ಮೊದಲನೇ ವಾಚನ: ಎಜ್ರನು 9:5-9
ನಾನು ಎಜ್ರನು ಸಂಧ್ಯಾನ್ಯೆವೇದ್ಯ ಸಮರ್ಪಣೆಯ ನಂತರ ದೇಹದಂಡನೆ ಮಾಡುವುದನ್ನು ಬಿಟ್ಟು, ಹರಿದ ಬಟ್ಟೆವಸ್ತ್ರಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ, ನನ್ನ ದೇವರಾದ ಸರ್ವೇಶ್ವರನ ಕಡೆಗೆ ಕೈಗಳನೆತ್ತಿ ಹಿಗೆಂದು ಪ್ರಾರ್ಥಿಸಿದೆ: "ನನ್ನ ದೇವರೇ, ನಾನು ಮನಗುಂದಿದವನು ಆಗಿದ್ದೇನೆ; ನಿಮ್ಮ ಕಡೆಗೆ ಮುಖವನ್ನು ಎತ್ತುವುದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ,, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ; ನಮ್ಮ ಅಪರಾದ ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ! ನಾವು ನಮ್ಮ ಪಪಿತ್ರುಗಳ ಕಾಲದಿಂದ ಇಂದಿನವರೆಗೂ ಮಹಾಪರಾಧಿಗಳೇ; ನಮ್ಮ ಪಾಪಗಳ ನಿಮಿತ್ತ ನಾವೂ ನಮ್ಮ ಅರಸರೂ ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಸಿಕ್ಕಿಬಿದ್ದೆವು. ಈಗಿರುವಂತೆ, ಕತ್ತಿಗೂ ಸೆರೆಗೂ ಸುಲಿಗೆಗೂ ಅಪಮಾನಕ್ಕೂ ಗುರಿಯಾದೆವು. ಆದರೂ ನಮ್ಮ ದೇವರಾದ ಸರ್ವೇಶ್ವರಾ, ಒಂದು ಕ್ಷಣ ನಿಮಗೆ ನಾನು ಪ್ರಸನ್ನರಾಗಿ, ನಮ್ಮಲ್ಲಿ ಸ್ವಲ್ಪ ಜನರನ್ನಾದರೂ ರಕ್ಷಣೆಗಾಗಿ ಉಳಿಸಿ, ತಮ್ಮ ಪರಿಶುದ್ಧ ಸ್ಥಳದಲ್ಲಿ ಮೊಳೆಯುವಂತೆ, ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಬೆಳಗಿಸಿ, ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪ ಮಟ್ಟಿಗೆ ನವಜೀವವನ್ನು ಅನುಗ್ರಹಿಸಿದಿರಿ. ನಾವು ಗುಲಾಮರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವಾಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕಾಗಿ , ನಮಗೆ ನವಜೀವನ ಪ್ರಾಪ್ತವಾಗುವಂತೆ ಹಾಗು ಜುದೇಯದಲ್ಲೂ ಜೆರುಸಲೇಮಿನಲ್ಲೂ ನಮಗೆ ಅಭಯಾಶ್ರಯ ಸಿಗುವಂತೆ, ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿದ್ದೀರಿ.
ತೊಬೀತ: 13:2, 3-4, 4, 7-8
ಶ್ಲೋಕ: ನಿತ್ಯಕ್ಕೂ ದೇವರ ಶ್ರೀನಾಮ ಪೂಜಿತವಾಗಲಿ
ಶುಭಸಂದೇಶ: ಲೂಕ 9:1-6
ಯೇಸುಸ್ವಾಮಿ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಎಲ್ಲ ದೆವ್ವಗಳನ್ನು ಬಿಡಿಸಲು ಬಿಡಿಸಲೂ ರೋಗ ನಿವಾರಣೆಮಾಡಲೂ ಅವರಿಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು. ಆನಂತರ ದೇವರ ಸಾಮ್ರಾಜ್ಯವನ್ನು ಕುರಿತು ಬೋಧಿಸುವುದಕ್ಕೂ ರೋಗಿಗಳನ್ನು ಗುಣಪಡಿಸುವುದಕ್ಕೂ ಅವರನ್ನು ಕಳುಹಿಸಿದರು. ಕಳುಹಿಸುವಾಗ ಇಂತೆಂದರು: "ಪ್ರಯಾಣಕ್ಕೆಂದು ಏನನ್ನೂ ತೆಗೆದುಕೊಳ್ಳಬೇಡಿ; ದಂಡ ಜೋಳಿಗೆ, ಬುತ್ತಿ ಅಥವಾ ಹಣ ಯಾವುದೂ ಬೇಡ. ಎರಡು ಅಂಗಿಗಳೂ ಬೇಕಾಗಿಲ್ಲ. ಯಾವ ಮನೆಯವರು ನಿಮ್ಮನ್ನು ಬರಮಾಡಿಕೊಳ್ಳುತ್ತಾರೋ ಆ ಮನೆಯಲ್ಲೇ ತಂಗಿರಿ. ಅಲ್ಲಿಂದಲೇ ಮುಂದಕ್ಕೆ ಸಾಗಿರಿ. ಯಾವ ಊರಿನವರಾದರೂ ನಿಮ್ಮನ್ನು ಸ್ವಾಗತಿಸದೆ ಹೋದಲ್ಲಿ, ನೀವು ಆ ಊರನ್ನು ಬಿಟ್ಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ," ಎಂದರು. ಪ್ರೇಷಿತರು ಹೊರಟು ಹಳ್ಳಿಹಳ್ಳಿಗೂ ಹೋಗಿ ಎಲ್ಲ ಕಡೆ ಶುಭಸಂದೇಶವನ್ನು ಬೋಧಿಸಿದರು; ರೋಗಿಗಳನ್ನು ಗುಣಪಡಿಸಿದರು.
No comments:
Post a Comment