27.12.2018

ಮೊದಲನೇ ವಾಚನ: 1 ಯೊವಾನ್ನ  1:1-4

ನಿಮಗೆ ನಾವು ಪ್ರಚುರಪಡಿಸುವ ಸಜೀವವಾಣಿ ಆದಿಯಿಂದ ಇರುವಂಥಾದ್ದು. ಇದನ್ನು ಕಣ್ಣಾರೆ ಕಂಡಿದ್ದೇವೆ, ಮನಸ್ಸಾರೆ ಗ್ರಹಿಸಿದ್ದೇವೆ ಮತ್ತು ಕೈಯರ ಮುಟ್ಟಿದ್ದೇವೆ. ಆ ಜೀವ ಪ್ರತ್ಯಕ್ಷವಾಯಿತು. ಅದನ್ನು ನಾವು ನೋಡಿದ್ದೇವೆ, ಆ ಬಗ್ಗೆ ಸಾಕ್ಷಿ ಹೇಳುತ್ತೇವೆ. ಪಿತನ ಬಳಿಯಿದ್ದು ನಮಗೆ ಪ್ರತ್ಯಕ್ಷವಾದಂಥ ನಿತ್ಯ ಜೀವವನ್ನು ನಮಗೆ ಸಾರುತ್ತೇವೆ. ಪಿತನೊಡನೆಯೂ ಅವರ ಪುತ್ರ ಕ್ರಿಸ್ತಯೇಸುವಿನೊಡನೆಯೂ ನಮಗಿರುವಂಥ ಅನ್ಯೋನ್ಯತೆಯಲ್ಲಿ ನೀವು ಸಹ ಭಾಗಿಗಳಾಗುವಂತೆ ನಾವು ಕಂಡುಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮ್ಮೆಲ್ಲರ ಆನಂದವು ಪರಿಪೂರ್ಣವಾಗುವಂತೆ ಇದನ್ನು ಬರೆಯುತ್ತಿದ್ದೇವೆ.

ಕೀರ್ತನೆ: 97:1-2, 5-6, 11-12

ಶ್ಲೋಕ: ಸಜ್ಜನರೇ, ಪ್ರಭುವಿನಲ್ಲಿ ಆನಂದಿಸಿರಿ.

ಶುಭಸಂದೇಶ: ಯೊವಾನ್ನ  20:2-8

ವಾರದ ಮೊದಲನೆಯ ದಿನ ಮಗ್ದಲದ ಮರಿಯಳು. ಸಿಮೋನ ಪೇತ್ರನ ಮತ್ತು ಯೇಸುವಿಗೆ ಆಪ್ತನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೆ ಓಡಿ ಬಂದು, ಪ್ರಭುವನ್ನು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿಬಿಟ್ಟಿದ್ಧಾರೆ; ಅವರನ್ನು ಎಲ್ಲಿ ಇಟ್ಟಿದ್ದಾರೋ ಗೊತ್ತಿಲ್ಲ."  ಎಂದು ಹೇಳಿದಳು. ಇದನ್ನು ಕೇಳಿ ಪೇತ್ರನು ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಸಮಾಧಿಯನ್ನು ಮೊದಲು ತಲುಪಿದನು. ಅವನು ಬಗ್ಗಿ ನೋಡಿದಾಗ ಅಲ್ಲಿ ನಾರು ಬಟ್ಟೆಗಳು ಬಿದ್ದಿರುವುದು ಕಾಣಿಸಿತು. ಆದರೆ ಅವನು ಒಳಗೆ ನುಗ್ಗಲಿಲ್ಲ. ಅವನ ಹಿಂದೆಯೇ ಸಿಮೋನ ಪೇತ್ರನು ಬಂದು ನೆಟ್ಟಗೆ ಸಮಾಧಿ ಒಳಗೆ ನುಗ್ಗಿದನು; ಅಲ್ಲಿ ನಾರುಮಡಿಗಳು ಬಿದ್ಧಿರುವುದನ್ನು ಕಂಡನು. ಯೇಸುವಿನ ತಲೆಗೆ ಸುತ್ತಿದ ಬಟ್ಟೆ, ಆ ನಾರುಮಡಿಗಳೊಡನೆ ಇರದೆ, ಅದನ್ನು ಮಡಚಿ  ಪ್ರತ್ಯೇಕವಾಗಿ ಇಟ್ಟಿರುವುದನ್ನು ಕಂಡನು. ಸಮಾಧಿಯನ್ನು ಮೊದಲು ತಲುಪಿದ ಇನ್ನೊಬ್ಬ ಶಿಷ್ಯನೂ ಆಮೇಲೆ ಒಳಗೆ ನುಗ್ಗಿ ನೋಡಿದನು; ನೋಡಿ ನಂಬಿದನು.

No comments:

Post a Comment

16.10.2026 - IIಶುಕ್ರವಾರ IIನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿ

  ಮೊದಲನೆಯ ವಾಚನ: ರೋಮನರಿಗೆ 4:1-8 ಸಹೋದರರೇ, ವಂಶಾನುಕ್ರಮವಾಗಿ ನಮ್ಮ ಮೂಲಪಿತನಾದ ಅಬ್ರಹಾಮನ ಅನುಭವವನ್ನು ಕುರಿತು ಏನು ಹೇಳೋಣ? ಆತನು ತನ್ನ ಸತ್ಕಾರ್ಯಗಳಿಂದ ದೇವರೊಡನೆ...