ಮೊದಲನೇ ವಾಚನ: ಜೆಕರ್ಯ 2:1-5, 10, 11
ಜಕರ್ಯನಾದ ನನಗೆ ಮತ್ತೊಂದು ದರ್ಶನವಾಯಿತು. ಕೈಯಲ್ಲಿ ಅಳತೆನೂಲನ್ನು ಹಿಡಿದುಕೊಂಡಿದ್ದ ಒಬ್ಬನು ಕಾಣಿಸಿಕೊಂಡ. "ಎಲ್ಲಿಗೆ ಹೋಗುತ್ತಿರುವೆ?" ಎಂದು ನಾನು ಅವನನ್ನು ಕೇಳಿದಾಗ, ಅವನು: "ಜೆರುಸಲೇಮಿನ ಉದ್ದ - ಅಗಲ ಎಷ್ಟಿದೆಯೆಂದು ಅಳೆಯಲು ಹೋಗುತ್ತಿದ್ದೇನೆ," ಎಂದು ಉತ್ತರಕೊಟ್ಟನು. ಆಗ ಸೂತ್ರಧಾರಿಯಾದ ದೂತನು ಮುಂದೆ ಬರುತ್ತಿರಲು, ಇನ್ನೊಬ್ಬ ದೂತನು ಅವನನ್ನು ಎದುರುಗೊಂಡು, "ಅಳೆಯಲು ಹೋಗುತ್ತಿರುವ ಆ ಯುವಕನಿಗೆ ಓಡಿಹೋಗಿ ಈ ಮಾತನ್ನು ತಿಳಿಸು: "ಜೆರುಸಲೇಮಿನಲ್ಲಿ ಜನರ ಮತ್ತು ದನಕರುಗಳ ಸಂಖ್ಯ ಅಪಾರವಾಗುವುದು. ಅದು ಪೌಳಿಗೋಡೆಗಳಿಲ್ಲದ ಊರುಕೇರಿಗಳಂತೆ ಹರಡಿಕೊಳ್ಳುವುದು. ನಾನೇ ಅದರ ಸುತ್ತಮುತ್ತಲು ಅಗ್ನಿಪ್ರಕಾರವಾಗಿ, ಅದರೊಳಗಿನ ವೈಭವವಾಗಿರುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ," ಎಂದ." ಸರ್ವೇಶ್ವರ ಇಂತೆನ್ನುತ್ತಾರೆ: "ಎಲೈ ಸಿಯೋನ್ ನಗರವೇ ಸಂತೋಷಪಡು, ಜಯಕಾರ ಮಾಡು; ಇಗೋ, ನಾನೇ ಬಂದು ನಿನ್ನ ಮಧ್ಯೆ ವಾಸಿಸುವೆನು!" ಆ ದಿನದಂದು ಹಲವಾರು ರಾಷ್ಟ್ರಗಳು ಸರ್ವೇಶ್ವರಸ್ವಾಮಿಯನ್ನು ಆಶ್ರಯಿಸಿಕೊಳ್ಳುವರು. ಅವರು ಆ ಸ್ವಾಮಿಯ ಜನರಾಗುವರು. ಸ್ವಾಮಿ ಅವರ ಮಧ್ಯೆ ವಾಸಿಸುವರು. ಸೇನಾಧೀಶ್ವರರಾದ ಆ ಸ್ವಾಮಿಯೇ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ ಎಂಬುದು ಆಗ ನಿಮಗೆ ಗೊತ್ತಾಗುವುದು. ಪವಿತ್ರ ಭೂಮಿಯಲ್ಲಿ ಜುದೇಯ ನಾಡನ್ನು ಸ್ವಾಮಿ ತಮ್ಮ ಸೊತ್ತಾಗಿ ಮಾಡಿಕೊಳ್ಳುವರು. ಜೆರುಸಲೇಮನ್ನು ತಮಗಾಗಿ ಮರಳಿ ಆರಿಸಿಕೊಳ್ಳುವರು.
ಯೆರೆಮೀಯ: 31:10, 11-12, 13
ಶ್ಲೋಕ: ಕುರಿಮಂದೆಯನ್ನು ಕಾಯುವ ಕುರುಬನಂತೆ, ಪ್ರಭು ನಮ್ಮನ್ನು ಕಾಪಾಡುವರು
ಶುಭಸಂದೇಶ : ಲೂಕ 9:43-45
ಯೇಸುಸ್ವಾಮಿ ಮಾಡಿದ ಸಕಲ ಮಹತ್ಕಾರ್ಯಗಳನ್ನು ಕುರಿತು ಜನರೆಲ್ಲರೂ ಸೋಜಿಗಪಡುತ್ತಿರುವರಲ್ಲಿ, ಶಿಷ್ಯರಿಗೆ, "ಈ ನನ್ನ ಮಾತು ನಿಮ್ಮ ಕಿವಿಗೆ ಇಳಿಯಲಿ. ಅದೇನೆಂದರೆ: "ನರಪುತ್ರನು ಜನರ ವಶಕ್ಕೆ ಒಪ್ಪಿಸಲ್ಪಡಲಿದ್ದಾನೆ," ಎಂದರು. ಯೇಸು ಹೇಳಿದ ಮಾತುನ್ನು ಶಿಷ್ಯರು ಗ್ರಹಿಸಿಕೊಳ್ಳಲಿಲ್ಲ; ಒಗಟಿನ ಹಾಗೆ ಇದ್ದುದರಿಂದ ಅರ್ಥಮಾಡಿಕೊಳ್ಳಲಿಲ್ಲ. ಅದನ್ನು ಕುರಿತು ಯೇಸುವನ್ನು ಕೇಳುವುದಕ್ಕೂ ಅವರು ಅಂಜಿದರು.
No comments:
Post a Comment