ಮೊದಲನೇ ವಾಚನ: 2 ಕೊರಿಂಥಿಯರಿಗೆ 3:15-4:1, 3-6
ಹೌದು ಮೋಶೆ ಬರೆದುದನ್ನು ಓದುವಾಗಲೆಲ್ಲಾ ಅವರ ಮನಸ್ಸು ಇಂದಿಗೂ ಅದೇ ಮುಸುಕಿನಿಂದ ಮುಚ್ಚಿದೆ. "ಪ್ರಭುವಿಗೆ ಅಭಿಮುಖರಾದಾಗ ಮಾತ್ರ ಆ ಮುಸುಕನ್ನು ತೆಗೆಯಲಾಗುತ್ತದೆ." ಈ ವಾಕ್ಯದಲ್ಲಿ 'ಪ್ರಭು' ಎಂದರೆ ದೇವರ ಆತ್ಮವೇ. ಪ್ರಭುವಿನ ಆತ್ಮ ಎಲ್ಲಿದೆಯೋ ಅಲ್ಲಿ ವಿಮೋಚನೆಯೂ ಇದೆ. ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ. ದೇವರ ಕರುಣೆಯಿಂದ ಈ ಸೇವೆಯನ್ನು ಕೈಗೊಂಡಿರುವ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ. ನಾವು ಪ್ರಚಾರಮಾಡುವ ಶುಭಸಂದೇಶ ಕೆಲವರಿಗೆ ಇನ್ನೂ ಮುಸುಕಿನ ಮರೆಯಾಗಿದ್ದರೆ, ಹಾಗಿರುವುದು ವಿನಾಶ ಮಾರ್ಗದಲ್ಲಿರುವವರಿಗೆ ಮಾತ್ರ. ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ. ನಾವು ನಮ್ಮನ್ನೇ ಕುರಿತು ಪ್ರಚಾರಮಾಡುತ್ತಿಲ್ಲ. ಆದರೆ ಕ್ರಿಸ್ತಯೇಸುವೇ ಪ್ರಭುವೆಂದು ಅವರಿಗೋಸ್ಕರ ನಾವು ನಿಮ್ಮ ದಾಸರೆಂದೂ ಪ್ರಚುರಪಡಿಸುತ್ತಿದ್ದೇವೆ. "ಕತ್ತಲೆಯಿಂದ ಬೆಳಕು ಹೊಳೆಯಲಿ," ಎಂದು ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.
ಕೀರ್ತನೆ: 85:9, 10, 11-12, 13-14
ಶ್ಲೋಕ: ಪ್ರಭು ಕೊಟ್ಟೇ ತೀರುವನು ಒಳಿತನು, ನಮ್ಮ ನಾಡು ನೀಡುವುದು ಬೆಳೆಯನು
ಶುಭಸಂದೇಶ: ಮತ್ತಾಯ 5:20-26
No comments:
Post a Comment