20.11.20 - “ಯಾವನು ನನ್ನ ಹೆಸರಿನಲ್ಲಿ ಈ ಮಗುವನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನೇ ಸ್ವೀಕರಿಸುತ್ತಾನೆ;"

ಮೊದಲನೇ ವಾಚನ: ಪ್ರಕಟಣಾ ಗ್ರಂಥ 10:8-11



ಸ್ವರ್ಗದಿಂದ ನನಗೆ ಕೇಳಿಸಿದ ಧ್ವನಿ ಮತ್ತೊಮ್ಮೆ ನನ್ನೊಡನೆ ಮಾತನಾಡಿ, “ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ಕಾಲಿಟ್ಟು ನಿಂತಿರುವ ದೇವದೂತನ ಬಳಿಗೆ ಹೋಗು. ಆತನ ಕೈಯಲ್ಲಿರುವ ತೆರೆದ ಸುರುಳಿಯನ್ನು ತೆಗೆದುಕೋ,” ಎಂದು ತಿಳಿಸಿತು. ನಾನು ದೇವದೂತನ ಬಳಿಗೆ ಹೋಗಿ, “ ಚಿಕ್ಕ ಸುರುಳಿಯನ್ನು ನನಗೆ ಕೊಡು,” ಎಂದು ಕೇಳಿದೆ. ಅವನುತೆಗೆದುಕೋ, ಇದನ್ನು ತಿನ್ನು. ಇದು ನಿನ್ನ ಹೊಟ್ಟೆಯಲ್ಲಿ ಕಹಿಯಾಗಿಯೂ ನಿನ್ನ ಬಾಯಲ್ಲಿ ಜೇನುತುಪ್ಪದಂತೆ ಸಿಹಿಯಾಗಿಯೂ ಇರುತ್ತದೆ,” ಎಂದನುಅಂತೆಯೇ, ನಾನು ಚಿಕ್ಕ ಸುರುಳಿಯನ್ನು ದೇವದೂತನ ಕೈಯಿಂದ ತೆಗೆದುಕೊಂಡು ತಿಂದೆ. ಅದು ನನ್ನ ಬಾಯಲ್ಲಿ ಜೇನುತುಪ್ಪದಂತೆ ಸಿಹಿಯಾಗಿತ್ತು. ಆದರೆ ಅದನ್ನು ತಿಂದಮೇಲೆ ನನ್ನ ಹೊಟ್ಟೆಯೆಲ್ಲಾ ಕಹಿಯಾಯಿತು. ಅನಂತರ, ದೇವದೂತನು ನನಗೆ, “ನೀನು ಇನ್ನೂ ಅನೇಕ ಜನರ, ಜನಾಂಗಗಳ, ಭಾಷೆಗಳನ್ನಾಡುವವರ ಹಾಗು ಅರಸರಾದವರ ವಿರುದ್ಧ ಪ್ರವಾದನೆಯನ್ನು ಸಾರಬೇಕು,” ಎಂದು ಆಜ್ಞಾಪಿಸಿದನು.

ಕೀರ್ತನೆ: 119:14, 24, 72, 103, 111, 131

ಶ್ಲೋಕ: ನಿನ್ನ ನುಡಿ ಎನಿತೋ ರುಚಿ ನನ್ನ ನಾಲಿಗೆಗೆ 

ಶುಭಸಂದೇಶ: ಲೂಕ 19:45-48



ಯೇಸುಸ್ವಾಮಿ ಮಹಾದೇವಾಲಯವನ್ನು ಪ್ರವೇಶಿಸಿದರು. ಅಲ್ಲಿ ಮಾರಾಟ ಮಾಡುತ್ತಿದ್ದವರನ್ನು ಹೊರಗಟ್ಟುತ್ತಾ, “ ‘ಪ್ರಾರ್ಥನಾಲಯವೀ ನನ್ನ ಆಲಯ!’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ; ನೀವಾದರೋ ಇದನ್ನು ಕಳ್ಳಕಾಕರ ಗುಹೆಯನ್ನಾಗಿ ಮಾರ್ಪಡಿಸಿದ್ದೀರಿ,” ಎಂದರು. ಪ್ರತಿನಿತ್ಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದರು. ಇತ್ತ ಮುಖ್ಯ ಯಾಜಕರೂ ಧರ್ಮಶಾಸ್ತ್ರಿಗಳೂ ಪ್ರಜಾಪ್ರಮುಖರೂ ಅವರನ್ನು ಕೊಲೆಮಾಡಲು ಹವಣಿಸುತ್ತಿದ್ದರು. ಆದರೆ ಅವರಿಂದ ಏನೂ ಮಾಡಲಾಗಲಿಲ್ಲ. ಏಕೆಂದರೆ, ಜನರೆಲ್ಲರೂ ಯೇಸುವಿನ ಬೋಧನೆಗೆ ಮಾರುಹೋಗಿದ್ದರು. ಅವರ ಬಾಯಿಂದ ಬಂದ ಒಂದೊಂದು ಮಾತನ್ನೂ ಕೇಳಲು ಆತುರರಾಗಿದ್ದರು. 

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...