28.11.20 - “ಮಿತಿ ಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ"

ಮೊದಲನೇ ವಾಚನ: ಪ್ರಕಟಣಾ ಗ್ರಂಥ 22:1-7


ಬಳಿಕ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ, ನಗರದ ಹೆದ್ದಾರಿಯ ಮಧ್ಯದಲ್ಲಿ ಹರಿಯುತ್ತಿತ್ತು. ನದಿಯ ಎರಡು ದಡಗಳಲ್ಲೂ ಜೀವವೃಕ್ಷವಿತ್ತು. ಅದು ವರ್ಷದಲ್ಲಿ ಹನ್ನೆರಡು ಸಾರಿ ಫಲಕೊಡುವಂಥದ್ದು; ಪ್ರತೀ ತಿಂಗಳೂ ಫಸಲನ್ನೀಯುವಂಥದ್ದು. ವೃಕ್ಷದ ಎಲೆಗಳನ್ನು ರಾಷ್ಟ್ರಗಳಿಗೆ ಸಿದ್ದೌಷಧಿಯನ್ನಾಗಿ ಉಪಯೋಗಿಸಲಾಗುವುದು. ಶಾಪಗ್ರಸ್ತವಾದುದು ಯಾವುದೂ ನಗರದಲ್ಲಿ ಇರದುದೇವರ ಮತ್ತು ಯಜ್ಞದ ಕುರಿಮರಿಯ ಸಿಂಹಾಸನವು ಅಲ್ಲಿರುವುದು. ಸದಾ ಯಾಜಕ ಸೇವೆ ಸಲ್ಲಿಸುವ ಅವರ ದಾಸರಿಗೆ ಅದರ ಮುಖ ದರ್ಶನವಾಗುವುದು. ಹೆಸರು ದಾಸರ ಹಣೆಗಳ ಮೇಲೆ ಲಿಖಿತವಾಗಿರುವುದು. ರಾತ್ರಿ ಎಂಬುದೇ ಅಲ್ಲಿ ಇರದು; ದೀಪದ ಇಲ್ಲವೇ ಸೂರ್ಯನ ಬೆಳಕಿನ ಅವಶ್ಯಕತೆಯೂ ಇರದು; ದೇವರಾದ ಪ್ರಭುವೇ ಅವರಿಗೆ ಬೆಳಕಾಗಿರುವರು. ಯುಗಯುಗಾಂತರಕ್ಕೂ ಅವರು ರಾಜ್ಯವಾಳುವರುಅನಂತರ ದೇವದೂತನು ನನಗೆ, “ ಮಾತುಗಳು ಸತ್ಯವಾದುವು, ನಂಬಲರ್ಹವಾದುವು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನೀಯುವ ದೇವರಾದ ಪ್ರಭುವೇ ಬೇಗನೆ ಸಂಭವಿಸಲಿರುವವುಗಳನ್ನು ತಮ್ಮ ದಾಸರಿಗೆ ತಿಳಿಸಲು ತಮ್ಮ ದೂತನನ್ನೇ ಕಳಿಸಿದ್ದಾರೆಯೇಸುಸ್ವಾಮಿ ನುಡಿಯುವುದನ್ನು ಕೇಳು : ಇಗೋ ನಾನು ಬೇಗನೆ ಬರುತ್ತೇನೆ. ಪುಸ್ತಕದಲ್ಲಿ ಬರೆದಿರುವ ಪ್ರವಾದನಾವಾಕ್ಯಗಳನ್ನು ಕೈಗೊಂಡು ನಡೆಯುವವನು ಧನ್ಯನು!ಎಂದು ಹೇಳಿದನು.

ಕೀರ್ತನೆ: 95:1-2, 3-5, 6-7

ಶ್ಲೋಕ: ಪ್ರಭು ಯೇಸುವೇ, ಬನ್ನಿ  

ಶುಭಸಂದೇಶ: ಲೂಕ 21:34-36 

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ಮಿತಿ ಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!  ಜಗತ್ತಿನ ಎಲ್ಲಾ ನಿವಾಸಿಗಳೂ ಅದಕ್ಕೆ ಸಿದ್ಧರಾಗಿರಬೇಕು. ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.

No comments:

Post a Comment

12.04.2026 - ನನ್ನ ಪ್ರಭುವೇ, ನನ್ನ ದೇವರೇ

  ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 2:42-47 ಭಕ್ತಾದಿಗಳು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮ...