ಮೊದಲನೇ ವಾಚನ: ಆದಿಕಾಂಡ 15:1-12, 17-18
ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯ ದರ್ಶನ ಆಯಿತು. ಅದರಲ್ಲಿ ಸರ್ವೇಶ್ವರಸ್ವಾಮಿಯ ಈ ವಾಣಿ ಕೇಳಿಸಿತು: "ಅಬ್ರಾಮನೇ, ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ." ಅದಕ್ಕೆ ಪ್ರತ್ಯುತ್ತರವಾಗಿ ಅಬ್ರಾಮನು -- "ಸ್ವಾಮಿ ಸರ್ವೇಶ್ವರಾ, ನನಗೆ ಏನು ಕೊಟ್ಟರೇನು? ನಾನು ಪುತ್ರಸಂತಾನವಿಲ್ಲದವನು. ನನ್ನ ಮನೆ ಮಾರುಗಳಿಗೆ ಉತ್ತರಾಧಿಕಾರಿ ದಮಸ್ಕದ ಎಲೀಯೆಜರನೇ ಹೊರತು ಮತ್ತಾರೂ ಇಲ್ಲ, ನೀವು ನನಗೆ ಮಕ್ಕಳನ್ನು ಕೊಟ್ಟಿಲ್ಲ. ನನ್ನ ಮನೆದಾಸನೇ ನನಗೆ ಉತ್ತರಾಧಿಕಾರಿ," ಎಂದನು. ಮತ್ತೆ ಸ್ವಾಮಿಯ ವಾಣಿ -- "ಇಲ್ಲ, ಅವನು ಉತ್ತಾರಾಧಿಕಾರಿಯಾಗುವುದಿಲ್ಲ. ನಿನ್ನಿಂದ ಹುಟ್ಟಿದವನೇ ನಿನಗೆ ಉತ್ತಾರಾಧಿಕಾರಿ ಆಗುತ್ತಾನೆ," ಎಂದಿತು. ಸರ್ವೇಶ್ವರ ಬಳಿಕ ಅಬ್ರಾಮನನ್ನು ಹೊರಗೆ ಕರೆತಂದು, "ಆಕಾಶದ ಕಡೆಗೆ ನೋಡು. ಆ ನಕ್ಷತ್ರಗಳನ್ನು ನಿನ್ನಿಂದಾದರೆ ಲೆಕ್ಕಿಸು. ನಿನ್ನ ಸಂತಾನವು ಅಷ್ಟು ಅಸಂಖ್ಯಾತವಾಗುವುದು!" ಎಂದರು. ಅಬ್ರಾಮನು ಸರ್ವೇಶ್ವರಸ್ವಾಮಿಯಲ್ಲಿ ವಿಶ್ವಾಸವಿಟ್ಟನು. ಅವರು ಅವನ ವಿಶ್ವಾಸವೇ ಸರಿಯಾದ ಸಂಬಂಧವೆಂದು ಪರಿಗಣಿಸಿದರು. ಸರ್ವೇಶ್ವರ ಬಳಿಕ ಅಬ್ರಾಮನಿಗೆ ಇಃತೆಂದರು: "ಈ ನಾಡನ್ನು ನಿನಗೆ ಸ್ವತ್ತಾಗಿ ಕೊಡಬೇಕೆಂದು ಬಾಬಿಲೋನಿನಲ್ಲಿರುವ ಊರ್ ಪಟ್ಟಣದಿಂದ ನಿನ್ನನ್ನು ಬರಮಾಡಿದ ಸರ್ವೇಶ್ವರ ನಾನೇ," ಎಂದರು. ಅದಕ್ಕೆ ಅಬ್ರಾಮನು, "ಸರ್ವೇಶ್ವರಾ, ಇದು ನನ್ನ ಸೊತ್ತು ಎಂದು ತಿಳಿದುಕೊಳ್ಳುವುದು ಹೇಗೆ?" ಎಂದನು. ಸರ್ವೇಶ್ವರ ಪ್ರತ್ಯುತ್ತರವಾಗಿ, "ನೀನು ಮೂರು ಮೂರು ವರ್ಷದ ಒಂದು ಕಬಸನ್ನು, ಒಂದು ಆಡನ್ನು, ಒಂದು ಟಗರನ್ನು, ಒಂದು ಬೆಳವಕ್ಕಿಯನ್ನು ಹಾಗೂ ಒಂದು ಮರಿಪಾರಿವಾಳವನ್ನು ತೆಗೆದುಕೊಂಡು ಬಾ," ಎಂದರು. ಅಬ್ರಾಮನು ಅವುಗಳನ್ನೆಲ್ಲಾ ತೆಗೆದುಕೊಂಡು ಬಂದು ಆ ಪ್ರಾಣಿಗಳನ್ನು ಕಡಿದು, ಎರಡೆರಡು ಹೋಳು ಮಾಡಿ, ತುಂಡಿಗೆ ತುಂಡನ್ನು ಎದುರಾಗಿಟ್ಟನು. ಪಕ್ಷಿಗಳನ್ನು ಮಾತ್ರ ಕಡಿಯಲಿಲ್ಲ ಆ ಪ್ರಾಣಿಗಳ ತುಂಡುಗಳ ಮೇಲೆ ರಣಹದ್ದುಗಳು ಎರಗಿದಾಗ ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು. ಹೊತ್ತು ಮುಳುಗುತ್ತಿದ್ದಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಭೀಕರವಾದ ಕಾರ್ಗತ್ತಲು ಅವನನ್ನು ಕವಿಯಿತು. ಹೊತ್ತು ಮುಳುಗಿ ಕಾರ್ಗತ್ತಲಾದಾಗ ಇಗೋ, ಹೊಗೆಯಾಡುವ ಒಲೆಯೊಂದು ಹಾಗು ಉರಿಯುವ ದೀವಟಿಗೆಯೊಂದು ಕಾಣಿಸಿಕೊಂಡಿತು. ಆ ತುಂಡುಗಳ ನಡುವೆ ಹಾದುಹೋದವು. ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು. "ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರಿಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ."
ಕೀರ್ತನೆ: 105: 1-2, 3-4, 6-7, 8-9
ಶ್ಲೋಕ: ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನ್ನು
ಶುಭಸಂದೇಶ: ಮತ್ತಾಯ 7:15-20
"ಸುಳ್ಳು ಪ್ರವಾದಿಗಳ ಬಗ್ಗೆ ಹೆಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಕಳು. ಅವರ ವರ್ತನೆಯಿಂದ ನೀವು ಅವರನ್ನು ಗುರುತು ಹಚ್ಚುವಿರಿ. ಮುಳ್ಳುಕಳ್ಳಿಯಲ್ಲಿ ದ್ರಾಕ್ಷಿ ಕೊಯ್ಯುವುದುಂಟೇ? ಮದ್ದುಗುಣಿಕೆಯಲ್ಲಿ ಅಂಜೂರ ಕೀಳುವುದುಂಟೇ? ಅದರಂತೆಯೇ ಒಳ್ಳೆಯ ಮರ ಒಳ್ಳೆಯ ಹಣ್ಣನ್ನೂ ಕೆಟ್ಟ ಮರವು ಕೆಟ್ಟ ಹಣ್ಣನ್ನೂ ಕೊಡುತ್ತದೆ. ಒಳ್ಳೆಯ ಮರ ಕೆಟ್ಟ ಹಣ್ಣನ್ನು ಕೊಡಲಾರದು, ಹಾಗೆಯೇ ಕೆಟ್ಟ ಮರ ಒಳ್ಳೆಯ ಹಣ್ಣನ್ನು ಕೊಡಲಾರದು. ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನೂ ಕಡಿದು ಬೆಂಕಿಯಲ್ಲಿ ಹಾಕಲಾಗುವುದು. ಆದ್ದರಿಂದ ಸುಳ್ಳು ಪ್ರವಾದಿಗಳನ್ನು ಅವರ ನಡತೆಯಿಂದ ಗುರುತು ಹಚ್ಚುವಿರಿ."
No comments:
Post a Comment