ಮೊದಲನೇ ವಾಚನ: 2 ಕೊರಿಂಥಿಯರಿಗೆ 4:7-15
ನಾವು ಇಂಥ ಆಧ್ಯಾತ್ಮಿಕ ಮಾಣಿಕ್ಯವನ್ನು ಪಡೆದಿದ್ದರೂ ಮಣ್ಣಿನ ಮಡಕೆಗಳಂತೆ ಇದ್ದೇವೆ. ಹೀಗೆ, ಈ ಪರಮೋನ್ನತ ಶಕ್ತಿ ನಮಗೆ ಸೇರಿದ್ದಲ್ಲ, ದೇವರಿಗೆ ಸೇರಿದ್ದೆಂದು ವ್ಯಕ್ತವಾಗುತ್ತದೆ. ನಾವು ಇಕ್ಕಟ್ಟು ಬಿಕ್ಕಟ್ಟುಗಳಿಗೆ ಒಳಗಾಗಿದ್ದರೂ ನಜ್ಜುಗುಜ್ಜಾಗಲಿಲ್ಲ; ಸಂಶಯ ಸಂದೇಹಗಳಿಗೊಳಗಾದರೂ ನಿರಾಶೆಗೊಳ್ಳಲಿಲ್ಲ. ಶತ್ರುಗಳು ಅನೇಕರಿದ್ದರೂ ಮಿತ್ರನೊಬ್ಬನು ಇಲ್ಲದಿರಲಿಲ್ಲ. ಪ್ರಾಣಹಿಂಸೆಗಳಿಗೀಡಾಗಿದ್ದರೂ ಪ್ರಾಣನಷ್ಟವನ್ನು ಅನುಭವಿಸಲಿಲ್ಲ ಯೇಸುವಿನ ದಿವ್ಯಜೀವವು ನಮ್ಮ ದೇಹದಲ್ಲಿ ಗೋಚರವಾಗುವಂತೆ ಅವರ ಮರಣಯಾತನೆಯನ್ನು ನಿರಂತರವಾಗಿ ಅನುಭವಿಸುತ್ತಾ ಬಾಳುತ್ತಿದ್ದೇವೆ. ಯೇಸುವಿನ ಅಮರ ಜೀವವು ನಮ್ಮ ನಶ್ವರ ಶರೀರದಲ್ಲಿ ಗೋಚರವಾಗುವಂತೆ ಬದುಕಿರುವಾಗಲೇ ನಾವು ಯೇಸುವಿಗೋಸ್ಕರ ಸತತ ಸಾವಿಗೆ ಈಡಾಗಿದ್ದೇವೆ. ಹೀಗೆ ನಮ್ಮಲ್ಲಿ ನಾವು ಕಾರ್ಯಗತವಾಗುತ್ತಿದ್ದರೆ ನಿಮ್ಮಲ್ಲಿ ಜೀವ ಕಾರ್ಯಗತವಾಗುತ್ತಿದೆ. "ನಾನು ವಿಶ್ವಾಸವಿಟ್ಟೆನು. ಆದ್ದರಿಂದ ಮಾತನಾಡಿದೆನು," ಎಂದು ಪವಿತ್ರಗ್ರಂಥದಲ್ಲಿ ಬರೆಯಲಾಗಿದೆ. ಇದೇ ಮನೋಭಾವನೆಯಿಂದ ಕೂಡಿರುವ ನಾವು ಮಾತನಾಡಲೇಬೇಕು. ಏಕೆಂದರೆ, ನಮಗೆ ವಿಶ್ವಾಸವಿದೆ. ಪ್ರಭು ಯೇಸುವನ್ನು ಪುನರುತ್ದಾನಗೊಳಿಸಿದ ದೇವರು ನಮ್ಮನ್ನು ಯೇಸುಕ್ರಿಸ್ತರೊಡನೆ ಪುನರುತ್ದಾನಗೊಳಿಸಿ ತಮ್ಮ ಸಾನ್ನಿಧ್ಯಕ್ಕೆ ಬರಮಾಡಿಕೊಳ್ಳುವರು. ಇದೆಲ್ಲವೂ ನಿಮ್ಮ ಒಳಿತಿಗಾಗಿಯೇ ಹೀಗೆ ಅನೇಕರಲ್ಲಿ ದೇವರ ವರಪ್ರಸಾದವು ಉಕ್ಕಿ ಹರಿಯುವುದು; ಅವರಲ್ಲಿ ಕೃತಜ್ಞತಾ ಭಾವನೆಯನ್ನು ಹೆಚ್ಚಿಸುವುದು; ಇದರಿಂದಾಗಿ ದೇವರ ಮಹಿಮೆ ಬೆಳಗುವುದು.
ಕೀರ್ತನೆ: 116:10--11, 15--16, 17--18
ಶ್ಲೋಕ: ನಾ ನುಡಿದೆನಾದರೂ "ಬಹಳ ಸಂಕಟದಲ್ಲಿರುವೆ"ನೆಂದು
ಶುಭಸಂದೇಶ: ಮತ್ತಾಯ 5:27--32
ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ವ್ಯಭಿಚಾರ ಮಾಡಕೂಡದು ಎಂಬ ನಿಯಮವನ್ನು ನೀವು ಕೇಳಿದ್ದೀರಿ; ಆದರೆ ನಾನು ಹೇಳುತ್ತೇನೆ, ಕೇಳಿ: ಪರಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ತನ್ನ ಹೃದಯದಲ್ಲಿ ಆಕೆಯೊಡನೆ ಆಗಲೇ ವ್ಯಭಿಚಾರ ಮಾಡಿದವನೇ ಆಗುತ್ತಾನೆ. ನಿನ್ನ ಬಲಗಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತೆಸೆದುಬಿಡು; ನಿನ್ನ ಇಡೀ ದೇಹ ನರಕಕ್ಕೆ ತುತ್ತಾಗುವುದಕ್ಕಿಂತ ನಿನ್ನ ಒಂದು ಅಂಗ ನಾಶವಾಗುವುದೇ ಲೇಸು. ನಿನ್ನ ಬಲಗೈ ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಬಿಸಾಡಿಬಿಡು; ನಿನ್ನ ಇಡೀ ದೇಹ ನರಕದ ಪಾಲಾಗುವುದಕಿಂತ ಒಂದು ಅವಯವ ನಾಶವಾಗುವುದು ಎಷ್ಟೋ ಮೇಲು. ಇದಲ್ಲದೆ, "ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ವಿವಾಹ ವಿಚ್ಛೇದನ ಪತ್ರವನ್ನು ಅವಳಿಗೆ ಕೊಡಲಿ," ಎಂದು ವಿಧಿಸಲಾಗಿದೆ. ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ: ತನ್ನ ಹೆಂಡತಿಯ ದುರ್ನಡತೆಯ ಕಾರಣದಿಂದಲ್ಲದೆ, ಅವಳನ್ನು ಬಿಟ್ಟುಬಿಡುವವನು ಅವಳನ್ನು ವ್ಯಭಿಚಾರಿಣಿಯಾಗುವುದಕ್ಕೆ ಕಾರಣನಾಗುತ್ತಾನೆ. ಅಲ್ಲದೆ ಗಂಡಬಿಟ್ಟವಳನ್ನು ಮದುವೆಯಾಗುವವನು ಕೂಡ ವ್ಯಭಿಚಾರಿಯಾಗುತ್ತಾನೆ."
ಮನಸಿಗೊಂದಿಷ್ಟು : ನಮ್ಮ ಪಾಪಕ್ಕೆ ಕಾರಣವಾಗುವ ಯಾವುದೇ ಅಂಶವಾಗಲಿ ಅದನ್ನು ತ್ಯಜಿಸಿ ನರಕದಿಂದ ತಪ್ಪಿಸಿಕೊಳ್ಳಬೇಕೆಂಬ ಆಶಯದಲ್ಲಿದೆ ಇಂದಿನ ಶುಭ ಸಂದೇಶ. ನೈತಿಕತೆಯಲ್ಲಿ ನಾವೆಷ್ಟು ಪರಿಶುದ್ಧರಾಗಿರಬೇಕೆಂಬುದನ್ನು ಯೇಸು ನಮಗೆ ಸೂಚಿಸುತ್ತಿರುವಾಗ ನಮ್ಮ ಪಾಪಕ್ಕೆ ಕಾರಣವಾಗುವ ವಿಷಯಗಳತ್ತ ನಾವು ಆತ್ಮವಾಲೋಕನ ಮಾಡಿಕೊಳ್ಳಬೇಕಾಗಿದೆ. ವ್ಯಭಿಚಾರದ ಹೊಸ ವಾಖ್ಯಾನವನ್ನೇ ನೀಡುತ್ತಾ ನಮ್ಮನ್ನು ಎಚ್ಚರಿಸುತ್ತಿದ್ದಾರೆ .
ಪ್ರಶ್ನೆ : ನಮ್ಮ ಪಾಪಕ್ಕೆ ಕಾರಣವಾಗುವ ಅಂಶಗಳಾವುವು ?
ಮನಸಿಗೊಂದಿಷ್ಟು : ನಮ್ಮ ಪಾಪಕ್ಕೆ ಕಾರಣವಾಗುವ ಯಾವುದೇ ಅಂಶವಾಗಲಿ ಅದನ್ನು ತ್ಯಜಿಸಿ ನರಕದಿಂದ ತಪ್ಪಿಸಿಕೊಳ್ಳಬೇಕೆಂಬ ಆಶಯದಲ್ಲಿದೆ ಇಂದಿನ ಶುಭ ಸಂದೇಶ. ನೈತಿಕತೆಯಲ್ಲಿ ನಾವೆಷ್ಟು ಪರಿಶುದ್ಧರಾಗಿರಬೇಕೆಂಬುದನ್ನು ಯೇಸು ನಮಗೆ ಸೂಚಿಸುತ್ತಿರುವಾಗ ನಮ್ಮ ಪಾಪಕ್ಕೆ ಕಾರಣವಾಗುವ ವಿಷಯಗಳತ್ತ ನಾವು ಆತ್ಮವಾಲೋಕನ ಮಾಡಿಕೊಳ್ಳಬೇಕಾಗಿದೆ. ವ್ಯಭಿಚಾರದ ಹೊಸ ವಾಖ್ಯಾನವನ್ನೇ ನೀಡುತ್ತಾ ನಮ್ಮನ್ನು ಎಚ್ಚರಿಸುತ್ತಿದ್ದಾರೆ .
ಪ್ರಶ್ನೆ : ನಮ್ಮ ಪಾಪಕ್ಕೆ ಕಾರಣವಾಗುವ ಅಂಶಗಳಾವುವು ?
No comments:
Post a Comment