01.09.20 - “ಎಂಥಾ ಮಾತುಗಳಿವು! ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಕೂಡ ಆಜ್ಞೆ ಮಾಡುತ್ತಾನೆ"
31.08.20 - "ಆದರೆ ಯಾವ ಪ್ರವಾದಿಯೂ ಸ್ವಗ್ರಾಮದಲ್ಲಿ ಸನ್ಮಾನಿತನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ"
ಯೇಸುಸ್ವಾಮಿ ತಾವು ಬೆಳೆದ ಊರಾದ ನಜರೇತಿಗೆ ಬಂದರು. ವಾಡಿಕೆಯ ಪ್ರಕಾರ ಸಬ್ಬತ್ದಿನ ಪ್ರಾರ್ಥನಾಮಂದಿರಕ್ಕೆ ಹೋದರು. ಅಲ್ಲಿ ಪವಿತ್ರಗ್ರಂಥವನ್ನು ಓದುವುದಕ್ಕೆ ಅವರು ಎದ್ದುನಿಂತಾಗ, ಪ್ರವಾದಿ ಯೆಶಾಯನ ಗ್ರಂಥದ ಸುರುಳಿಯನ್ನು ಅವರ ಕೈಗೆ ಕೊಟ್ಟರು. ಅದನ್ನು ಬಿಚ್ಚಿದಾಗ ಈ ಕೆಳಗಿನ ವಚನಗಳು ಯೇಸುವಿನ ಕಣ್ಣಿಗೆ ಬಿದ್ದವು: “ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ ದೇವರು ತಮ್ಮ ಜನತೆಯನ್ನು ಉದ್ಧರಿಸುವ ಕಾಲ ಬಂತೆಂದು ಸಾರಲೂ ಅವರು ನನ್ನನ್ನು ಕಳುಹಿಸಿದ್ದಾರೆ.” ಈ ವಾಕ್ಯವನ್ನು ಓದಿ, ಸುರುಳಿಯನ್ನು ಸುತ್ತಿ, ಪ್ರಾರ್ಥನಾಮಂದಿರದ ಸೇವಕನ ಕೈಗಿತ್ತು, ಯೇಸು ಕುಳಿತುಕೊಂಡರು. ಅಲ್ಲಿದ್ದ ಎಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು. ಆಗ ಯೇಸು, “ನೀವು ಈ ಪವಿತ್ರ ವಾಕ್ಯವನ್ನು ಕೇಳುತ್ತಿದ್ದ ಹಾಗೆಯೇ ಅದು ಇಂದು ನೆರವೇರಿತು,” ಎಂದು ವಿವರಿಸಲಾರಂಭಿಸಿದರು. ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. “ಇವನು ಜೋಸೆಫನ ಮಗನಲ್ಲವೆ?” ಎಂದು ಮಾತನಾಡಿಕೊಂಡರು. ಅನಂತರ ಯೇಸು ಅವರಿಗೆ, “ ‘ವೈದ್ಯನೇ, ಮೊದಲು ನಿನ್ನನ್ನು ನೀನು ಗುಣಪಡಿಸಿಕೊ’, ಎಂಬ ಗಾದೆಯನ್ನು ನೀವು ನಿಸ್ಸಂದೇಹವಾಗಿ ನನಗೆ ಅನ್ವಯಿಸುವಿರಿ; ಅಲ್ಲದೆ, ‘ಕಫೆರ್ನವುಮಿನಲ್ಲಿ ನೀನು ಎಂಥೆಂಥ ಮಹತ್ಕಾರ್ಯಗಳನ್ನು ಮಾಡಿದೆ ಎಂದು ನಾವು ಕೇಳಿದ್ದೇವೆ; ಅಂಥವುಗಳನ್ನು ಈ ನಿನ್ನ ಸ್ವಂತ ಊರಿನಲ್ಲೂ ಮಾಡು,’ ಎಂದೂ ಹೇಳುವಿರಿ. ಆದರೆ ಯಾವ ಪ್ರವಾದಿಯೂ ಸ್ವಗ್ರಾಮದಲ್ಲಿ ಸನ್ಮಾನಿತನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಹಿಂದೆ ನಡೆದ ಒಂದು ಸಂಗತಿಯನ್ನು ಕೇಳಿ: ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಕ್ಷಾಮ ಬಂದೊದಗಿತ್ತು. ಆಗ ಇಸ್ರಯೇಲ್ ನಾಡಿನಲ್ಲಿ ಎಷ್ಟೋ ಮಂದಿ ವಿಧವೆಯರಿದ್ದರು. ಅವರಾರ ಬಳಿಗೂ ದೇವರು ಎಲೀಯನನ್ನು ಕಳಿಸಲಿಲ್ಲ. ಸಿದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನ ಒಬ್ಬ ವಿಧವೆಯ ಬಳಿಗೆ ಮಾತ್ರ ಕಳಿಸಿದರು. ಅಂತೆಯೇ, ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಯೇಲ್ ನಾಡಿನಲ್ಲಿ ಅನೇಕ ಕುಷ್ಠರೋಗಿಗಳು ಇದ್ದರು. ಅವರಲ್ಲಿ ಸಿರಿಯ ದೇಶದ ನಾಮನನನ್ನು ಬಿಟ್ಟು ಮಿಕ್ಕ ಯಾರೂ ಗುಣಮುಖರಾಗಲಿಲ್ಲ,” ಎಂದು ಹೇಳಿದರು. ಇದನ್ನು ಕೇಳಿ, ಪ್ರಾರ್ಥನಾಮಂದಿರದಲ್ಲಿ ಇದ್ದ ಎಲ್ಲರೂ ಕಡುಕೋಪಗೊಂಡರು. ಯೇಸುವನ್ನು ಆ ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರಿದ್ದ ಗುಡ್ಡದ ತುದಿಗೆ ಕೊಂಡೊಯ್ದು, ಅಲ್ಲಿಂದ ಅವರನ್ನು ಕೆಳಕ್ಕೆ ದಬ್ಬಬೇಕೆಂದಿದ್ದರು. ಯೇಸುವಾದರೋ, ಅವರ ನಡುವೆಯೇ ನಡೆದು, ತಮ್ಮ ದಾರಿ ಹಿಡಿದುಹೋದರು.
30.08.20 - ನೀನು ನನಗೆ ಅಡೆತಡೆ; ನಿನ್ನ ಈ ಆಲೋಚನೆ ಮನುಷ್ಯರದ್ದೇ ಹೊರತು, ದೇವರದಲ್ಲ,”
29.08.20 - ಪಹರೆಯವನು ಸೆರೆಮನೆಗೆ ಹೋಗಿ ಯೊವಾನ್ನನ ತಲೆಯನ್ನು ಕತ್ತರಿಸಿ, ಅದನ್ನು ತಟ್ಟೆಯಲ್ಲಿ ಇಟ್ಟು ಹುಡುಗಿಗೆ ತಂದುಕೊಟ್ಟನು.
28.08.2020 - "ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು."
ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: “ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಹೇಗಿರುವುದು ಎನ್ನುವುದಕ್ಕೆ ಈ ಸಾಮತಿಯನ್ನು ಕೊಡಬಹುದು: ಹತ್ತುಮಂದಿ ಕನ್ಯೆಯರು ದೀಪಾರತಿ ಹಿಡಿದು ಮದುವಣಿಗನನ್ನು ಎದುರುಗೊಳ್ಳಲು ಹೋದರು. ಅವರಲ್ಲಿ ಐವರು ವಿವೇಕಿಗಳು, ಐವರು ಅವಿವೇಕಿಗಳು. ಅವಿವೇಕಿಗಳು ದೀಪಗಳನ್ನು ತೆಗೆದುಕೊಂಡರೇ ಹೊರತು ಜೊತೆಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. ವಿವೇಕಿಗಳಾದರೋ ದೀಪಗಳ ಜೊತೆಗೆ ಬುಡ್ಡಿಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. ಮದುವಣಿಗ ಬರುವುದು ತಡವಾಯಿತು. ಅವರೆಲ್ಲರೂ ತೂಕಡಿಸುತ್ತಾ ಹಾಗೇ ನಿದ್ರೆಹೋದರು. “ನಡುರಾತ್ರಿಯ ವೇಳೆ. ‘ಇಗೋ, ಮದುವಣಿಗ ಬರುತ್ತಿದ್ದಾನೆ; ಬನ್ನಿ, ಆತನನ್ನು ಎದುರುಗೊಳ್ಳಿ,’ ಎಂಬ ಕೂಗು ಕೇಳಿಸಿತು. ಕನ್ಯೆಯರೆಲ್ಲರೂ ಎದ್ದರು. ತಮ್ಮತಮ್ಮ ದೀಪದ ಬತ್ತಿಯನ್ನು ಸರಿಮಾಡಿದರು. ಅವಿವೇಕಿಗಳು, ‘ನಮ್ಮ ದೀಪಗಳು ಆರಿಹೋಗುತ್ತಾ ಇವೆ; ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿ,’ ಎಂದು ವಿವೇಕಿಗಳನ್ನು ಕೇಳಿಕೊಂಡರು. ಅದಕ್ಕೆ ಅವರು, ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆಹೋದೀತು, ನೀವು ಅಂಗಡಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು,’ ಎಂದರು. ಅಂತೆಯೇ ಅವರು ಎಣ್ಣೆಯನ್ನು ಕೊಂಡುಕೊಳ್ಳಲು ಹೋದಾಗ ಮದುವಣಿಗನು ಬಂದೇಬಿಟ್ಟನು. ಸಿದ್ಧರಾಗಿದ್ದವರು ಅವನ ಸಂಗಡ ವಿವಾಹ ಮಹೋತ್ಸವಕ್ಕೆ ಹೋದರು. ಕಲ್ಯಾಣಮಂಟಪದ ಬಾಗಿಲುಗಳನ್ನು ಮುಚ್ಚಲಾಯಿತು. ಉಳಿದ ಕನ್ಯೆಯರು ಅನಂತರ ಬಂದರು. ‘ಸ್ವಾಮೀ, ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ಕೂಗಿಕೊಂಡರು. ಅದಕ್ಕೆ ಉತ್ತರವಾಗಿ ಆ ಮದುವಣಿಗ, ‘ಅದಾಗದು, ನೀವು ಯಾರೋ ನನಗೆ ಗೊತ್ತಿಲ್ಲ,’ ಎಂದುಬಿಟ್ಟ. ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು."
27.08.20 - ಕುಡುಕರ ಸಂಗಡ ತಿಂದು ಕುಡಿಯಲಾರಂಭಿಸಿದರೆ, ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ, ಯಜಮಾನನು ಬರುವನು.
26.08.20 - ನೀವು ಸುಣ್ಣ ಬಳಿದ ಸಮಾಧಿಗಳು, ಬಹಿರಂಗ ನೋಟಕ್ಕೆ ನೀವು ಸತ್ಪುರುಷರು. ಅಂತರಂಗದಲ್ಲಾದರೋ ಕಪಟ ಕಲ್ಮಶಗಳಿಂದ ತುಂಬಿದವರು.

25.08.20 - ನೀವು ನಿಮ್ಮ ತಟ್ಟೆ ಲೋಟಗಳ ಹೊರ ಭಾಗಗಳನ್ನೇನೋ ಶುಚಿ ಮಾಡುತ್ತೀರಿ; ಆದರೆ ಅವುಗಳ ಒಳಭಾಗ ಕೊಳೆ ಹಾಗೂ ಲೋಭದ ಗಳಿಕೆಗಳಿಂದ ತುಂಬಿ ಹೋಗಿದೆ.
24.08.20 - “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,”
ಫಿಲಿಪ್ಪನು ನತಾನಿಯೇಲನನ್ನು ಕಂಡು, “ಧರ್ಮಶಾಸ್ತ್ರದಲ್ಲಿ ಮೋಶೆ ಉಲ್ಲೇಖಿಸಿದ ಮತ್ತು ಪ್ರವಾದಿಗಳು ಪ್ರವಚನ ಮಾಡಿದ ವ್ಯಕ್ತಿಯು ನಮಗೆ ಸಿಕ್ಕಿದ್ದಾರೆ. ಇವರೇ ಜೋಸೆಫನ ಮಗನಾದ ನಜರೇತ್ ಊರಿನ ಯೇಸು,” ಎಂದು ಹೇಳಿದನು. ಅದಕ್ಕೆ ನತಾನಿಯೇಲನು, “ಏನು? ನಜರೇತಿನಿಂದ ಒಳ್ಳೆಯದೇನಾದರೂ ಬರುವುದು ಉಂಟೆ?” ಎಂದು ಕೇಳಲು, “ಬಂದು ನೀನೇ ನೋಡು,” ಎಂದು ಫಿಲಿಪ್ಪನು ಉತ್ತರಕೊಟ್ಟನು. ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು. ನತಾನಿಯೇಲನು, “ನನ್ನ ಪರಿಚಯ ನಿಮಗೆ ಹೇಗಾಯಿತು?” ಎಂದು ಕೇಳಲು ಯೇಸು, “ಫಿಲಿಪ್ಪನು ನಿನ್ನನ್ನು ಕರೆಯುವ ಮೊದಲೇ ನೀನು ಅಂಜೂರದ ಮರದಡಿ ಇದ್ದಾಗ ನಾನು ನಿನ್ನನ್ನು ಕಂಡೆ,” ಎಂದು ಉತ್ತರಕೊಟ್ಟರು. ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು. ಆಗ ಯೇಸು, “ಅಂಜೂರದ ಮರದಡಿಯಲ್ಲಿ ನಿನ್ನನ್ನು ಕಂಡೆ ಎಂದು ನಾನು ಹೇಳಿದ ಮಾತ್ರಕ್ಕೆ ಇಷ್ಟೊಂದು ವಿಶ್ವಾಸವೆ? ಇದಕ್ಕೂ ಮಿಗಿಲಾದವುಗಳನ್ನು ನೀನು ಕಾಣುವೆ,” ಎಂದು ನುಡಿದರು. ತಮ್ಮ ಮಾತನ್ನು ಮುಂದುವರೆಸುತ್ತಾ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ,” ಎಂದು ಹೇಳಿದರು.
23.08.20 - “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ,”
22.08.20 - "ಅವರು ನುಡಿದಂತೆ ನಡೆಯುವುದಿಲ್ಲ"
ಮೊದಲನೇ ವಾಚನ: ಪ್ರವಾದಿ ಯೆಜೆಕಿಯೇಲನ ಗ್ರಂಥ 43:1-7
ಕೀರ್ತನೆ: 85:9-10, 11-12, 13-14
ಶ್ಲೋಕ: ಪ್ರಭುವಿನ ಮಹಿಮೆ ನಾಡಿನಲ್ಲಿರುವುದು ನಿರುತ
ಶುಭಸಂದೇಶ: ಮತ್ತಾಯ 23:1-12
ಬಳಿಕ ಜನಸಮೂಹವನ್ನೂ ತಮ್ಮ ಶಿಷ್ಯರನ್ನೂ ಉದ್ದೇಶಿಸಿ ಯೇಸುಸ್ವಾಮಿ ಇಂತೆಂದರು: “ಧರ್ಮಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಇದ್ದಾರೆ. ಆದುದರಿಂದ ಅವರು ನಿಮಗೆ ಉಪದೇಶಿಸುವುದನ್ನೆಲ್ಲಾ ಆಲಿಸಿರಿ ಹಾಗೂ ಪಾಲಿಸಿರಿ. ಆದರೆ ಅವರ ನಡತೆಯನ್ನು ಅನುಸರಿಸಬೇಡಿ. ಏಕೆಂದರೆ ಅವರು ನುಡಿದಂತೆ ನಡೆಯುವುದಿಲ್ಲ. ಭಾರವಾದ ಹಾಗೂ ಹೊರಲಾಗದ ಹೊರೆಗಳನ್ನು ಕಟ್ಟಿ ಮಾನವರ ಹೆಗಲ ಮೇಲೆ ಹೇರುತ್ತಾರೆ. ತಾವಾದರೋ ಅವನ್ನು ಕಿರುಬೆರಳಿನಿಂದಲೂ ಮುಟ್ಟಲೊಲ್ಲರು. ತಾವು ಕೈಗೊಳ್ಳುವ ಕಾರ್ಯಗಳನ್ನೆಲ್ಲಾ ಜನರು ನೋಡಲೆಂದೇ ಮಾಡುತ್ತಾರೆ. ತಮ್ಮ ಧಾರ್ಮಿಕ ಹಣೆಪಟ್ಟಿಗಳನ್ನು ಅಗಲ ಮಾಡಿಕೊಳ್ಳುತ್ತಾರೆ. ಮೇಲಂಗಿಯ ಗೊಂಡೆಗಳನ್ನು ಉದ್ದುದ್ದ ಮಾಡಿಕೊಳ್ಳುತ್ತಾರೆ. ಔತಣಕೂಟಗಳಲ್ಲಿ ಶ್ರೇಷ್ಠ ಸ್ಥಾನಮಾನಗಳನ್ನೂ ಪ್ರಾರ್ಥನಾಮಂದಿರಗಳಲ್ಲಿ ಉನ್ನತ ಆಸನಗಳನ್ನೂ ಪೇಟೆಬೀದಿಗಳಲ್ಲಿ ವಂದನೋಪಚಾರಗಳನ್ನೂ ಅವರು ಅಪೇಕ್ಷಿಸುತ್ತಾರೆ. ಅದು ಮಾತ್ರವಲ್ಲ, ‘ಗುರುವೇ’ ಎಂದು ಕರೆಸಿಕೊಳ್ಳಲು ಇಚ್ಛಿಸುತ್ತಾರೆ. 8ಹಾಗೆ ಕರೆಸಿಕೊಳ್ಳುವುದು ನಿಮಗೆ ಬೇಡ. ನಿಮಗಿರುವ ಗುರುವು ಒಬ್ಬರೇ ಮತ್ತು ನೀವೆಲ್ಲರೂ ಸಹೋದರರು. ಇಹದಲ್ಲಿ ನೀವು ಯಾರನ್ನೂ ‘ಪಿತನೇ’ ಎಂದು ಸಂಬೋಧಿಸಬೇಡಿ. ಏಕೆಂದರೆ ನಿಮ್ಮ ಪಿತ ಒಬ್ಬರೇ. ಅವರು ಸ್ವರ್ಗದಲ್ಲಿದ್ದಾರೆ. ಒಡೆಯ ಎಂದೂ ಕರೆಯಿಸಿಕೊಳ್ಳಬೇಡಿ; ಏಕೆಂದರೆ ನಿಮಗಿರುವ ಒಡೆಯ ಒಬ್ಬನೇ, ‘ಆತನೇ ಕ್ರಿಸ್ತ.’ ನಿಮ್ಮಲ್ಲಿ ಶ್ರೇಷ್ಠನು ಯಾರೋ ಅವನು ನಿಮ್ಮ ಸೇವಕನಾಗಿರಬೇಕು. ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವ ಪ್ರತಿಯೊಬ್ಬನನ್ನೂ ದೇವರು ಕೆಳಗಿಳಿಸುವರು. ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು.
21.08.20 - "ಸಮಸ್ತ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಪ್ರವಚನಕ್ಕೂ ಈ ಎರಡು ಆಜ್ಞೆಗಳೇ ಆಧಾರ,”
ಯೇಸುಸ್ವಾಮಿ ಸದ್ದುಕಾಯರನ್ನು ಸದ್ದೆತ್ತದಂತೆ ಮಾಡಿದರೆಂಬ ಸಮಾಚಾರ ಫರಿಸಾಯರಿಗೆ ಮುಟ್ಟಿತು. ಅವರು ಒಟ್ಟಾಗಿ ಸ್ವಾಮಿಯ ಬಳಿಗೆ ಬಂದರು. ಅವರಲ್ಲಿ ಒಬ್ಬ ಧರ್ಮೋಪದೇಶಕನು ಯೇಸುವನ್ನು ಪರೀಕ್ಷಿಸುವ ಸಲುವಾಗಿ, ಹೀಗೆಂದು ಪ್ರಶ್ನಿಸಿದನು: “ಬೋಧಕರೇ, ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ಆಜ್ಞೆ ಯಾವುದು?” ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು.’ ಇದೇ ಪ್ರಮುಖ ಹಾಗೂ ಪ್ರಥಮ ಆಜ್ಞೆ. ಇದಕ್ಕೆ ಸರಿಹೊಂದುವ ಎರಡನೇ ಆಜ್ಞೆ ಯಾವುದೆಂದರೆ, ‘ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು.’ ಸಮಸ್ತ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಪ್ರವಚನಕ್ಕೂ ಈ ಎರಡು ಆಜ್ಞೆಗಳೇ ಆಧಾರ,” ಎಂದರು.
20.08.20 - “ಹೀಗೆ, ಆಹ್ವಾನಿತರು ಅನೇಕರಾದರೂ ಆರಿಸಲಾದವರು ಕೆಲವರು ಮಾತ್ರ”
19.08.20 - 'ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’
ಯೇಸು ತಮ್ಮ ಶಿಷ್ಯರಿಗೆ ಈ ಸಾಮತಿ ಹೇಳಿದರು, “ಸ್ವರ್ಗಸಾಮ್ರಾಜ್ಯವು ಹೀಗಿದೆ: ಒಬ್ಬ ಯಜಮಾನನಿಗೆ ಒಂದು ದ್ರಾಕ್ಷಿತೋಟವಿತ್ತು. ಅದರಲ್ಲಿ ಕೆಲಸ ಮಾಡುವುದಕ್ಕೆ ಕೂಲಿಗಾರರನ್ನು ಗೊತ್ತುಮಾಡಲು ಅವನು ಬೆಳಗಿನ ಜಾವದಲ್ಲೇ ಹೊರಟ. ಆಳಿಗೆ ಒಂದು ಬೆಳ್ಳಿ ನಾಣ್ಯದಂತೆ ದಿನಕೂಲಿಯನ್ನು ಮಾತಾಡಿ ತೋಟಕ್ಕೆ ಕಳುಹಿಸಿದ. ಸುಮಾರು ಬೆಳಿಗ್ಗೆ ಒಂಭತ್ತು ಗಂಟೆಗೆ ಅವನು ಪುನಃ ಸಂತೆಬೀದಿಯ ಕಡೆ ಹೋದ. ಕೆಲಸವಿಲ್ಲದೆ ಸುಮ್ಮನೆ ನಿಂತುಕೊಂಡಿದ್ದ ಕೆಲವು ಕೂಲಿಗಾರರನ್ನು ಅಲ್ಲಿ ಕಂಡ. ನೀವೂ ನನ್ನ ದ್ರಾಕ್ಷಿತೋಟಕ್ಕೆ ಹೋಗಿರಿ; ನ್ಯಾಯವಾದ ಕೂಲಿಯನ್ನು ನಿಮಗೆ ಕೊಡುತ್ತೇನೆ,’ ಎಂದ. ಅವರೂ ಹೋದರು. 5ಬಳಿಕ ಸುಮಾರು ಹನ್ನೆರಡು ಗಂಟೆಗೊಮ್ಮೆ, ಮತ್ತೆ ಮೂರು ಗಂಟೆಗೊಮ್ಮೆ ಹೋಗಿ ಇನ್ನೂ ಕೆಲವರನ್ನು ಕೆಲಸಕ್ಕೆ ಕಳುಹಿಸಿದ. ಐದು ಗಂಟೆಗೆ ಹೋದಾಗಲೂ ಬೇರೆ ಕೆಲವರು ಅಲ್ಲಿ ನಿಂತಿರುವುದನ್ನು ಕಂಡು, ‘ದಿನವಿಡೀ ಕೆಲಸಮಾಡದೆ ಸುಮ್ಮನೆ ಇಲ್ಲಿ ನಿಂತಿದ್ದೀರಲ್ಲಾ, ಏಕೆ?’ ಎಂದು ಕೇಳಿದ. ಅದಕ್ಕೆ ಅವರು, ‘ನಮ್ಮನ್ನು ಯಾರೂ ಕೂಲಿಗೆ ಕರೆಯಲಿಲ್ಲ,’ ಎಂದರು. ‘ಹಾಗಾದರೆ ನೀವೂ ಕೂಡ ನನ್ನ ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡಿ,’ ಎಂದು ಹೇಳಿ ಅವರನ್ನೂ ಕಳುಹಿಸಿದ. “ಸಂಜೆಯಾಯಿತು, ತೋಟದ ಯಜಮಾನ ತನ್ನ ಮೇಸ್ತ್ರಿಗೆ, ‘ಕೂಲಿಯಾಳುಗಳನ್ನು ಕರೆದು, ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿಕೊಡು,’ ಎಂದ. ಅದರಂತೆ ಐದು ಗಂಟೆಗೆ ಗೊತ್ತುಮಾಡಿದವರು ಬಂದಾಗ ಒಬ್ಬೊಬ್ಬನಿಗೆ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು. ಮೊತ್ತಮೊದಲು ಗೊತ್ತುಮಾಡಿದವರು ತಮ್ಮ ಸರದಿ ಬಂದಾಗ, ತಮಗೆ ಹೆಚ್ಚು ಸಿಗುವುದೆಂದು ಭಾವಿಸಿದರು. ಆದರೆ ಅವರಿಗೂ ಒಂದೊಂದೇ ಬೆಳ್ಳಿನಾಣ್ಯ ದೊರಕಿತು. ಅದನ್ನು ತೆಗೆದುಕೊಂಡಾಗ ಅವರು ದಣಿಯ ವಿರುದ್ಧ ಗೊಣಗಲಾರಂಭಿಸಿದರು. ‘ಕಡೇಹೊತ್ತಿನಲ್ಲಿ ಬಂದ ಇವರು ಒಂದೇ ಒಂದು ಗಂಟೆ ಕೆಲಸಮಾಡಿದ್ದಾರೆ, ಬಿಸಿಲಲ್ಲಿ ಬೆಂದು, ದಿನವೆಲ್ಲಾ ದುಡಿದ ನಮ್ಮನ್ನು ಇವರಿಗೆ ಸರಿಸಮಮಾಡಿದ್ದೀರಲ್ಲಾ!’ ಎಂದರು. ಅದಕ್ಕೆ ಯಜಮಾನ ಅವರಲ್ಲಿ ಒಬ್ಬನಿಗೆ, ‘ಅಯ್ಯಾ, ನಿನಗೆ ನಾನು ಅನ್ಯಾಯಮಾಡಿಲ್ಲ. ದಿನಕ್ಕೊಂದು ಬೆಳ್ಳಿನಾಣ್ಯದಂತೆ ನೀನು ನನ್ನೊಡನೆ ಒಪ್ಪಂದಮಾಡಿಕೊಳ್ಳಲಿಲ್ಲವೆ? ನಿನ್ನ ಕೂಲಿ ಏನೋ ಅದನ್ನು ತೆಗೆದುಕೊಂಡು ಹೋಗು. ನಿನಗೆ ಕೊಟ್ಟಷ್ಟನ್ನು ಈ ಕಟ್ಟಕಡೆಯವನಿಗೂ ಕೊಡುವುದು ನನ್ನ ಇಷ್ಟ. ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ. ಹೀಗೆ, ಕಡೆಯವರು ಮೊದಲಿನವರಾಗುವರು; ಮೊದಲಿನವರು ಕಡೆಯವರಾಗುವರು,” ಎಂದು ಯೇಸು ಬೋಧಿಸಿದರು.
18.08.20 - "ಆದರೆ ಮೊದಲಿನವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು"
17.08.20 - "ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ"
16.08.20 - “ತಾಯಿ, ನಿನ್ನ ವಿಶ್ವಾಸ ಅಚಲವಾದುದು. ನಿನ್ನ ಕೋರಿಕೆ ನೆರವೇರಲಿ,”
15.08.20 - “ಎನ್ನ ಮನ ಮಾಡುತ್ತಿದೆ ಸರ್ವೇಶ್ವರನ ಸ್ತುತಿ ಉಲ್ಲಾಸಿಸುತ್ತಿದೆ ಮುಕ್ತಿದಾತ ದೇವನಲಿ"

