ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

07.01.2020 - "ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?"

ಮೊದಲನೇ ವಾಚನ: 1ಯೊವಾನ್ನ  4:7-10  

ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿ ದೇವರಿಂದ ಉಗಮವಾದುದು. ಪ್ರೀತಿಸುವವನು ದೇವರ ಮಗನು. ಅವನು ದೇವರನ್ನು ಬಲ್ಲವನು. ಪ್ರೀತಿಸದವನು ದೇವರನ್ನು ಬಲ್ಲವನಲ್ಲ. ಏಕೆಂದರೆ, ದೇವರು ಪ್ರೀತಿಸ್ವರೂಪಿ. ತಮ್ಮ ಏಕೈಕ ಪುತ್ರನ ಮುಖಾಂತರ ನಾವು ಸಜ್ಜೀವವನ್ನು ಪಡೆಯುವಂತೆ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ನಮ್ಮ ಮೇಲೆ ದೇವರಿಗಿರುವ ಪ್ರೀತಿ ಹೀಗೆ ವ್ಯಕ್ತವಾಯಿತು. ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ಅವರು ನಮ್ಮನ್ನು ಪ್ರೀತಿಸಿ ನಮ್ಮ ಪಾಪ ನಿವಾರಣಾರ್ಥವಾಗಿ ತಮ್ಮ ಪುತ್ರನನ್ನು ಕಳುಹಿಸಿದ್ದರಲ್ಲಿಯೇ ಪ್ರೀತಿಯ ನಿಜಗುಣ ತೋರಿಬರುತ್ತದೆ. 


ಕೀರ್ತನೆ:  71:1-2, 3-4, 7-8 

ಶ್ಲೋಕ: ರಾಷ್ಟ್ರಗಳು ಸಾಷ್ಟಾಂಗವೆರಗಲಿ ಸರ್ವೇಶ್ವರಸ್ವಾಮಿಗೆ. 

ಶುಭಸಂದೇಶ: ಮಾರ್ಕ  6:34-44 

ಯೇಸು ದೋಣಿಯಿಂದ ಇಳಿದಾಗ ಅಲ್ಲಿ ದೊಡ್ಡ ಜನಸಮೂಹವೇ ಸೇರಿತ್ತು. ಆ ಜನರು ಕುರುಬನಿಲ್ಲದ ಕುರಿಗಳಂತಿರುವುದನ್ನು ಕಂಡು ಯೇಸುವಿನ ಮನ ಕರಗಿತು; ಅನೇಕ ವಿಷಯಗಳನ್ನು ಕುರಿತು ಅವರಿಗೆ ಉಪದೇಶವಿತ್ತರು. ಅಷ್ಟರಲ್ಲಿ ಸಂಜೆಯಾಗುತ್ತಾ ಬಂದಿತು. ಶಿಷ್ಯರು ಯೇಸುವಿನ ಬಳಿಗೆ ಬಂದು, "ಈಗಾಗಲೇ ಹೊತ್ತು ಮೀರಿಹೋಯಿತು; ಇದು ನಿರ್ಜನ ಪ್ರದೇಶ; ಇನ್ನು ಜನರನ್ನು ಕಳುಹಿಸಿಬಿಡಿ. ಅವರು ಸಮೀಪದ ಊರುಕೇರಿಗಳಿಗೆ ಹೋಗಿ ಊಟಕ್ಕೆ ಏನಾದರೂ ಕೊಂಡುಕೊಳ್ಳಲಿ," ಎಂದರು. ಆಗ ಯೇಸು, "ನೀವೇ ಅವರಿಗೆ ಊಟಕ್ಕೆನಾದರೂ ಕೊಡಿ," ಎಂದರು. ಅದಕ್ಕೆ ಶಿಷ್ಯರು "ನಾವು ಹೋಗಿ ಇನ್ನೂರು ದೆನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡು ತಂದು ಅವರಿಗೆ ಊಟಕ್ಕೆ ಬಡಿಸೋಣವೇನು?" ಎಂದರು. ಯೇಸು, "ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿಕೊಂಡು ಬನ್ನಿ," ಎಂದರು. ಅವರು ವಿಚಾರಿಸಿಕೊಂಡು ಬಂದು, "ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ," ಎಂದು ತಿಳಿಸಿದರು. ಎಲ್ಲರು ಪಂಕ್ತಿಪಂಕ್ತಿಯಾಗಿ ಹಸಿರುಹುಲ್ಲಿನ ಮೇಲೆ ಊಟಕ್ಕೆ  ಕುಳಿತುಕೊಳ್ಳಬೇಕೆಂದು ಯೇಸು ಅಪ್ಪಣೆಮಾಡಿದರು. ಅವರು ಐವತ್ತರಂತೆಯೂ ನೂರರಂತೆಯೂ ಪಂಕ್ತಿಯಲ್ಲಿ ಕುಳಿತರು.

ಯೇಸು ಆ ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ ತೆಗೆದುಕೊಂಡು, ಸ್ವರ್ಗದತ್ತ ಕಣ್ಣೆತ್ತಿ ನೋಡಿ, ದೇವರಿಗೆ ಸ್ತೋತ್ರ ಸಲ್ಲಿಸಿದರು. ತರುವಾಯ ಆ ರೊಟ್ಟಿಗಳನ್ನು ಮುರಿದು ಜನರಿಗೆ ಬಡಿಸುವಂತೆ ಅವನ್ನು ಶಿಷ್ಯರಿಗೆ ಕೊಟ್ಟರು. ಅಂತೆಯೇ ಎರಡು ಮೀನುಗಳನ್ನು ಜನರೆಲ್ಲರಿಗೆ ಹಂಚುವಂತೆ ಮಾಡಿದರು. ಎಲ್ಲರೂ ಹೊಟ್ಟೆ ತುಂಬಾ ತಿಂದು ತೃಪ್ತರಾದರು. ಇನ್ನೂ ಉಳಿದಿದ್ದ  ರೊಟ್ಟಿ ಮತ್ತು ಮೀನಿನ ತುಂಡುಗಳನ್ನು ಒಟ್ಟುಗೂಡಿಸಿದಾಗ, ಅವು ಹನ್ನೆರಡು ಬುಟ್ಟಿ ತುಂಬ ಆದವು. ಊಟ ಮಾಡಿದವರಲ್ಲಿ ಗಂಡಸರ ಸಂಖ್ಯೆಯೇ ಐದು ಸಾವಿರ.

No comments:

Post a Comment