ಮೊದಲನೇ ವಾಚನ: ವಿಮೋಚನಾಕಾಂಡ 3:1-6, 9-12
ಮೋಶೆ ಮಿದ್ಯಾನರ ಪೂಜಾರಿಯೂ ತನ್ನ ಮಾವನೂ ಆದ ಇತ್ರೋನನ ಮಂದೆಯನ್ನು ಮೇಯಿಸುತ್ತಿದ್ದನು.
ಒಮ್ಮೆ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡೆಸಿಕೊಂಡು "ಹೋರೇಬ್" ಎಂಬ ದೇವರ ಬೆಟ್ಟಕ್ಕೆ ಬಂದನು. ಅಲ್ಲಿ ಮುಳ್ಳಿನ ಪೊದೆಯೊಂದರ ಒಳಗೆ ಉರಿಯುವ ಬೆಂಕಿಯಲ್ಲಿ ಸರ್ವೇಶ್ವರನ ದೂತನು ಅವನಿಗೆ ಕಾಣಿಸಿಕೊಂಡನು. ಮೋಶೆ ನೋಡಿದನು. ಆ ಮುಳ್ಳಿನ ಪೊದೆ ಉರಿಯುತ್ತಲೇ ಇತ್ತು; ಆದರೆ ಸುಟ್ಟುಹೋಗದೇ ಇತ್ತು. ಆಗ ಮೋಶೆ,
"ಇದೇನು ಆಶ್ಚರ್ಯ! ಪೊದೆ ಸುಟ್ಟು ಹೋಗದೆ ಇರುವುದಕ್ಕೆ ಕಾರಣವೇನು?
ನಾನು ಹತ್ತಿರ ಹೋಗಿ ತಿಳಿದುಕೊಳ್ಳುತ್ತೇನೆ ಎಂದುಕೊಂಡನು. ಅದನ್ನು ನೋಡಲು ಅವನು ಮುಂದಕ್ಕೆ ಬರುವುದನ್ನು ಸರ್ವೇಶ್ವರಸ್ವಾಮಿ ಕಂಡರು. ಪೊದೆಯೊಳಗಿಂದ, "ಮೋಶೆ, ಮೋಶೆ,"
ಎಂದು ದೇವರು ಕರೆದರು.
ಅದಕ್ಕವನು, "ಇಗೋ, ಇದ್ದೇನೆ," ಎಂದು ಉತ್ತರ ಕೊಟ್ಟನು. ದೇವರು ಅವನಿಗೆ,
"ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದು ಹಾಕು;
ಏಕೆಂದರೆ ನೀನು ನಿಂತಿರುವ ಸ್ಥಳ ಪವಿತ್ರ ಭೂಮಿ,"
ಎಂದು ಹೇಳಿದರು ಅದೂ ಅಲ್ಲದೆ, "ನಾನು ನಿನ್ನ ತಂದೆಯ ದೇವರು,
ಅಬ್ರಹಾಮನ ದೇವರು, ಇಸಾಕನ ದೇವರು,
ಯಕೋಬನ ದೇವರು," ಎಂದರು. ಆಗ ಮೋಶೆ ದೇವರನ್ನು ದಿಟ್ಟಿಸಿ ನೋಡಲು ಭಯಪಟ್ಟು ಮುಖವನ್ನು ಮುಚ್ಚಿಕೊಂಡನು. ಈಗ ಕೇಳು:
"ಇಸ್ರಯೇಲರ ಮೊರೆ ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ.
ಆದ್ದರಿಂದ ಹೋಗು, ನನ್ನ ಜನರಾಗಿರುವ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಹೊರ ತರುವುದಕ್ಕಾಗಿ ನಿನ್ನನ್ನು ಫರೋಹನ ಬಳಿಗೆ ಕಳಿಸುತ್ತಿದ್ದೇನೆ. ನಾನೇ ನಿನ್ನ ಸಂಗಡ ಇರುವೆನು;
ನೀನು ನನ್ನ ಜನರನ್ನು ಈಜಿಪ್ಟಿನಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ.
ನಿನ್ನನ್ನು ಕಳಿಸಿದವನು ನಾನೇ ಎಂಬುದಕ್ಕೆ ಇದೇ ನಿನಗೆ ಗುರುತಾಗಿ,"
ಇರುವುದು.
ಕೀರ್ತನೆ:
103:1-2, 3-4, 6-7
ಶ್ಲೋಕ:
ಪ್ರಭು ದಯಾಳು, ಕೃಪಾಪೂರ್ಣನು
ಶುಭಸಂದೇಶ:
ಮತ್ತಾಯ 11:25-27
ಆ ಸಮಯದಲ್ಲಿ ಯೇಸುಸ್ವಾಮಿ,
"ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆ ಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು, ಪಿತನೇ,
ಇದೇ ನಿಮ್ಮ ಸುಪ್ರೀತ ಸಂಕಲ್ಪ, ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ;
ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ,
ಅವರೇ ಹೊರತು ಮತ್ತಾರೂ ಅರಿಯರು" ಎಂದು ಹೇಳಿದರು.
No comments:
Post a Comment