ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

16.01.2020

ಮೊದಲನೇ ವಾಚನ: 1 ಸಮುವೇಲ 4: 1-11

ಇಸ್ರಯೇಲರು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸವಿೂಪದಲ್ಲಿ ಪಾಳೆಯ ಮಾಡಿಕೊಂಡರು. ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳಿದುಕೊಂಡರು. ಇವರು ಇಸ್ರಯೇಲರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧ ಮಾಡಿದರು. ಇಸ್ರಯೇಲರು ಸೋತರು. ರಣರಂಗದಲ್ಲಿ ಸುಮಾರು ನಾಲ್ಕು ಸಾವಿರ ಮಂದಿ ಇಸ್ರಯೇಲರನ್ನು ಫಿಲಿಷ್ಟಿಯರು ಸಂಹರಿಸಿದರು. ಇಸ್ರಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರೊಡನೆ ಅವರ ಹಿರಿಯರು, “ಸರ್ವೇಶ್ವರ ಈ ದಿನ ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶಿಲೋವಿನಿಂದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ತರೋಣ; ಅವರು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ರಕ್ಷಿಸಲಿ,” ಎಂದು ಸಮಾಲೋಚಿಸಿದರು. ಅಂತೆಯೇ ಜನರನ್ನು ಕಳುಹಿಸಿ ಕೆರೂಬಿಗಳ ಮಧ್ಯದಲ್ಲಿ ಆಸೀನರಾಗಿರುವ ಸೇನಾಧೀಶ್ವರ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು. ಸರ್ವೇಶ್ವರನ ಒಡಂಬಡಿಕೆಯ ಮಂಜೂಷ ಪಾಳೆಯಕ್ಕೆ ಬಂದಾಗ ಇಸ್ರಯೇಲರೆಲ್ಲರೂ ಭೂಮಿ ಬಿರಿಯುವಷ್ಟು ಗಟ್ಟಿಯಾಗಿ ಜಯಕಾರ ಮಾಡಿದರು. ಫಿಲಿಷ್ಟಿಯರು ಇದನ್ನು ಕೇಳಿ, “ಹಿಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೆ ಏನು ಕಾರಣ?” ಎಂದು ವಿಚಾರಿಸಿದರು. ಸರ್ವೇಶ್ವರನ ಮಂಜೂಷವು ಪಾಳೆಯಕ್ಕೆ ಬಂದದ್ದೇ ಕಾರಣವೆಂದು ಗೊತ್ತಾಯಿತು. “ದೇವರು ಇವರ ಪಾಳೆಯಕ್ಕೆ ಬಂದಿದ್ದಾರಂತೆ!” ಎಂದುಕೊಂಡು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟರು. “ಅಯ್ಯೋ, ಹಿಂದೆ ಹೀಗಿರಲಿಲ್ಲ. ಅಕಟಾ, ಪ್ರತಾಪವುಳ್ಳ ಈ ದೇವರುಗಳ ಕೈಯಿಂದ ನಮ್ಮನ್ನು ಬಿಡಿಸುವವರಾರು? ಈಜಿಪ್ಟರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೆ? ಫಿಲಿಷ್ಟಿಯರೇ, ಧೈರ್ಯಗೊಳ್ಳಿ; ಶೂರರಾಗಿರಿ! ಇಲ್ಲವಾದರೆ ನಿಮಗೆ ಗುಲಾಮರಾಗಿದ್ದ ಹಿಬ್ರಿಯರಿಗೆ ನೀವೇ ಗುಲಾಮರಾದೀರಿ; ಆದಕಾರಣ ಶೌರ್ಯದಿಂದ ಯುದ್ಧಮಾಡಿ!” ಎಂದು ಹೇಳಿಕೊಂಡು ಯುದ್ಧಮಾಡಿದರು. ಇಸ್ರಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು. ದೇವರ ಮಂಜೂಷ ಶತ್ರುವಶವಾಯಿತು. ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸ ಹತರಾದರು.

ಕೀರ್ತನೆ: 44:10-11, 14-15, 24-25
ಶ್ಲೋಕ: ಪ್ರಭೂ, ನಿನ್ನಚಲ ಪ್ರೇಮದಿಂದ ನಮ್ಮನು ಉದ್ಧರಿಸು 

ಶುಭಸಂದೇಶ: ಮಾರ್ಕ 1:40-45

ಒಮ್ಮೆ ಕುಷ್ಠರೋಗಿಯೊಬ್ಬನು ಯೇಸುಸ್ವಾಮಿಯ ಬಳಿಗೆ ಬಂದು, ಮೊಣಕಾಲೂರಿ, “ತಾವು ಮನಸ್ಸುಮಾಡಿದ್ದಲ್ಲಿ ನನ್ನನ್ನು ಗುಣ ಮಾಡಬಲ್ಲಿರಿ,” ಎಂದು ದೈನ್ಯದಿಂದ ಬೇಡಿಕೊಂಡನು. ಯೇಸುವಿನ ಮನ ಕರಗಿತು. ಅವರು ಕೈಚಾಚಿ, ಕುಷ್ಠರೋಗಿಯನ್ನು ಮುಟ್ಟಿ, “ಖಂಡಿತವಾಗಿ ನನಗೆ ಮನಸ್ಸಿದೆ, ನಿನಗೆ ಗುಣವಾಗಲಿ,” ಎಂದರು. ತಕ್ಷಣ ಅವನ ಕುಷ್ಠವು ಮಾಯವಾಯಿತು. ಅವನು ಗುಣಹೊಂದಿದನು. ಯೇಸು ಅವನಿಗೆ, “ಎಚ್ಚರಿಕೆ! ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ. ಅನಂತರ ಮೋಶೆ ನಿಯಮಿಸಿರುವ ಶುದ್ಧೀಕರಣ ವಿಧಿಗಳನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದು ಎಚ್ಚರಿಸಿ ಅವನನ್ನು ಕೂಡಲೇ ಕಳುಹಿಸಿಬಿಟ್ಟರು. ಯೇಸು ಅವನಿಗೆ, “ಎಚ್ಚರಿಕೆ! ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ. ಅನಂತರ ಮೋಶೆ ನಿಯಮಿಸಿರುವ ಶುದ್ಧೀಕರಣ ವಿಧಿಗಳನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದು ಎಚ್ಚರಿಸಿ ಅವನನ್ನು ಕೂಡಲೇ ಕಳುಹಿಸಿಬಿಟ್ಟರು. ಆದರೆ ಅವನು ಹೋಗಿ ಈ ಸಮಾಚಾರವನ್ನು ಎಲ್ಲೆಲ್ಲೂ ಸಾರಿದನು. ಈ ಕಾರಣ ಯೇಸು ಬಹಿರಂಗವಾಗಿ ಯಾವ ಪಟ್ಟಣದೊಳಕ್ಕೂ ಹೋಗಲು ಆಗಲಿಲ್ಲ. ಆದುದರಿಂದ ನಿರ್ಜನ ಪ್ರದೇಶಗಳಲ್ಲೇ ಇರತೊಡಗಿದರು. ಆದರೂ ಜನರು ನಾಲ್ದೆಸೆಗಳಿಂದ ಅವರು ಇದ್ದೆಡೆಗೆ ಬರುತ್ತಲೇ ಇದ್ದರು.

No comments:

Post a Comment