ಮೊದಲನೇ ವಾಚನ: ಎಜ್ರನು 1:1-6
ಸೈರಸನು ಪರ್ಷಿಯ ದೇಶದ ಅರಸ ಆತನ ಅಳ್ವಿಕೆಯ ಮೊದಲನೆಯ ವರ್ಷದಲ್ಲೆ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸಿದರು. ಅದಕ್ಕಾಗಿಯೆ ಅರಸ ಸೈರಸನನ್ನು ಪ್ರೇರೇಪಿಸಿ ಅವನ ರಾಜ್ಯದಲ್ಲೆಲ್ಲಾ ಡಂಗುರ ಹಾಗು ಪತ್ರಗಳ ಮೂಲಕ ಹೀಗೆ ಪ್ರಕಟಿಸುವಂತೆ ಮಾಡಿದರು: "ಪರ್ಷಿಯ ರಾಜನಾದ ಸೈರಸೆಂಬ ನನ್ನ ಮಾತುನ್ನು ಕೇಳಿರಿ: ಪರಲೋಕದ ಎಲ್ಲ ರಾಜ್ಯಗಳನ್ನು ನನಗೆ ಕೋಟ್ಟಿದ್ದಾರೆ; "ನನಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಒಂದು ಆಲಯವನ್ನು ಕಟ್ಟಿಸಬೇಕು" ಎಂದು ಅವರು ಆಜ್ಞಾಪಿಸಿದ್ದಾರೆ. ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅಂಥವರು ಜುದೇಯ ನಾಡಿನ ಜೆರುಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ, ಒಂದು ದೇವಾಲಯವನ್ನು ಕಟ್ಟಲಿ; ಅವರ ಸಂಗಡ ಅವರ ದೇವರಿರಲಿ! ಸೆರೆಯಾಳುಗಳಾಗಿ ಅಳಿದುಳಿದವರು ಯಾವ ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರಿನ ಜನರು ಜೆರುಸಲೇಮಿನ ದೇವಾಲಯಕ್ಕಾಗಿ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕುಸಾಮಗ್ರಿ, ಪ್ರಾಣಿಪಶು, ಇವುಗಳನ್ನು ಕೊಟ್ಟು ಅವರಿಗೆ ಸಹಾಯ ಮಾಡಲಿ," ಎಂದು ಪ್ರಚುರಪಡಿಸಿದನು. ಈ ಪ್ರಕಟಣೆಯನ್ನ ಕೇಳಿ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಕ್ಕೆ ಸೇರಿದ ಮುಖ್ಯಸ್ಥರು, ಯಾಜಕರು, ಲೇವಿಯರು ಹಾಗು ದೈವಪ್ರೇರಿತರಾದ ಎಲ್ಲರು ಜೆರುಸಲೇಮಿನಲ್ಲಿ ಸರ್ವೇಶ್ವರನಿಗೆ ಪುನಃ ಆಲಯಕಟ್ಟುವುದಕ್ಕಾಗಿ ಹೊರಟರು. ಅವರ ನೆರೆಯವರೆಲ್ಲರು ಕೊಡುಗೆಗಳನ್ನು ಕೊಟ್ಟರು; ಬೆಳ್ಳಿ ಸಾಮಾನುಗಳನ್ನು, ಬಂಗಾರದ ಆಭರಣಗಳು, ಪಶುಪ್ರಾಣಿಗಳು, ಶ್ರೇಷ್ಟವಸ್ತುಗಳು, ಇತ್ಯಾದಿಗಳನ್ನು ನೀಡಿ ಸಹಕರಿಸಿದರು.
ಕೀರ್ತನೆ: 126:1-2, 2-3, 4-5, 6
ಶ್ಲೋಕ:, ಪ್ರಭು ನಮಗೆ ಮಹತ್ಕಾರ್ಯ ಮಾಡಿದರು
ಶುಭಸಂದೇಶ: ಲೂಕ 8:16-28
"ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆಯಿಂದ ಮುಚ್ಚಿಡುವುದಿಲ್ಲ; ಮಂಚದ ಕೆಳಗೆ ಬಚ್ಚಿಡುವುದಿಲ್ಲ. ಮನೆಯೊಳಕ್ಕೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪ ಸ್ತಂಭದ ಮೇಲಿಡುತ್ತಾರೆ. ಬಟ್ಟ ಬಯಲಾಗದ ಮುಚ್ಚು ಮರೆಯಿಲ್ಲ; ಬೆಳಕಿಗೆ ಬಾರದ ಹಾಗೂ ರಟ್ಟಾಗದ ಗುಟ್ಟಿಲ್ಲ. "ಆದ್ದರಿಂದ ನೀವು ಕಿವಿಕೊಡುವಾಗ ಎಚ್ಚರಿಕೆಯಿಂದಿರಿ; ಏಕೆಂದರೆ, ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ, ಇಲ್ಲದವನಿಂದ ತನಗಿದೆ ಎಂದುಕೊಳ್ಳುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ," ಎಂದರು.
No comments:
Post a Comment