18.01.2019 - "ನಾನು ನಿನಗೆ ಆಜ್ಞಾಪಿಸುತ್ತೇನೆ; ಏಳು...."

ಮೊದಲನೇ ವಾಚನ: ಹಿಬ್ರಿಯರಿಗೆ 4:1-5, 11

ದೇವರು ತಮ್ಮ ವಿಶ್ರಾಂತಿಯ ನೆಲೆಯನ್ನು ನೀಡುವುದಾಗಿ ಮಾಡಿದ ವಾಗ್ದಾನ ಇನ್ನೂ ರದ್ದಾಗದೆ ಉಳಿದಿದೆ. ನಿಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯದೆ ಇರಬಾರದು. ಎಂತಲೇ, ನಾವು ಭಯಭಕ್ತಿಯಿಂದ ಬಾಳೋಣ. ಶುಭವಾರ್ತೆಯನ್ನು ಅವರಿಗೆ ಸಾರಲಾದಂತೆ ನಮಗೂ ಸಾರಲಾಯಿತು. ಅವರು ಅದನ್ನು ಆಲಿಸಿದರು; ಆದರೆ ಅವರಲ್ಲಿ ವಿಶ್ವಾಸವಿರಲಿಲ್ಲ. ಈ ಕಾರಣ, ಅವರು ಕೇಳಿದ ಸಂದೇಶದಿಂದ ಫಲಪಡೆಯದೆ ಹೋದರು. ಲೋಕಾದಿಯಲ್ಲೇ, ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿದ್ದರೂ ಅವರು, "ಸೇರರು ಎನ್ನ ವಿಶ್ರಾಂತಿಯ ನೆಲೆಯನ್ನು ಇವರೆಂದಿಗೂ ಎಂದು ಸಿಟ್ಟುಗೊಂಡು ಶಪಥಮಾಡಿದೆನು," ಎಂದು ಹೇಳಿದ್ದಾರೆ ವಿಶ್ವಾಸಿಸುವ ನಾವಾದರೋ ಆ ವಿಶ್ರಾಂತಿಯ ನೆಲೆಯನ್ನು ಸೇರುತ್ತೇವೆ.  ಪವಿತ್ರಗ್ರಂಥದ ಒಂದೆಡೆಯಲ್ಲಿ, ಏಳನೆಯ ದಿನವನ್ನು ಕುರಿತತು: "ದೇವರು ತಮ್ಮ ಸೃಷ್ಟಿಕಾರ್ಯಗಳನ್ನೆಲ್ಲಾ ಮುಗಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು. ." ಎಂದು ಬರೆದಿದೆ. ಮೇಲೆ ಹೇಳಿದ ವಚನದಲ್ಲಾದರೋ, "ಸೇರರು ಎನ್ನ ವಿಶ್ರಾಂತಿಯ ನೆಲೆಯನು  ಇವರೆಂದಗೂ" ಎಂದಿದೆ. ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಪಡೋಣ. ನಮ್ಮಲ್ಲಿ ಯಾರೂ ಆ ಜನರಂತೆ ಅವಿಧೇಯತೆಯಿಂದ ವರ್ತಿಸಿ ವಿಶ್ವಾಸಭ್ರಷ್ಟರಾಗದೆ ಇರೋಣ.

ಕೀರ್ತನೆ: 78:3-4, 6-8

ಶ್ಲೋಕ: ಮರೆಯರು ನನ್ನ ಜನರು ನನ್ನ ಮಹತ್ಕಾರ್ಯಗಳನು

ಶುಭಸಂದೇಶ: ಮಾರ್ಕ  2:1-12

ಕೆಲವು ದಿನಗಳು ಕಳೆದ ಬಳಿಕ ಯೇಸುಸ್ವಾಮಿ ಮತ್ತೊಮ್ಮೆ ಕಫೆರ್ನವುಮಿಗೆ ಬಂದರು. ಅವರು ಮನೆಯಲ್ಲಿದ್ದಾರೆಂಬ ಸುದ್ದಿ ಹಬ್ಬಿತು. ಜನರು ಗುಂಪುಗುಂಪಾಗಿ ಅಲ್ಲಿಗೆ ಬಂದರು. ಇದರಿಂದಾಗಿ ಮನೆಯೊಳಗೆ ಮಾತ್ರವಲ್ಲ, ಹೊರಗಡೆಯೂ ಸ್ಥಳ ಸಾಲದೆ ಹೋಯಿತು. ಯೇಸು ಅಲ್ಲಿ ಸೇರಿದ ಜನಸ್ತೋಮಕ್ಕೆ ದೇವರ ವಾಕ್ಯವನ್ನು ಬೋಧಿಸತೊಡಗಿದರು. ಆಗ ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರಿಂದ ಹೊರಿಸಿಕೊಂಡು ಕೆಲವರು ಅಲ್ಲಿಗೆ ಬಂದರು. ಜನಸಂದಣಿಯ ನಿಮಿತ ಅವನನ್ನು ಯೇಸುವಿನ ಸಮೀಪಕ್ಕೆ ಸಾಗಿಸಲು ಸಾದ್ಯವಾಗಲಿಲ್ಲ. ಆದುದರಿಂದ ಅವರು ಯೇಸು ಇದ್ದ ಮನೆಯ ಮೇಲ್ಫಾವಣಿಯನ್ನು ತೆರೆದು ದೊಡ್ಡ ಕಿಂಡಿಯೊಂದನ್ನು ಮಾಡಿ, ರೋಗಿಯನ್ನು ಹಾಸಿಗೆಯ ಸಮೇತ ಕೆಳಗಿಳಿಸಿದರು.

ಯೇಸು  ಅವರ ವಿಶ್ವಾಸವನ್ನು ಮೆಚ್ಚಿ ಆ ಪಾರ್ಶ್ವವಾಯು ರೋಗಿಗೆ, "ಮಗು, ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ," ಎಂದರು. ಆಗ ಅಲ್ಲೇ ಕುಳಿತಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, "ಇವನೇಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ! ದೇವರೊಬ್ಬರ ಹೊರತು ಪಾಪಗಳನ್ನು ಕ್ಷಮಿಸಲು ಬೇರೆ ಯಾರಿಂದ ಸಾಧ್ಯ? ಎಂದು ತಮ್ಮ ಮನಸ್ಸಿನಲ್ಲೇ ಆಲೋಚಿಸಿಕೊಳ್ಳುತ್ತಿದ್ದರು. ಅವರು ಹೀಗೆ ಯೋಚಿಸುತ್ತಿರುವುದನ್ನು ಯೇಸು ತಕ್ಷಣ ಗ್ರಹಿಸಿಕೊಂಡು, ಅವರಿಗೆ, "ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುತ್ತಿರುವುದು ಏಕೆ? ಈ ಪಾರ್ಶ್ವವಾಯು ರೋಗಿಗೆ, 'ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,' ಎಂದು ಹೇಳುವುದು ಸುಲಭವೋ ಅಥವಾ 'ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ' ಎನ್ನುವುದು ಸುಲಭವೋ? ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು  ನರಪುತ್ರನಿಗೆ ಅಧಿಕಾರವುಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು." ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, "ನಾನು ನಿನಗೆ ಆಜ್ಞಾಪಿಸುತ್ತೇನೆ; ಏಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗೆ," ಎಂದರು. ಎಲ್ಲರೂ ನೋಡುತ್ತಿದ್ದ ಹಾಗೆ ಅವನು ಎದ್ದು ನಿಂತನು, ತನ್ನ ಹಾಸಿಗೆಯನ್ನು ತಾನೇ ಎತ್ತಿಕೊಂಡು ಹೊರಟುಹೋದನು. ನೆರೆದಿದ್ದ ಎಲ್ಲರೂ ಆಶ್ಚರ್ಯಚಕಿತರಾಗಿ, "ಇಂಥ ಕಾರ್ಯವನ್ನು ನಾವು ನೋಡಿದ್ದೇ ಇಲ್ಲ!", ಎಂದು ದೇವರನ್ನು ಕೊಂಡಾಡಿದರು.

1 comment:

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...