ಮೊದಲನೇ ವಾಚನ: ಹಗ್ಗಾಯ 1:1-8
ಪರ್ಷಿಯಾದ ಚಕ್ರವರ್ತಿಯಾದ ಡೇರಿಸನು ಅವನ ಆಳ್ವಿಕೆಯ ಎರಡನೇ ಎರಡನೇ ವರ್ಷದ ಆರನೇ ತಿಂಗಳ ಮೊದಲನೆಯ ದಿನದಂದು ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರಸ್ವಾಮಿ ನೀಡಿದ ದೈವೋಕ್ತಿ: ಅದು ಶೆಯಲ್ತಿಯೇಲನ ಮಗನೂ ಜುದೇಯ ನಾಡಿನದೇಶಾಧಿಪತಿಯೂ ಆದ ಜೆರುಬ್ಬಾಬೇಲನ ಮತ್ತು ಯೆಹೋಚಾದಾಕನು ಮಗನೂ ಮಹಾಯಾಜಕನೂ ಆದ ಯೇಹೋಶುವನನ್ನು ಉದ್ಧೇಶಿಸಿ ಕೊಡಲಾದ ಸಂದೇಶವಾಗಿತ್ತು. ಸೇನಾಧೀಶ್ವರರಾದ ಸರ್ವೇಶ್ವರ ಇಂತೆನ್ನುತ್ತಾರೆ: "ಮಹಾ ದೇವಾಲಯವನ್ನು ಪುನಃ ಕಟ್ಟುವುದಕ್ಕೆ ಸಮಯ ಇನ್ನೂ ಬಂದಿಲ್ಲ ಎಂದುಕೊಳ್ಳುತ್ತಾರೆ. ಈ ಜನರು," ಆಗ ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರ ಕೋಟ್ಟ ಸಂದೇಶವೇನೆಂದರೆ: "ನನ್ನ ಆಲಯ ಹಾಳುಬಿದ್ಧಿರುವಾಗ ನೀವು ಸೊಗಸಾದ ಹಲಗೆ ಹೊದಿಸಿದ ಮನೆಗಳಲ್ಲಿ ವಾಸಿಸುವುದು ಸರಿಯೋ? ನಮಗೆ ಒದಗಿರುವ ಪರಿಸ್ಥಿತಿಯನ್ನು ಆಲೋಚಿಸಿ ನೋಡಿ. ನೀವು ಬಿತ್ತಿದ ಬೀಜ ಬಹಳ , ಪಡೆದ ಫಲ ವಿರಳ; ಎನ್ನುತ್ತೀರಿ, ಆದರೆ ತೃಪ್ತಿಯಿಲ್ಲ; ಕುಡಿಯುತ್ತೀರಿ, ಆದರೆ ದಾಹ ನೀಗುವುದಿಲ್ಲ. ಹೊದೆಯುತ್ತೀರಿ, ಆದರೆ ಚಳಿ ಹೋಗುವುದಿಲ್ಲ ದುಡಿಮೆಗಾರನ ದುಡ್ಡಿನ ಚೀಲ ತೂತಿನ ಚೀಲ," ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: "ನಿಮಗೆ ಒದಗಿರುವ ಪರಿಸ್ಥಿತಿಯನ್ನು ಕುರಿತು ಆಲೋಚಿಸಿ ನೋಡಿ. ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ. ಆಗ ನಾನು ಪ್ರಸನ್ನನಾಗುವೆನು. ನನ್ನ ಮಹಿಮೆಯನ್ನು ಪ್ರಕಟಿಸುವೆನು," ಎಂದು ನುಡಿಯುತ್ತಾರೆ ಸ್ವಾಮಿ.
ಕೀರ್ತನೆ: 149:1-2, 3-4, 5-6, 9
ಶ್ಲೋಕ: ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು
ಶುಭಸಂದೇಶ: ಲೂಕ 9:7-9
ನಡೆಯುತ್ತಿದ್ದ ಎಲ್ಲ ಸಂಗತಿಗಳು ಸಾಮಂತ ರಾಜ ಹೆರೋದನ ಕಿವಿಗೆ ಬಿದ್ದವು. ಅವನ ಮನಸ್ಸು ಕಳವಳಗೊಂಡಿತ್ತು. ಏಕೆಂದರೆ, "ಯೊವಾನ್ನನು ಮರಳಿ ಜೀವಂತವಾಗಿ ಎದ್ದಿದ್ದಾನೆ" ಎಂದು ಕೆಲವರೂ , "ಎಲೀಯನು ಪುನಃ ಕಾಣಿಸಿಕೊಂಡಿದ್ದಾನೆ", ಎಂದು ಇನ್ನೂ ಕೆಲವರೂ, "ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ಮರಳಿ ಜೀವಂತವಾಗಿದ್ದಾನೆ," ಎಂದು ಮತ್ತೆ ಕೆಲವರೂ ಹೇಳುತ್ತಿದ್ದರು. ಹೆರೋದನಾದರೋ, "ಯೊವಾನ್ನನೇ! ಅವನನ್ನು ನಾನೇ ಶಿರಚ್ಛೇದನ ಮಾಡಿಸಿದ್ದೆನಲ್ಲಾ! ಮತ್ತೆ ಇವನಾರು? ಇವನ ಬಗ್ಗೆ ಇಂಥಾ ವಿಷಯಗಳನ್ನೆಲ್ಲ ಕೇಳುತ್ತಾ ಇರುವೆನಲ್ಲಾ!" ಎಂದುಕೊಂಡು, ಯೇಸುವನ್ನು ನೋಡಲು ಅವಕಾಶ ಹುಡುಕುತ್ತಿದ್ದನು.
No comments:
Post a Comment