ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 18:23-28
ಪೌಲನು ಅಂತಿಯೋಕ್ಯದಲ್ಲಿ ಕೆಲಕಾಲವಿದ್ದು ಪನಃ ಹೊರಟು ನಲಾತ್ಯ ಮತ್ತು ಫ್ರಿಜಿಯ ಪ್ರದೇಶಗಳಲ್ಲಿ ಸಂಚರಿಸುತ್ತಾ ಭಕ್ತರೆಲ್ಲರನ್ನು ದೃಡಪಡಿಸಿದನು. ಅಲೆಕ್ಸಾಂಡ್ರಿಯದ ಅಪೊಲ್ಲೋಸ್ ಎಂಬ ಯೆಹೂದ್ಯನು ಎಫೆಸಕ್ಕೆ ಬಂದಿದ್ದನು. ಅವನೊಬ್ಬ ಉತ್ತಮ ಬಾಷಣಕಾರ ಹಾಗೂ ಪವಿತ್ರಗ್ರಂಥದಲ್ಲಿ ಪಾಂಡಿತ್ಯ ಪಡೆದವನು. ಪ್ರಭುವಿನ ಮಾರ್ಗದ ಬಗ್ಗೆ ಅವನಿಗೆ ಉಪದೇಶಮಾಡಲಾಗಿತ್ತು. ಸ್ನಾನಿಕ ಯೊವಾನ್ನನ ಸ್ನಾನದೀಕ್ಷೆ ಒಂದನ್ನೇ ಅವನು ಬಲ್ಲವನಾಗಿದ್ದನು. ಆದರೂ ಯೇಸುಸ್ವಾಮಿಯ ಬಗ್ಗೆ ಉತ್ಸಾಹಭರಿತನಾಗಿ ಉಪದೇಶಮಾಡಿ ಚ್ಯುತಿಯಿಲ್ಲದೆ ಬೋಧಿಸುತ್ತಾ ಬಂದನು. ಇವನು ಪ್ರಾರ್ಥನಾಮಂದಿರದಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದಾಗ, ಪ್ರಿಸ್ಸಿಲ ಮತ್ತು ಅಕ್ವಿಲರು ಅವನ ಬೋಧನೆಯನ್ನು ಕೇಳಿದರು. ಅವನನ್ನು ಮನೆಗೆ ಕರೆದುಕೊಂಡು ಹೋಗಿ ಪ್ರಭುವಿನ ಮಾರ್ಗವನ್ನು ಇನ್ನೂ ಸೂಕ್ಷ್ಮವಾಗಿ ವಿವರಿಸಿದರು. ಇವನು ಅಖಾಯದ ಭಕ್ತಾದಿಗಳಿಗೆ ಪತ್ರ ಬರೆದು, ಇವನನ್ನು ಸ್ವಾಗತಿಸುವಂತೆ ಬಿನ್ನವಿಸಿದರು. ಇವನು ಅಲ್ಲಿಗೆ ಹೋಗಿ ದೇವರ ಕೃಪೆಯಿಂದ ವಿಶ್ವಾಸಿಗಳಾಗಿದ್ದವರಿಗೆ ಬಹುವಾಗಿ ನೆರವಾದನು. ಹೇಗೆಂದರೆ, ಪವಿತ್ರಗ್ರಂಥಾನುಸಾರ ಯೇಸುವೇ ಲೋಕೋದ್ಧಾರಕನೆಂದು ಖಚಿತಪಡಿಸಿ ಯೆಹೂದ್ಯರನ್ನು ಎಲ್ಲರ ಮುಂದೆ ಬಹಿರಂಗವಾಗಿ ಪ್ರತಿಭಟಿಸಿದನು
ಕೀರ್ತನೆ: 47:2-3, 8-9, 10
ಶ್ಲೋಕ: ದೇವನು ಭೂಮಂಡಲಕ್ಕೆಲ್ಲಾ ಒಡೆಯನು
ಶುಭಸಂದೇಶ: ಯೊವಾನ್ನ 16:23-28
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ಆ ದಿನದಂದು ನನ್ನಿಂದ ನೀವೇನನ್ನೂ ಕೇಳುವಂತಿಲ್ಲ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಪಿತನಲ್ಲಿ ಏನನ್ನು ಬೇಡಿಕೊಂಡರೂ ನಿಮಗೆ ಅವರು ನನ್ನ ಹೆಸರಿನಲ್ಲಿ ಕೊಟ್ಟೇ ತೀರುವರು. ಈ ತನಕ ನನ್ನ ಹೆಸರಿನಲ್ಲಿ ನೀವೇನನ್ನೂ ಕೇಳಲಿಲ್ಲ. ಕೇಳಿ, ನಿಮಗೆ ದೊರಕುವುದು. ಆಗ ನಿಮ್ಮ ಆನಂದವು ತುಂಬಿ ತುಳುಕುವುದು. ಈ ಸಂಗತಿಗಳನ್ನೆಲ್ಲಾ ನಿಮಗೆ ಸಾಮತಿಗಳ ರೂಪದಲ್ಲಿ ತಿಳಿಸಿರುವೆನು. ಕಾಲವು ಬರಲಿದೆ. ಆಗ ಸಾಮತಿಗಳನ್ನು ಬಳಸದೆ ಸ್ಪಷ್ಟವಾದ ಮಾತಿನಲ್ಲಿ ಪಿತನನ್ನು ಕುರಿತು ನಿಮಗೆ ತಿಳಿಸುವೆನು. ಆ ಕಾಲವು ಬಂದಾಗ ನನ್ನ ಹೆಸರು ಹೇಳಿ ನೀವೇ ಪಿತನಲ್ಲಿ ಬೇಡುವಿರಿ. ನಿಮ್ಮ ಪರವಾಗಿ ನಾನು ಪಿತನಲ್ಲಿ ಬೇಡಿಕೊಳ್ಳುವೆನೆಂದು ನಾನು ಹೇಳುವುದಿಲ್ಲ. ಕಾರಣ, ಪಿತನೇ ನಿಮ್ಮನ್ನು ಪ್ರೀತಿಸುತ್ತಾರೆ. ನೀವು ನನ್ನನ್ನು ಪ್ರೀತಿಸಿ ನಾನು ಅವರಿಂದ ಬಂದವನೆಂದು ವಿಶ್ವಾಸಿಸಿದ್ದರಿಂದ ಪಿತನಿಗೆ ನಿಮ್ಮ ಮೇಲೆ ಅಕ್ಕರೆಯಿದೆ. ಹೌದು, ನಾನು ಪಿತನಿಂದಲೇ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ಈಗ ಈ ಲೋಕವನ್ನು ಬಿಟ್ಟು ಪಿತನಲ್ಲಿಗೆ ಹೋಗುತ್ತಿದ್ದೇನೆ."
No comments:
Post a Comment