ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 16:1-10
ಪೌಲನು ದೆರ್ಬೆಗೂ ಅಲ್ಲಿಂದ ಲುಸ್ತ್ರಕ್ಕೂ ಪ್ರಯಾಣಮಾಡಿದನು. ತಿಮೊಥೇಯ ಎಂಬ ಕ್ರೈಸ್ತಭಕ್ತನು ಅಲ್ಲಿ ವಾಸಿಸುತ್ತಿದ್ದನು. ಅವನ ತಾಯಿ ಯೆಹೂದ್ಯಳು ಹಾಗೂ ಕ್ರೈಸ್ತಭಕ್ತಳು. ತಂದೆಯಾದರೋ ಗ್ರೀಕನು. ಲುಸ್ತ್ರ ಮತ್ತು ಇಕೋನಿಯದ ಸಹೋದರರೆಲ್ಲರಿಗೆ ತಿಮೊಥೇಯನ ಬಗ್ಗೆ ಸದಭಿಪ್ರಾಯವಿತ್ತು. ಪೌಲನು ತಿಮೊಥೇಯನನ್ನು ತನ್ನೊಡನೆ ಕರೆದುಕೊಂಡು ಹೋಗಲು ಅಪೇಕ್ಷಿಸಿದನು. ಆ ಪ್ರದೇಶದಲ್ಲಿದ್ದ ಯೆಹೂದ್ಯರಿಗೆ ತಿಮೊಥೇಯನ ತಂದೆ ಗ್ರೀಕನೆಂದು ತಿಳಿದಿದ್ದುರಿಂದ ಅವನಿಗೆ ಸುನ್ನತಿ ಮಾಡಿಸಿದನು. ಊರಿಂದ ಊರಿಗೆ ಪ್ರಯಾಣ ಮಾಡುತ್ತಾ, ಜೆರುಸಲೇಮಿನಲ್ಲಿದ್ದ ಪ್ರೇಷಿತರೂ ಸಭಾಪ್ರಮುಖರೂ ನಿರ್ಧರಿಸಿದ ನಿಯಮಗಳನ್ನು ಭಕ್ತರಿಗೆ ಬೋದಿಸುತ್ತಾ, ಅವುಗಳನ್ನು ಪಾಲಿಸುವಂತೆ ಹೇಳಿದನು. ಹೀಗೆ ಕ್ರೈಸ್ತಸಭೆಗಳು ವಿಶ್ವಾಸದಲ್ಲಿ ದೃಡಗೊಂಡು ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಬೆಳೆಯತೊಡಗಿತು. ಏಷ್ಯದಲ್ಲಿ ಅವರು ಶುಭಸಂದೇಶವನ್ನು ಸಾರಕೂಡದೆಂದು ಪವಿತ್ರಾತ್ಮ ನಿಷೇಧಿಸಿದ್ದರಿಂದ ಅವರು ಫ್ರಿಜಿಯ ಮತ್ತು ಗಲಾತ್ಯ ಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು. ಮೂಸಿಯದ ಗಡಿಯನ್ನು ತಲುಪಿದಾಗ ಅವರು ಬಿಥೂನಿಯ ಪ್ರಾಂತ್ಯಕ್ಕೆ ಹೋಗಲು ಯತ್ನಿಸಿದರು. ಯೇಸುವಿನ ಆತ್ಮ ಅಲ್ಲಿಗೆ ಹೋಗಲು ಸಹ ಅವರನ್ನು ಬಿಡಲಿಲ್ಲ. ಆದುದರಿಂದ ಅವರು ಮೂಸಿಯವನ್ನು ಹಾದು ನೇರವಾಗಿ ತ್ರೋವಕ್ಕೆ ಹೋದರು. ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು; ಮಕೆದೋನಿಯದ ಒಬ್ಬ ವೆಕ್ತಿ ಅಲ್ಲಿ ನಿಂತು, "ಮಕೆದೋನಿಯಕ್ಕೆ ಬಂದು ನಮಗೆ ಸಹಾಯಮಾಡಿ," ಎಂದು ಅಂಗಲಾಚಿದನು. ಪೌಲನಿಗೆ ಈ ದರ್ಶನವಾದ ತಕ್ಷಣ ಆ ಜನರಿಗೆ ಶುಭಸಂದೇಶವನ್ನು ಸಾರಲು ದೇವರು ನಮ್ಮನ್ನು ಕರೆದಿದ್ದಾರೆಂದು ನಾವು ಅರಿತುಕೊಂಡು ಮಕೆದೋನಿಯಕ್ಕೆ ಹೋಗಲು ಸಿದ್ಧರಾದೆವು.
ಕೀರ್ತನೆ: 100: 1-2, 3, 5
ಶ್ಲೋಕ: ಭೂನಿವಾಸಿಗಳೇ, ಜಯಘೋಷಮಾಡಿ ಪ್ರಭುವಿಗೆ
ಶುಭಸಂದೇಶ: ಯೊವಾನ್ನ 15:18-21
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ಲೋಕವು ನಿಮ್ಮನ್ನು ದ್ವೇಷಿಸಿದರೆ, ನನ್ನ ಮೇಲೆ ಅದಕ್ಕೆ ದ್ವೇಷವಿತ್ತೆಂಬುದನ್ನು ನೆನಪಿನಲ್ಲಿಡಿ. ನೀವು ಲೋಕದ ಕಡೆಯವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಮಮತೆಯಿಂದ ಕಾಣುತ್ತಿತ್ತು. ನೀವಾದರೋ ಲೋಕದ ಕಡೆಗೆ ಸೇರಿದವರಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿರುವುದರಿಂದ. ನೀವು ಲೋಕದಿಂದ ಬೇರ್ಪಟ್ಟಿದ್ದೀರಿ. ಎಂದೇ ಲೋಕಕ್ಕೆ ನಿಮ್ಮ ಮೇಲೆ ದ್ವೇಷವಿದೆ. ಧಣಿಗಿಂತಲೂ ದಾಸನು ದೊಡ್ಡವನಲ್ಲವೆಂದು ನಾನು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿ, ನನ್ನನ್ನು ಅವರು ಹಿಂಸೆಗೆ ಗುರಿಮಾಡುವರು. ನನ್ನ ಬೋಧನೆಯ ಮಾತನ್ನೂ ಅವರು ಅನುಸರಿಸಿ ನಡೆದರೆ ನಿಮ್ಮ ಬೋಧನೆಯ ಮಾತನ್ನು ಅನುಸರಿಸಿ ನಡೆಯುವರು. ನೀವು ನನ್ನವರಾದುದರಿಂದ ಅವರು ನಿಮ್ಮನ್ನು ಹೀಗೆ ಕಾಣುವರು. ಏಕೆಂದರೆ ನನ್ನನ್ನು ಕಳುಹಿಸಿದಾತನನ್ನು ಅವರು ಅರಿಯರು."
No comments:
Post a Comment