ಮೊದಲನೇ ವಾಚನ: ಪ್ರವಾದಿ ಮೀಕನ ಗ್ರಂಥ 2:1-5

ಕೀರ್ತನೆ: 10:1-2, 3-4, 7-8, 14
ಶ್ಲೋಕ: ಪ್ರಭೂ, ದಲಿತನನು ಮರೆದಿರಯ್ಯಾ
ಶುಭಸಂದೇಶ: ಮತ್ತಾಯ 12:14-21
ಫರಿಸಾಯರಾದರೋ ಅಲ್ಲಿಂದ ಹೊರಗೆ ಹೋಗಿ ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು. ತಮಗೆ ವಿರುದ್ಧ ಒಳಸಂಚು ನಡೆಯುತ್ತಿದೆ ಎಂದು ಯೇಸುಸ್ವಾಮಿ ಅರಿತುಕೊಂಡು ಅಲ್ಲಿಂದ ಹೊರಟುಹೋದರು. ಅನೇಕ ಜನರು ಅವರ ಹಿಂದೆಯೇ ಹೋದರು. ಯೇಸು ಅಸ್ವಸ್ಥರಾಗಿದ್ದ ಎಲ್ಲರನ್ನು ಗುಣಪಡಿಸಿದರು ಮತ್ತು ತಮ್ಮ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಆಜ್ಞೆಮಾಡಿದರು. ಹೀಗೆ ದೇವರು ಪ್ರವಾದಿ ಯೆಶಾಯನ ಮುಖಾಂತರ ಹೇಳಿದ ಈ ವಚನ ನೆರವೇರಿತು: “ಇದಿಗೋ, ನನ್ನ ದಾಸನು, ನನ್ನಿಂದಾಯ್ಕೆಯಾದವನು, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ನೆಲೆಗೊಳಿಸುವೆ ಇವನಲಿ ಎನ್ನಾತ್ಮವನು; ಸಾರುವನಿವನು ಜಗದಲಿ ನನ್ನ ಧರ್ಮವನು. ವಾದಿಸುವವನಲ್ಲ, ದನಿಯೆತ್ತಿ ಕೂಗುವವನಲ್ಲ, ಹಾದಿ ಬೀದಿಯಲ್ಲಿವನ ಕಂಠ ಮೊರೆಯುವುದಿಲ್ಲ. ಮುರಿದ ಜೊಂಡಿನಂತಹ ದುರ್ಬಲರಿಗೀತ ದೀನಬಂಧು ನಂದಿಹೋಗುತಿಹ ದೀನದಲಿತರಿಗೆ ಕೃಪಾಸಿಂಧು ನ್ಯಾಯನೀತಿಗೆ ಜಯ ದೊರಕಿಸದೆ ಬಿಡನಿವನು. ನೆಮ್ಮುವರು ಅನ್ಯಜನರೆಲ್ಲರು ಇವನ ನಾಮವನು.”
¤£ÉÆ߮ĪÉÄ
No comments:
Post a Comment