ಮೊದಲನೇ ವಾಚನ: ಯೆಶಾಯ 26: 1-6
ಪವಿತ್ರ ವಾಚನಗಳನ್ನು ಬ್ಲಾಗಿನ ಮೂಲಕ ತಲುಪಿಸುವ ಚಿಗುರು, ಸುಶ್ರಾವ್ಯ ಹಾಗೂ ಸಂಚಲನ ಬಳಗದ ಪ್ರಯತ್ನವಿದು. ಓದಿ ಧ್ಯಾನಿಸುವ ಭಾಗ್ಯ ನಮ್ಮದಾಗಲಿ
3.12.20 - "ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ದಿವಂತನನ್ನು ಹೋಲುತ್ತಾನೆ"
2.12.20
1.12.20 - “ನೀವು ಕಾಣುವುದನ್ನು ಕಾಣುವ ಕಣ್ಣುಗಳು ಭಾಗ್ಯವುಳ್ಳವು"
ಮೊದಲನೇ ವಾಚನ: ಯೆಶಾಯ 11: 1-10
ಜೆಸ್ಸೆಯನ ಬುಡದಿಂದ ಒಡೆಯುವು ದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು. ನೆಲಸುವುದಾತನ ಮೇಲೆ ಜ್ಞಾನವಿವೇಕ ದಾಯಕ ಆತ್ಮ; ಶಕ್ತಿ ಸಮಾಲೋಚನೆಯನ್ನೀಯುವ ಆತ್ಮ; ಸರ್ವೇಶ್ವರನ ಅರಿವನು, ಭಯವನು ಹುಟ್ಟಿಸುವ ಆತ್ಮ ಅಹುದು, ನೆಲಸುವುದಾತನ ಮೇಲೆ ಸರ್ವೇಶ್ವರನ ಆತ್ಮ ಸರ್ವೇಶ್ವರನ ಭಯಭಕ್ತಿ ಅವಗೆ ಪರಿಮಳದಂತೆ. ತೀರ್ಪಿಡನಾತ ಕಣ್ಣಿಗೆ ತೋಚಿದಂತೆ ನಿರ್ಣಯಿಸನಾತ ಕಿವಿಗೆ ಬಿದ್ದಂತೆ. ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ. ಸದ್ಧರ್ಮವೇ ಆತನಿಗೆ ನಡುಕಟ್ಟು ಪ್ರಾಮಾಣಿಕತೆಯೇ ಸೊಂಟಪಟ್ಟಿ. ಬಾಳುವುವು ತೋಳಕುರಿಮರಿಗಳು ಒಂದಿಗೆ ಮಲಗುವುವು ಮೇಕೆಚಿರತೆಗಳು ಜೊತೆಗೆ ಮೊಲೆಯುಣ್ಣುವುವು ಕರುಕೇಸರಿಗಳು ಒಟ್ಟಿಗೆ ನಡೆಸುವುದವುಗಳನು ಚಿಕ್ಕಮಗು ಮೇಯಿಸುವುದಕೆ. ಮೇಯುವುವು ಕರಡಿ, ಆಕಳುಗಳು ಒಟ್ಟಿಗೆ ಮಲಗುವುವು ಅವುಗಳ ಮರಿಗಳು ಜೊತೆಗೆ ಎತ್ತಿನ ಹುಲ್ಲು ಮೇವಾಗುವುದು ಸಿಂಹಕೆ. ಆಡುವುದು ಮೊಲೆಗೂಸು ನಾಗರ ಹುತ್ತದ ಮೇಲೆ ಕೈ ಹಾಕುವುದು ಮೊಲೆಬಿಟ್ಟ ಮಗು ಹಾವಿನಬಿಲದ ಒಳಗೆ. ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ. ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿ ನಿಲಯವು.
30.11.20
ಮೊದಲನೇ ವಾಚನ: ರೋಮನರಿಗೆ 10:9-18
29.11.20 - "ಆ ಕಾಲ ಯಾವಾಗ ಬರುವುದು ಎಂದು ನಿಮಗೆ ತಿಳಿಯದ್ದರಿಂದ ಎಚ್ಚರಿಕೆಯಿಂದಿರಿ, ಜಾಗರೂಕರಾಗಿರಿ"
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ಆ ಕಾಲ ಯಾವಾಗ ಬರುವುದು ಎಂದು ನಿಮಗೆ ತಿಳಿಯದ್ದರಿಂದ ಎಚ್ಚರಿಕೆಯಿಂದಿರಿ, ಜಾಗರೂಕರಾಗಿರಿ. ಪ್ರವಾಸಕ್ಕೆಂದು ಯಜಮಾನನೊಬ್ಬನು ಮನೆಬಿಟ್ಟು ಹೋಗುವಾಗ ತನ್ನ ಸೇವಕರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಜವಾಬ್ದಾರಿಕೆಯನ್ನು ವಹಿಸಿ, ದ್ವಾರಪಾಲಕನಿಗೆ ‘ನೀನು ಎಚ್ಚರವಾಗಿರಬೇಕು,’ ಎಂದು ಅಪ್ಪಣೆಕೊಡುವ ರೀತಿಯಲ್ಲಿ ನಾನು ನಿಮಗೆ ಹೇಳುತ್ತಿದ್ದೇನೆ. ಎಚ್ಚರವಾಗಿರಿ; ಯಜಮಾನನು ಸಂಜೆಯಲ್ಲೋ ಮಧ್ಯರಾತ್ರಿಯಲ್ಲೋ ಕೋಳಿ ಕೂಗುವಾಗಲೋ ಬೆಳಕು ಹರಿಯುವಾಗಲೋ, ಯಾವಾಗ ಬರುವನೆಂಬುದು ನಿಮಗೆ ತಿಳಿಯದು. ಅನಿರೀಕ್ಷಿತವಾಗಿ ಅವನು ಬಂದಾಗ ನೀವು ನಿದ್ರಿಸುತ್ತಿರುವುದನ್ನು ಕಂಡಾನು! ನಿಮಗೆ ಹೇಳುವುದನ್ನೇ ಸರ್ವರಿಗೂ ಹೇಳುತ್ತೇನೆ; ಎಚ್ಚರಿಕೆಯಿಂದಿರಿ!” ಎಂದರು.
28.11.20 - “ಮಿತಿ ಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ"
ಮೊದಲನೇ ವಾಚನ: ಪ್ರಕಟಣಾ ಗ್ರಂಥ 22:1-7
ಕೀರ್ತನೆ: 95:1-2, 3-5, 6-7
ಶ್ಲೋಕ: ಪ್ರಭು ಯೇಸುವೇ, ಬನ್ನಿ
ಶುಭಸಂದೇಶ: ಲೂಕ 21:34-36
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ಮಿತಿ ಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ! ಜಗತ್ತಿನ ಎಲ್ಲಾ ನಿವಾಸಿಗಳೂ ಅದಕ್ಕೆ ಸಿದ್ಧರಾಗಿರಬೇಕು. ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.
27.11.20 - "ಭೂಮ್ಯಾಕಾಶಗಳು ಗತಿಸಿಹೋಗುತ್ತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ"
ಮೊದಲನೇ ವಾಚನ: ಪ್ರಕಟಣಾ ಗ್ರಂಥ 20:1-4, 11--21:2
ಕೀರ್ತನೆ: 84:3, 4, 5-6, 8
ಶ್ಲೋಕ: ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ
ಶುಭಸಂದೇಶ: ಲೂಕ 21:29-33
26.11.20 - "ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ವಿಚಿತ್ರ ಸೂಚನೆಗಳು ಕಾಣಿಸಿಕೊಳ್ಳುವುವು"
ಮೊದಲನೇ ವಾಚನ: ಪ್ರಕಟಣಾ ಗ್ರಂಥ 18:1-2, 21-23; 19:1-3, 9
ಕೀರ್ತನೆ: 100:2, 3, 4, 5
ಶ್ಲೋಕ: ಯಜ್ಞದ ಕುರಿಮರಿಯ ವಿವಾಹದ ಔತಣಕ್ಕೆ ಆಹ್ವಾನಿತರು ಭಾಗ್ಯವಂತರು
ಶುಭಸಂದೇಶ: ಲೂಕ 21:20-28
25.11.20 - "ಎಲ್ಲರೂ ನಿಮ್ಮನ್ನು ದ್ವೇಷಿಸುವರು. ಆದರೂ ನಿಮ್ಮ ತಲೆ ಕೂದಲೊಂದೂ ನಾಶವಾಗುವುದಿಲ್ಲ"
ಮೊದಲನೇ ವಾಚನ: ಪ್ರಕಟಣಾ ಗ್ರಂಥ 15:1-4
ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆ, ಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು.
ಇದಲ್ಲದೆ, ಗಾಜಿನ ಸಮುದ್ರದಂತಿದ್ದ ಒಂದು ವಸ್ತು ಕಾಣಿಸಿತು; ಅದು ಬೆಂಕಿಯಿಂದ ಕೂಡಿತ್ತು. ಮೃಗದ ವಿರುದ್ಧ, ಅದರ ವಿಗ್ರಹದ ವಿರುದ್ಧ ಹಾಗೂ ಅದರ ಹೆಸರನ್ನು ಸೂಚಿಸುವ ಸಂಖ್ಯೆಯ ವಿರುದ್ಧ ಜಯಗಳಿಸಿದವರನ್ನು ಸಹ ಕಂಡೆ. ಅವರು ಗಾಜಿನ ಸಮುದ್ರದ ಬಳಿ ನಿಂತಿದ್ದರು; ಕೈಗಳಲ್ಲಿ ದೇವರಿತ್ತ ಕಿನ್ನರಿಗಳಿದ್ದವು. ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ :
ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ !
ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ !
ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ
ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.
ಹೇ ಪ್ರಭೂ, ನಿನಗಂಜದವರಾರು?
ನಿನ್ನ ನಾಮಸ್ತುತಿ ಮಾಡದವರಾರು?
ಪರಮಪವಿತ್ರ ನೀನಲ್ಲದಿನ್ಯಾರು
ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು
ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”
ಕೀರ್ತನೆ: 98:1, 2-3, 7-8, 9
ಶುಭಸಂದೇಶ: ಲೂಕ 21:12-19
09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ
ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: ಯೆಶಾಯ 58:1-9 ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 18:9-18 ಒಂದು ರಾತ್ರಿ ಪೌಲನಿಗೆ ಪ್ರಭು ದರ್ಶನ ಇತ್ತು, “ಭಯಪಡಬೇಡ, ಬೋಧನೆ ಮಾಡುವುದನ್ನು ಮುಂದುವರಿಸು, ನಾನು ನಿನ್ನೊಡನೆ ಇದ್...












