ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

02.03.2020 - "ನಾನು ಹಸಿದಿದ್ದೆ, ನನಗೆ ಆಹಾರ ಕೊಟ್ಟಿರಿ; ಬಾಯಾರಿದ್ದೆ, ಕುಡಿಯಲು ಕೊಟ್ಟಿರಿ"

ಮೊದಲನೇ ವಾಚನ: ಯಾಜಕಕಾಂಡ 19:1-2, 11-18

ಮೋಶೆಗೆ ಹೇಳಿದರು: “ನಿಮ್ಮ ದೇವರಾದ ಸರ್ವೇಶ್ವರನೆಂಬ ನಾನು ಪರಿಶುದ್ಧ ನಾಗಿರುವಂತೆ ನೀವು ಕೂಡ ಪರಿಶುದ್ಧರಾಗಿರಬೇಕು. ಕಳಬೇಡ; ಹುಸಿಯನ್ನು ನುಡಿಯಲು ಬೇಡ; ಒಬ್ಬರನ್ನೊಬ್ಬರು ಮೋಸಗೊಳಿಸುವುದು ಬೇಡ. ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿನ್ನ ದೇವರ ನಾಮಕ್ಕೆ ಅಪಕೀರ್ತಿ ತರಬೇಡ. ನಾನೇ ಸರ್ವೇಶ್ವರ.ಮತ್ತೊಬ್ಬನನ್ನು ಬಲಾತ್ಕರಿಸಬೇಡ; ಅವನ ಸೊತ್ತನ್ನು ಅಪಹರಿಸಬೇಡ. ಕೂಲಿಯವನ ಕೂಲಿಯನ್ನು ಮರುದಿನದವರೆಗೆ ನಿನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಡ. ಕಿವುಡರನ್ನು ದೂಷಿಸಬೇಡ; ಕುರುಡರು ನಡೆಯುವ ದಾರಿಯಲ್ಲಿ ಎರಡು ಕಲ್ಲನ್ನು ಇಡಬೇಡ, ನಿನ್ನ ದೇವರಲ್ಲಿ ಭಯಭಕ್ತಿಯಿರಲಿ, ನಾನೇ ಸರ್ವೇಶ್ವರ. ವ್ಯಾಜ್ಯತೀರಿಸುವಾಗ ಅನ್ಯಾಯವಾದ ತೀರ್ಪನ್ನು ಕೊಡಬೇಡ. ಬಡವನ ಬಡತನವನ್ನಾಗಲಿ, ದೊಡ್ಡವನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದ ತೀರ್ಪನ್ನು ಕೊಡು.ನಿನ್ನ ಜನರ ನಡುವೆ ಚಾಡಿಕೋರನಾಗಿ ತಿರುಗಾಡಬೇಡ; ಮತ್ತೊಬ್ಬನಿಗೆ ಮರಣಶಿಕ್ಷೆ ಆಗಲೇಬೇಕೆಂದು ಛಲಹಿಡಿಯಬೇಡ. ನಾನೇ ಸರ್ವೇಶ್ವರ.ಸಹೋದರನ ಬಗ್ಗೆ ಒಳಗೊಳಗೇ ಹಗೆ ಇಟ್ಟುಕೊಳ್ಳಬೇಡ. ನೆರೆಯವನ ದೋಷಕ್ಕೆ ನೀನು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ಎತ್ತಿ ತೋರಿಸಲೇಬೇಕು. ನಿನ್ನ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡು ಮಾಡಬೇಡ, ಅವರಿಗೆ ವಿರುದ್ಧ ಮತ್ಸರ ಇಟ್ಟುಕೊಳ್ಳಬೇಡ; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು. ನಾನು ಸರ್ವೇಶ್ವರ.

ಕೀರ್ತನೆ : 19:8,9,10,15

ಶ್ಲೋಕ : ಸ್ವಾಮಿ ಸರ್ವೇಶ್ವರಾ, ನಿಮ್ಮ ಮಾತುಗಳೇ ಆತ್ಮ ಮತ್ತು ಜೀವವಾಗಿದೆ

ಶುಭಸಂದೇಶ : ಮತ್ತಾಯ  25:31-46 

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು : ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು. ಸರ್ವಜನಾಂಗಗಳನ್ನು ಆತನ ಸಮ್ಮುಖದಲ್ಲಿ ಒಟ್ಟುಗೂಡಿಸಲಾಗುವುದು. ಕುರುಬನು ಕುರಿಗಳನ್ನು ಆಡುಗಳಿಂದ ಬೇರ್ಪಡಿಸುವಂತೆ ಆತನು ಅವರನ್ನು ಬೇರ್ಪಡಿಸುವನು. ಕುರಿಗಳನ್ನು ತನ್ನ ಬಲಗಡೆಯಲ್ಲೂ ಆಡುಗಳನ್ನು ತನ್ನ ಎಡಗಡೆಯಲ್ಲೂ ಇರಿಸುವನು. ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ. ಏಕೆಂದರೆ, ನಾನು ಹಸಿದಿದ್ದೆ, ನನಗೆ ಆಹಾರ ಕೊಟ್ಟಿರಿ; ಬಾಯಾರಿದ್ದೆ, ಕುಡಿಯಲು ಕೊಟ್ಟಿರಿ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ಕೊಟ್ಟಿರಿ. ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಟ್ಟಿರಿ. ರೋಗದಿಂದಿದ್ದೆ, ನನ್ನನ್ನು ಆರೈಕೆಮಾಡಿದಿರಿ. ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಿದಿರಿ,’ ಎಂದು ಹೇಳುವನು. ಅದಕ್ಕೆ ಸಜ್ಜನರು, ‘ಸ್ವಾಮೀ, ತಾವು ಯಾವಾಗ ಹಸಿದಿದ್ದನ್ನು ಕಂಡು ನಾವು ಆಹಾರ ಕೊಟ್ಟೆವು? ಬಾಯಾರಿದ್ದನ್ನು ಕಂಡು ಕುಡಿಯಲು ಕೊಟ್ಟೆವುಯಾವಾಗ ತಾವು ಅಪರಿಚಿತರಾಗಿದ್ದನ್ನು ಕಂಡು ನಾವು ಆಶ್ರಯಕೊಟ್ಟೆವು? ಬಟ್ಟೆಬರೆಯಿಲ್ಲದ್ದನ್ನು ಕಂಡು ಉಡಲು ಕೊಟ್ಟೆವುತಾವು ರೋಗಿಯಾಗಿರುವುದನ್ನು ಅಥವಾ ಬಂಧಿಯಾಗಿರುವುದನ್ನು ಕಂಡು ನಾವು ಸಂಧಿಸಲು ಬಂದೆವು?’ ಎಂದು ಕೇಳುವರು. ಆಗ ಅರಸನು ಪ್ರತ್ಯುತ್ತರವಾಗಿ, ‘ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.

ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ. ಏಕೆಂದರೆ ನಾನು ಹಸಿದಿದ್ದೆ, ನೀವು ನನಗೆ ಆಹಾರಕೊಡಲಿಲ್ಲ; ಬಾಯಾರಿದ್ದೆ, ಕುಡಿಯಲು ಕೊಡಲಿಲ್ಲ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ನೀಡಲಿಲ್ಲಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಡಲಿಲ್ಲ; ರೋಗಿಯಾಗಿದ್ದೆ, ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಲಿಲ್ಲ,’ ಎಂದು ಹೇಳುವನು. ಅದಕ್ಕೆ ಅವರು ಕೂಡ, ‘ಸ್ವಾಮೀ, ತಾವು ಯಾವಾಗ ಹಸಿದಿದ್ದಿರಿ, ಬಾಯಾರಿದ್ದಿರಿ, ಅಪರಿಚಿತರಾಗಿದ್ದಿರಿ, ಯಾವಾಗ ಬಟ್ಟೆಬರೆ ಇಲ್ಲದೆ ಇದ್ದಿರಿ, ರೋಗಿಯಾಗಿದ್ದಿರಿ, ಮತ್ತು ಬಂಧಿಯಾಗಿ ಇದ್ದಿರಿ ಮತ್ತು ನಾವು ಅವನ್ನು ಕಂಡು ನಿಮಗೆ ಉಪಚಾರಮಾಡದೆಹೋದೆವು? ಎಂದು ಪ್ರಶ್ನಿಸುವರು. ಅದಕ್ಕೆ ಪ್ರತ್ಯುತ್ತರವಾಗಿ ಅರಸನು, ‘ಇವರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆಹೋದಾಗ ಅದನ್ನು ನನಗೇ ಮಾಡಲಿಲ್ಲ,’ ಎನ್ನುವರುಹೀಗೆ ದುರ್ಜನರು ನಿತ್ಯ ಶಿಕ್ಷೆಗೂ, ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.

ಮನಸ್ಸಿಗೊಂದಿಷ್ಟು : ಸಂತ ಮಾರ್ಟಿನ್ ಆಫ್ ಟೂರ್ಸ್ ಸೈನಿಕರಾಗಿದ್ದಾಗ ಚಳಿಯಲ್ಲಿ ಬಟ್ಟೆಯಿಲ್ಲದೆ ನಿಂತಿದ್ದ ಬಿಕ್ಷುಕನನ್ನು ನೋಡಿದರು. ಕೊಡಲು ಹಣವಿಲ್ಲದ್ದರಿಂದ ಹಾಕಿಕೊಂಡಿದ್ದ ತಮ್ಮ ಸೈನಿಕ ಬಟ್ಟೆಯನ್ನು ಅರ್ಧ ಕತ್ತರಿಸಿ ಕೊಡುತ್ತಾರೆ. ರಾತ್ರಿ ಮಾರ್ಟಿನ್ ಅವರಿಗೊಂದು ಕನಸು ಕಾಣುತ್ತದೆ. ಬಿಕ್ಷುಕನಿಗೆ ಕೊಟ್ಟ ಆ ಹರಿದ ಬಟ್ಟೆಯನ್ನು ಯೇಸುಸ್ವಾಮಿ ಸ್ವರ್ಗದಲ್ಲಿ ಹಾಕಿಕೊಂಡಿದ್ದಾರೆ. ಆಗ ದೇವದೂತರು ’ಸ್ವಾಮಿ ಇದೇನು ಯಾವುದೋ ಹಳೆಯ, ಹರಿದ ಬಟ್ಟೆ ಧರಿಸಿದ್ದೀರಾ? ಯಾರು ಕೊಟ್ಟಿದ್ದು ಎಂದು ಕೇಳಲು, ಯೇಸುಸ್ವಾಮಿ ’ನನ್ನ ಸೇವಕ ಮಾರ್ಟಿನ್ ಕೊಟ್ಟಿದು’ ಎನ್ನುತ್ತಾರೆ ಯೇಸು. ಮಾರ್ಟಿನ ನ ಜೀವನ ಅಲ್ಲಿಂದ ಬದಲಾಯಿತು

ಪ್ರಶ್ನೆ : ಹಸಿದ, ಬಾಯಾರಿದ , ಆಶ್ರಯ ಬೇಡಿದವರತ್ತ ನಮ್ಮ ಪ್ರತಿಕ್ರಿಯೆ ಏನು?

ಪ್ರಭುವೇ,
ಕಾಣಲಾರದಾಗಿದ್ದೇನೆ ಹಸಿದವರಲ್ಲಿ
ಬಾಯಾರಿದವರಲ್ಲಿ, ಅಪರಿಚಿತರಲ್ಲಿ ನಿನ್ನ
ಸದಾ ಕಾಣುತ್ತಲೇ ಇರುವಂತೆ ತೆರೆಯಿರಿ
 ಈ ನನ್ನ ಹೃದಯವ, ಅಂತರಂಗದ ಕಣ್ಣ

No comments:

Post a Comment