ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

21.10.2019 - "ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ,"

ಮೊದಲನೇ ವಾಚನ: ರೋಮನರಿಗೆ 4:20-25

ಸಹೋದರರೇ, ದೇವರ ವಾಗ್ದಾನದಲ್ಲಿ ಅಬ್ರಹಾಮನು ಸಂಶಯಪಡಲಿಲ್ಲ. ಅಪನಂಬಿಕೆಯಿಂದ ಚಂಚಲಚಿತ್ತನಾಗಲೂ ಇಲ್ಲ. ಬದಲಾಗಿ ಆತನ ವಿಶ್ವಾಸ ವೃದ್ಧಿಯಾಯಿತು. ಆತನು ದೇವರನ್ನು ಹೊಗಳಿ ಕೊಂಡಾಡಿದನು ದೇವರು ತಾವು ವಾಗ್ದಾನಮಾಡಿದ್ದನ್ನು  ಖಂಡಿತವಾಗಿಯೂ ನೆರವೇರಿಸಬಲ್ಲರೆಂದು ದೃಢವಾಗಿ ನಂಬಿದನು. ಆದ್ದರಿಂದಲೇ, "ದೇವರು ಆತನನ್ನು ತಮ್ಮೊಂದಿಗೆ ಸತ್ಸಬಂಧದಲ್ಲಿ ಇರುವುದಾಗಿ ಪರಿಗಣಿಸಿದರು" ಎಂದು ಲಿಖಿತವಾಗಿದೆ. "ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು" ಎಂಬ ಮಾತು ಆತನಿಗೆ ಮಾತ್ರವಲ್ಲ, ನಮಗೂ ಅನ್ವಯಿಸುತ್ತದೆ. ನಮ್ಮ ಪ್ರಭುವಾದ ಯೇಸುವನ್ನು ಮರಣದಿಂದ ಎಬ್ಬಿಸಿದ ದೇಶರನ್ನು ವಿಶ್ವಾಸಿಸುವ ನಾವು ಸಹ ಅವರೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿತರಾಗುತ್ತೇವೆ. ನಮ್ಮ ಪಾಪಗಳ ನಿಮಿತ್ತ ಯೇಸುವನ್ನು ಮರಣಕ್ಕೆ ಗುರಿಪಡಿಸಲಾಯಿತು. ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿ ಇರಿಸುವುದಕ್ಕಾಗಿ ಅವರು ಪುನರುತ್ಥಾನ ಹೊಂದಿದರು.

ಲೂಕ: 1:69-70, 71-72, 73-75

ಶ್ಲೋಕ: ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ

ಶುಭಸಂದೇಶ: ಲೂಕ 12:13-21

ಜನಸಮೂಹದಿಂದ ಒಬ್ಬನು, "ಬೋಧಕರೇ, ನಮ್ಮ ಪಿತ್ರಾರ್ಜಿತ ಸೊತ್ತನ್ನು ನನಗೆ ಭಾಗಮಾಡಿ ಕೊಡುವಂತೆ ನನ್ನ ಸೋದರನಿಗೆ ಹೇಳಿ," ಎಂದು ಕೇಳಿಕೊಂಡನು. ಅದಕ್ಕೆ ಯೇಸು, "ಏನಯ್ಯಾ, ನಿಮ್ಮಿಬ್ಬರ ನ್ಯಾಯ ತೀರಿಸುವುದಕ್ಕೂ ನಿಮ್ಮ ಸ್ವತ್ತನ್ನು ಭಾಗಮಾಡಿಕೊಡುವುದಕ್ಕೂ ನನ್ನನ್ನು ನೇಮಿಸಿದವರು ಯಾರು?" ಎಂದು ಮರುಪ್ರಶ್ನೆ ಹಾಕಿದರು. ಆನಂತರ ಜನರನ್ನುದ್ದೇಶಿಸಿ, "ಎಚ್ಚರಿಕೆ,  ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. "ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ," ಎಂದು ಹೇಳಿದರು. ಆನಂತರ ಅವರಿಗೆ ಈ ಸಾಮತಿಯನ್ನು ಹೇಳಿದರು: "ಒಬ್ಬ ಧನಿಕನಿದ್ದ, ಅವನ ಭೂಮಿ ಒಮ್ಮೆ ಸಮೃದ್ಧಿಯಾದ ಬೆಳೆಕೊಟ್ಟಿತು. ಆಗ ಅವನು, "ನನ್ನ ಬೆಳೆಯನ್ನೆಲ್ಲಾ ತುಂಬಿಡಲು ಸ್ಥಳವಿಲ್ಲವಲ್ಲಾ, ಏನು ಮಾಡಲಿ?" ಎಂದು ತನ್ನಲ್ಲೇ ಆಲೋಚಿಸುತ್ತಾ, "ಹೌದು, ಹೀಗೆ ಮಾಡುತ್ತೇನೆ: ಇರುವ ಕಣಜಗಳನ್ನು ಕಿತ್ತುಹಾಕಿಸಿ, ಇನ್ನೂ ದೊಡ್ಡವುಗಳನ್ನು ಕಟ್ಟಿಸುತ್ತೇನೆ. ಅಲ್ಲಿ ನನ್ನ ಎಲ್ಲಾ ದವಸ ಧಾನ್ಯಗಳನ್ನೂ ಸರಕು ಸಾಮಗ್ರಿಗಳನ್ನೂ ತುಂಬಿಸಿಡುತ್ತೇನೆ. ಅಲ್ಲದೇ, "ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ; ಆರಾಮವಾಗಿರು. ತಿನ್ನು, ಕುಡಿ, ಸುಖಪಡು" ಎಂದು ಹೇಳಿಕೊಳ್ಳುತ್ತೇನೆ," ಎಂದುಕೊಂಡ. ಆಗ ದೇವರು, "ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧ ಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?" ಎಂದರು. ತನಗೋಸ್ಕರ ಸಂಪತ್ತನ್ನು ಶೇಕರಿಸಿಟ್ಟುಕೊಂಡು ದೇವರ ದೃಷ್ಟಿಯಲ್ಲಿ ಧನಿಕನಲ್ಲದವನು ಇವನಿಗೆ ಸಮಾನನು," ಎಂದರು ಯೇಸು

No comments:

Post a Comment