ಮೊದಲನೇ ವಾಚನ: ವಿಮೋಚನಕಾಂಡ 23:20-23
"ಇಗೋ, ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೆ ಹಾಗೂ ನಾನು ಗೊತ್ತು ಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆದುತರುವುದಕ್ಕೆ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ. ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ಕಿವಿಗೊಡಬೇಕು. ಆತನಿಗೆ ಅವಿಧೇಯರಾಗಿ ಇರಬಾರದು. ಏಕೆಂದರೆ ಆತ ಬರುವುದು ನನ್ನ ಹೆಸರಿನಲ್ಲಿ. ನೀವು ಅವಿಧೇಯರಾದರೆ ಆತ ನಿಮ್ಮನ್ನು ಕ್ಷಮಿಸಲಾರನು. ನೀವು ಆತನ ಮಾತನ್ನು ಶ್ರದ್ಧೆಯಿಂದ ಆಲಿಸಿ, ನನ್ನ ಆಶೆಗಳನ್ನೆಲ್ಲ ಪಾಲಿಸಿದರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು. ನನ್ನ ದೂತನು ನಿಮ್ಮ ಮುಂದೆ ನಡೆದು ಆಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಹಾಗೂ ಯೆಬೂಸಿಯರು ಇರುವ ನಾಡಿಗೆ ನಿಮ್ಮನ್ನು ಸೇರಿಸುವನು. ಅವರನ್ನಾದರೋ ನಾನು ನಿರ್ಮೂಲಮಾಡುವೆನು.
ಕೀರ್ತನೆ: 91:1-2, 3-4, 4-6, 10-11
ಶ್ಲೋಕ: ನೀನು ಹೋದಡೆಯೆಲ್ಲಾ ನಿನ್ನ ಕಾಯುವುದಕ್ಕೆ ಕೊಟ್ಟಿಹನಾತ ಕಟ್ಟಳೆ ತನ್ನ ದೂತರಿಗೆ
ಶುಭಸಂದೇಶ: ಮತ್ತಾಯ 18:1-5, 10

No comments:
Post a Comment