ಮೊದಲನೇ ವಾಚನ: ರೋಮನರಿಗೆ 6:3-11
ಕ್ತಿಸ್ತಯೇಸುವಿನವರಾಗಲು ದೀಕ್ಷಾಸ್ನಾನ ಹೊಂದಿರುವ ನಾವು, ಅವರ ಮರಣದಲ್ಲಿ ಪಾಲುಗಾರರಾಗಲು ದೀಕ್ಷಾಸ್ನಾನ ಪಡೆದೆವು ಎಂಬುದು ನಿಮಗೆ ತಿಳಿಯದೆ? ಹೀಗಿರಲಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡಾಗ ಅವರ ಮರಣದಲ್ಲಿ ಪಾಲುಗಾರರಾದ ನಮಗೆ ಅವರೊಡನೆ ಸಮಾಧಿಯೂ ಆಯಿತು. ಆದುದರಿಂದ ತಂದೆಯ ಮಹಿಮಾಶಕ್ತಿಯಿಂದ ಕ್ರಿಸ್ತಯೇಸು ಮರಣದಿಂದ ಪುನರುತ್ದಾನ ಹೊಂದಿದಂತೆಯೇ ನಾವು ಸಹ ಹೊಸ ಜೀವನವನ್ನು ಹೊಂದಿ ಬಾಳುತ್ತೇವೆ. ಅವರು ಮರಣ ಹೊಂದಿದಂತೆ ನಾವೂ ಅವರೊಂದಿಗೆ ಐಕ್ಯವಾಗಿ ಮರಣವನ್ನು ಹೊಂದುತ್ತೇವೆ. ಅಂತೆಯೇ, ಅವರು ಪುನರುತ್ದಾನ ಆದಂತೆ ನಾವೂ ಅವರೊಡನೆ ಐಕ್ಯವಾಗಿ ಪುನರುತ್ದಾನ ಹೊಂದುತ್ತೇವೆ. ನಮಗೆ ತಿಳಿದಿರುವಂತೆ ಪಾಪಾಧೀನವಾದ ನಮ್ಮ ಸ್ವಭಾವವು ನಾಶವಾಗುವಂತೆಯೂ ಇನ್ನು ಮುಂದೆ ನಾವು ಪಾಪಕ್ಕೆ ದಾಸರಾಗಿರದಂತೆಯೂ ಯೇಸುಕ್ತಿಸ್ತರೊಡನೆ ನಮ್ಮ ಹಳೆಯ ಸ್ವಭಾವವನ್ನು ಶಿಲುಬೆಗೆ ಜಡಿಯಲಾಗಿದೆ. ಹೀಗೆ ಸತ್ತವನು ಪಾಪಬಂಧದಿಂದ ಬಿಡುಗಡೆ ಹೊಂದಿದವನು. ಕ್ತಿಸ್ತಯೇಸುವಿನೊಂದಿಗೆ ನಾವು ಮರಣ ಹೊಂದಿದ್ದರೆ ಅವರೊಡನೆ ನಾವೂ ಜೀವಿಸುತ್ತೇವೆ; ಇದೇ ನಮ್ಮ ವಿಶ್ವಾಸ. ಯೇಸುಕ್ತಿಸ್ತರನ್ನು ಮರಣದಿಂದ ಎಬ್ಬಿಸಲಾಯಿತು ಎಂಬುದನ್ನು ನಾವು ಬಲ್ಲೆವು. ಆದ್ದರಿಂದ ಅವರು ಇನ್ನು ಎಂದಿಗೂ ಸಾಯುವುದಿಲ್ಲ; ಸಾವಿಗೆ ಅವರ ಮೇಲೆ ಯಾವ ಅಧಿಕಾರವೂ ಇಲ್ಲ. ಏಕೆಂದರೆ, ಅವರು ಪಾಪದ ಪಾಲಿಗೆ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ಸತ್ತವರು. ಅವರು ಈಗ ಜೀವಿಸುವುದು ದೇವರಿಗಾಗಿಯೇ. ಅಂತೆಯೇ ನೀವೂ ಸಹ ಪಾಪದ ಪಾಲಿಗೆ ಸತ್ತವರೆಂದೂ ದೇವರಿಗಾಗಿ ಮಾತ್ರ ಯೇಸುಕ್ರಿಸ್ತರಲ್ಲಿ ಜೀವಿಸುವವರೆಂದು ಪರಿಗಣಿಸಿರಿ.
ಕೀರ್ತನೆ: 104:1-2, 5-6, 10, 12-14, 24, 25
ಶ್ಲೋಕ: ನೀ ಉಸಿರನ್ನೂದಲು ಹೊಸದಾಗುವುದು ಪುನಶ್ಚೇತನಗೊಳ್ಳುವುದು ಜಗವೆಲ್ಲವು
ಶುಭಸಂದೇಶ: ಲೂಕ 24:1-12
ಭಾನುವಾರ ಮುಂಜಾನೆ ಆ ಮಹಿಳೆಯರು ತಾವು ಸಿದ್ಧಮಾಡಿದ ಸುಗಂಧ ದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಯ ಬಳಿಗೆ ಬಂದರು. ಸಮಾಧಿಯ ದ್ವಾರಕ್ಕೆ ಮುಚ್ಚಿದ್ದ ಕಲ್ಲು ಅಲ್ಲಿಂದ ಉರುಳಿ ಬಿದ್ದಿತ್ತು. ಒಳಕ್ಕೆ ಪ್ರವೇಶಿಸಿ ನೋಡಿದಾಗ ಪ್ರಭು ಯೇಸುವಿನ ಪಾರ್ಥಿವ ಶರೀರ ಕಾಣಲಿಲ್ಲ ಅವರು ತಬ್ಬಿಬ್ಬಾಗಿ ಅಲ್ಲೇ ನಿಂತರು. ಆಗ ತೇಜೋಮಯವಾದ ಉಡುಪನ್ನು ಧರಿಸಿದ್ದ ಇಬ್ಬರು ವ್ಯಕ್ತಿಗಳು ಫಕ್ಕನೆ ಅಲ್ಲೇ ಕಾಣಿಸಿಕೊಂಡರು. ಮಹಿಳೆಯರು ಭಯಭ್ರಾಂತರಾದರು. ಅವರ ದೃಷ್ಟಿ ನೆಲನಾಟಿತು. ಆಗ ಆ ವ್ಯಕ್ತಿಗಳು, "ಸಜೀವವಾಗಿರುವವರನ್ನು ಸತ್ತವರ ಮಧ್ಯೆ ಹುಡುಕುವುದೇನು? ಅವರು ಇಲ್ಲಿಲ್ಲ; ಪುನರುತ್ದಾನ ಹೊಂದಿದ್ದಾರೆ. ಗಲಿಲೇಯದಲ್ಲಿದ್ದಾಗಲೇ ಅವರು ನಿಮಗೆ, 'ನರಪುತ್ರನು ಪಾಪಿ ಮಾನವರ ಕೈವಶವಾಗಿ, ಶಿಲುಬೆಯ ಮರಣಕ್ಕೀಡಾಗಿ, ಮೂರನೆಯ ದಿನ ಪುನರುತ್ದಾನ ಹೊಂದಬೇಕಾಗಿದೆ," ಎಂದು ತಿಳಿಸಿದ್ದನ್ನು ಮರೆತು ಬಿಟ್ಟಿರೋ?" ಎಂದರು. ಆಗ ಆ ಮಹಿಳೆಯರಿಗೆ ಯೇಸುಸ್ವಾಮಿಯ ಆ ಮಾತುಗಳು ಜ್ಞಾಪಕಕ್ಕೆ ಬಂದವು. ಅವರು ಸಮಾಧಿಯಿಃದ ಹಿಂದಿರುಗಿ ಹೋಗಿ ನಡೆದುದೆಲ್ಲವನ್ನು ಹನ್ನೊಂದು ಮಂದಿ ಶಿಷ್ಯರಿಗೂ ಮತ್ತಿತರರಿಗೂ ತಿಳಿಸಿದರು. ಆ ಮಹಿಳೆಯರ ಹೆಸರುಗಳು: ಮಗ್ದಲದ ಮರಿಯಳು, ಯೊವಾನ್ನಳು ಮತ್ತು ಯಕೋಬನ ತಾಯಿಯಾದ ಮರಿಯಳು. ಇವರಲ್ಲದೆ ಇವರ ಸಂಗಡ ಇದ್ದ ಇತರ ಮಹಿಳೆಯರೂ ಪ್ರೇಷಿತರಿಗೆ ಈ ಸುದ್ಧಿಯನ್ನು ತಿಳಿಸಿದರು. ಪ್ರೇಷಿತರಾದರೋ ಇದೆಲ್ಲ ಕಟ್ಟುಕತೆಯೆಂದು ಭಾವಿಸಿ ನಂಬದೆ ಹೋದರು. ಆದರೆ ಪೇತ್ರನು ಎದ್ದು ಸಮಾಧಿಯ ಬಳಿಗೆ ಧಾವಿಸಿದನು. ಸಮಾಧಿಯೊಳಕ್ಕೆ ಬಗ್ಗಿ ನೋಡಿದಾಗ, ಶವಕ್ಕೆ ಸುತ್ತಿದ್ದ ನಾರುಮಡಿ ವಸ್ತ್ರಗಳು ಮಾತ್ರ ಅಲ್ಲಿ ಬಿದ್ದಿರುವುದನ್ನು ಕಂಡನು. ಇವೆಲ್ಲಾ ಎಷ್ಟೋ ಆಶ್ಚರ್ಯಕರವಾಗಿದೆ ಎಂದುಕೊಂಡು ಹಿಂದಿರುಗಿದನು.
No comments:
Post a Comment