ಮೊದಲನೇ ವಾಚನ: ಜೆಕರ್ಯ 8:20-23
ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ:, "ಇನ್ನು ಮುಂದೆ ಜನಾಂಗಗಳೂ ಹಲವು ನಗರ ನಿವಾಸಿಗಳೂ ಜೆರುಸಲೇಮಿಗೆ ಬರುವರು. "ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ಆರಾಧಿಸಲು, ಅವರ ಆಶೀರ್ವಾದವನ್ನು ಬೇಡಲು ದೇವಾಲಯಕ್ಕೆ ಹೋಗುತ್ತಿದ್ದೇವೆ ನಮ್ಮೊಡನೆ ಬನ್ನಿ, ಹೋಗೋಣ ಎಂದು ಒಂದು ಊರಿನವರು ಮತ್ತೊಂದೂರಿನವರಿಗೆ ಹೇಳುವರು. "ನಾನಾ ದೇಶಗಳಿಂದ, ಪ್ರಬಲ ರಾಷ್ಟ್ರಗಳಿಂದ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ಆರಾಧಿಸಿ, ಅವರ ಆಶೀರ್ವಾದವನ್ನು ಕೋರಲು ಜನರು ಜೆರುಸಲೇಮಿಗೆ ಬರುವರು. ಆ ದಿನಗಳಲ್ಲಿ ವಿವಿದ ಭಾಷೆಗಳನ್ನಾಡುವ ರಾಷ್ಟ್ರಗಳಿಂದ ಹತ್ತು ಹತ್ತು ಮಂದಿ ಬಂದು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, "ನಾವೂ ನಾಮ್ಮೊಂದಿಗೆ ಬರುತ್ತೇವೆ. ಏಕೆಂದರೆ ದೇವರು ನಿಮ್ಮೊಡನೆ ಇದ್ದಾರೆ ಎಂಬ ಸುದ್ದಿಯನ್ನು ಕೇಳಿದ್ದೇವೆ" ಎಂದು ಹೇಳುವರು. ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ,"
ಕೀರ್ತನೆ: 87:1-3, 4-5, 6-7
ಶ್ಲೋಕ: ದೇವರು ನಮ್ಮೊಡನೆ ಇದ್ದಾರೆ
ಶುಭಸಂದೇಶ: ಲೂಕ 9:51-56
ತಾವು ಸ್ವರ್ಗಾರೋಣವಾಗುವ ದಿನಗಳು ಸಮೀಪಿಸಲು ಯೇಸುಸ್ವಾಮಿ ಜೆರುಸಲೇಮಿಗೆ ಅಭಿಮುಖರಾಗಿ ಹೊರಡಲು ನಿರ್ಧರಿಸಿದರು. ಅಲ್ಲದೆ ತಮಗೆ ಮುಂದಾಗಿ ದೂತರನ್ನು ಕಳುಹಿಸಿದರು. ಇವರು ಹೊರಟು ಯೇಸುವಿಗೆ ಬೇಕಾದುದನ್ನು ಸಿದ್ಧಮಾಡಲು ಸಮಾರಿಯದ ಒಂದು ಹಳ್ಳಿಗೆ ಬಂದರು. ಯೇಸು ಜೆರುಸಲೇಮಿಗೆ ಹೋಗುತ್ತಿದ್ದ ಕಾರಣ ಅವರನ್ನು ಅಲ್ಲಿಯ ಜನರು ಬರಗೊಳಿಸಲಿಲ್ಲ. ಇದನ್ನು ಕಂಡ ಶಿಷ್ಯನಾದ ಯಕೋಬ ಮತ್ತು ಯೊವಾನ್ನ, "ಪ್ರಭು, ಆಕಾಶದಿಂದ ಅಗ್ನಿಮಳೆ ಸುರಿದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಜೆಮಾಡಬಹುದಲ್ಲವೇ?" ಎಂದರು. ಯೇಸು ಅವರ ಕಡೆ ತಿರುಗಿ, "ನೀವು ಎಂಥ ಸ್ವಭಾವಿಗಳೆಂದು ನಿಮಗೇ ತಿಳಿಯದು. ನರಪುತ್ರನು ಬಂದಿರುವುದು ಮಾನವ ಜೀವಿಗಳ ವಿನಾಶಕ್ಕೆ ಅಲ್ಲ, ಉದ್ಧಾರಕ್ಕೆ" ಎಂದು ಅವರನ್ನು ಖಂಡಿಸಿದರು. ಆನಂತರ ಯೇಸು ಮತ್ತು ಶಿಷ್ಯರು ಬೇರೆ ಹಳ್ಳಿಗೆ ಹೋದರು.
No comments:
Post a Comment