಟ್ಟನ್ನು ಹಾಗು ಒಂದು ತಿತ್ತಿ ದ್ರಾಕ್ಷಾರಸವನ್ನೂ ತಂದಿದ್ದರು. ಆ ಹೋರಿಯನ್ನು ಬಲಿದಾನ ಮಾಡಿದ ಮೇಲೆ ಮಗುವನ್ನು ಏಲಿಯ ಬಳಿಗೆ ತರಲಾಯಿತು. ಹನ್ನಳು ಏಲಿಗೆ, "ಸ್ವಾಮೀ, ನಿಮ್ಮ ಜೀವದಾಣೆ, ಹಿಂದೊಮ್ಮೆ ಸರ್ವೇಶ್ವರನ ಸನ್ನಿಧಿಯಲ್ಲಿ ಪ್ರಾರ್ಥನೆ ಮಾಡುತ್ತಾ ಇಲ್ಲಿ ನಿಮ್ಮ ಹತ್ತಿರ ನಿಂತಿದ್ದ ಮಹಿಳೆ ನಾನೇ. ಸರ್ವೇಶ್ವರ ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ. ಇವನನ್ನು ಸರ್ವೇಶ್ವರನಿಗೆ ಸಮರ್ಪಿಸಿಬಿಟ್ಟಿದ್ದೇನೆ. ಬದುಕಿರುವ ತನಕ ಇವನು ಅವರಿಗೆ  ಪ್ರತಿಷ್ಠಿತನು," ಎಂದು ಹೇಳಿದಳು. ಬಳಿಕ ಅವರು ಸರ್ವೇಶ್ವರ ಸ್ವಾಮಿಯನ್ನು ಆರಾಧಿಸಿದರು.




ಶ್ಲೋಕ: ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲ್ಲಿ.

ಶುಭಸಂದೇಶ: ಲೂಕ 1:46-56

ಆಗ ಹೀಗೆಂದು ಮರಿಯಳು ಹೊಗಳಿದಳು: "ಎನ್ನ ಮನ ಮಾಡುತ್ತಿದೆ ಸರ್ವೇಶ್ವರನ ಸ್ತುತಿ! ಉಲ್ಲಾಸಿಸುತ್ತಿದೆ ಮುಕ್ತಿದಾತ ದೇವನಲ್ಲಿ! ತನ್ನ ದಾಸಿಯ ದೀನತೆಯನ್ನು ನೆನಪಿಗೆ ತಂದುಕೊಂಡನಾತ! ಧನ್ಯಳೆಂದು ಹೊಗಳುವರೆನ್ನನ್ನು ಇಂದಿನಿಂದ ಸರ್ವ ಜನಾಂಗ! ಏಕೆನೆ ಮಾಡಿಹನೆನಗೆ ಸರ್ವಶಕ್ತನು ಮಹತ್ಕಾರ್ಯ! ನಿಜಕ್ಕೂ ಆತನ ನಾಮಧೇಯ ಪರಮಪೂಜ್ಯ! ಆತನಲ್ಲಿ ಭಯಭಕ್ತಿಯುಳ್ಳವರಿಗೆ! ಆತನ ಪ್ರೀತಿ ತಲತಲಾಂತರದವರೆಗೆ! ಗರ್ವಹೃದಯಿಗಳನಾತ ಚದರಿಸಿರುವನು! ಪ್ರದರ್ಶಿಸಿರುವನು ತನ್ನ ಬಾಹುಬಲವನ್ನು! ಇಳಿಸಿಹನು ಗದ್ದುಗೆಯಿಂದ ಘನಾಧಿಪತಿಗಳನ್ನು! ಏರಿಸಿರುವನು ಉನ್ನತಿಗೆ ದೀನದಲಿತರನ್ನು! ತೃಪ್ತಿಪಡಿಸಿರುವನಾತ ಹಸಿದವರನ್ನು ಮೃಷ್ಟಾನ್ನದಿ! ಹೊರದೂಡಿರುವನು ಸಿರಿವಂತರನು ಬರೀಗೈಯಲ್ಲಿ! ನೆರವಾದನು ತನ್ನ ದಾಸ ಇಸ್ರಯೇಲನಿಗೆ! ಪೂರ್ವಜರಿಗಿತ್ತ ವಾಗ್ದಾನದ ಮೇರೆಗೆ! ಮರೆಯಲಿಲ್ಲ ಆತ ಕರುಣೆತೋರಲು ಅಬ್ರಹಾಮನಿಗೆ! ಅವನ ಸಂತತಿಗೆ, ಯುಗಯುಗಾಂತರದವರೆಗೆ! ಮರಿಯಳು ಸುಮಾರು ಮೂರು ತಿಂಗಳು ಎಲಿಜಬೇತಳೊಡನೆ ತಂಗಿದ್ದು ತನ್ನ ಮನೆಗೆ ಹಿಂದಿರುಗಿದಳು.

No comments:

Post a Comment