ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

11.12.2019 - "ನನ್ನ ನೊಗ ಹಗುರ, ನನ್ನ ಹೊರೆ ಸುಗಮ"

ಮೊದಲನೇ ವಾಚನ: ಯೆಶಾಯ 40:25-30


"ಇಂತಿರಲು ನನ್ನನ್ನು ಯಾರಿಗೆ ಹೋಲಿಸಬಲ್ಲಿರಿ? ಯಾರಿಗೆ ನನ್ನನ್ನು ಸರಿ ಸಮಾನ ಮಾಡಬಲ್ಲಿರಿ?" ಎಂದು ಕೇಳುತ್ತಿಹರು ಪರಮ ಪಾವನ ಸ್ವಾಮಿ. ಕಣ್ಣೆತ್ತಿ, ದಿಟ್ಟಿಸಿ ನೋಡಿ ಆಕಾಶದತ್ತ, ಯಾರು ಆ ತಾರೆಗಳನ್ನು ರಚಿಸಿದಾತ? ಆ ತಾರಾ ಸಮೂಹವನ್ನು ಕ್ರಮಾನುಸಾರ ನಡೆಸುವಾತ? ಒಂದೊಂದನ್ನೂ ಹೆಸರಿಟ್ಟು ಕರೆಯುವಾತ? ಅವುಗಳಲ್ಲಿ ಒಂದನ್ನೂ ಕಾಣೆಯಾಗಲು ಬಿಡದಾತ? ಅಷ್ಟು ಬಲಾಢ್ಯನು, ಶಕ್ತಿವಂತನು ಆತ! ಹೀಗಿರಲು ಎಲೈ ಯಕೋಬ್ಯರೇ, ಇಸ್ರಯೇಲರೇ, "ಮರೆಯಾಗಿದೆ ಪ್ರಭುವಿಗೆ ನನ್ನ ಕುಂದುಕೊರತೆ, ನ್ಯಾಯ ನೀತಿ ದೊರಕದಿದೆ  ನನಗೆ, ಇದರತ್ತ ದೇವರ ಲಕ್ಷ್ಯ ಬೀಳದಿದೆ" ಎನ್ನುತ್ತಿರುವಿರಿ ಏಕೆ? ನೀವು ಕೇಳಿಲ್ಲವೇ? ನಿಮಗೆ ತಿಳಿದಿಲ್ಲವೇ? ಸರ್ವೇಶ್ವರ ಅನಂತ ದೇವರಲ್ಲವೇ? ಭೂದಿಗಂತಗಳನ್ನು ಆತ ಸೃಜಿಸಿದನಲ್ಲವೇ? ದಣಿವೆಂಬುದು ಇಲ್ಲ, ಬಳಲಿಕೆ ಎಂಬುದು ಇಲ್ಲ ಆತನಿಗೆ. ಆತನ ದಕ್ಷ ಸಾಮರ್ಥ್ಯ ಅಗಮ್ಯ ಪರಿಶೋಧನೆಗೆ. ದಯಪಾಲಿಸುವನಾತ ಬಲಾಭಿವೃದ್ಧಿಯನ್ನು ಬಳಲಿದವನಿಗೆ, ಅನುಗ್ರಹಿಸುವನಾತ ಚೈತನ್ಯವನು ನಿತ್ರಾಣನಿಗೆ. ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು. ಸರ್ವೇಶ್ವರನನ್ನು ಎದುರು ನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು; ಓಡಿದರೂ ದಣಿದರು, ನಡೆದರೂ ಬಳಲರು.

ಕೀರ್ತನೆ : 103:1-2, 3-4, 8, 10

ಶ್ಲೋಕ: "ನನ್ನ ಅಂತರಂಗವೇ, ಭಜಿಸು ಪ್ರಭುವನು"

ಶುಭಸಂದೇಶ: ಮತ್ತಾಯ 11:28-30

ಈ ಸಮಯದಲ್ಲಿ ಯೇಸು ಹೀಗೆಂದರು: "ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ. ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ, ಆಗ ನಿಮಗೆ ವಿಶ್ರಾಂತಿ ಸಿಗುವುದು. ನನ್ನ ನೊಗ ಹಗುರ, ನನ್ನ ಹೊರೆ ಸುಗಮ."

No comments:

Post a Comment