ಮೊದಲನೇ ವಾಚನ: 1 ಯೊವಾನ್ನ 4:19-5:4
ದೇವರು ನಮ್ಮನ್ನು ಮೊದಲು ಪ್ರೀತಿಸಿದ್ದರಿಂದಲೇ ನಾವು ಪ್ರೀತಿಸುತ್ತೇವೆ. ತಾನು ದೇವರನ್ನು ಪ್ರೀತಿಸುತ್ತೇನೆಂದು ಒಬ್ಬನು ಹೇಳುತ್ತಾ ತನ್ನ ಸಹೋದರನನ್ನು ದ್ವೇಷಿಸಿದರೆ, ಅವನು ಸುಳ್ಳುಗಾರನಾಗುತ್ತಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಿಯಾನು? ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬುದು ಕ್ರಿಸ್ತಯೇಸು ನಮಗೆ ಮಾಡಿರುವ ಆಜ್ಞೆ. ಯೇಸುವೇ ‘ಕ್ರಿಸ್ತ’ ಎಂದು ವಿಶ್ವಾಸಿಸುವ ಪ್ರತಿಯೊಬ್ಬನೂ ದೇವರ ಮಗು. ತಂದೆಯನ್ನು ಪ್ರೀತಿಸುವವನು ಆತನ ಮಗುವನ್ನೂ ಪ್ರೀತಿಸುತ್ತಾನೆ. ದೇವರನ್ನು ಪ್ರೀತಿಸಿ, ಅವರ ಆಜ್ಞೆಗಳನ್ನು ಪಾಲಿಸುವುದರಿಂದ ನಾವು ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದು ನಿಶ್ಚಯ ಆಗುತ್ತದೆ. ದೇವರನ್ನು ಪ್ರೀತಿಸುವುದು ಎಂದರೆ ಅವರು ಕೊಟ್ಟ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ. ಅವರ ಆಜ್ಞೆಗಳು ನಮಗೆ ಹೊರೆಯೇನೂ ಅಲ್ಲ. ದೇವರಿಂದ ಜನಿಸಿದ ಪ್ರತಿ ಒಬ್ಬನೂ ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದು ನಮ್ಮ ವಿಶ್ವಾಸವೇ.
ಕೀರ್ತನೆ: 72:1-2, 14-15, 17 v.11
ಶ್ಲೋಕ: ರಾಜರುಗಳು ಸಾಷ್ಟಾಂಗವೆರಗಲಿ ಸರ್ವೇಶ್ವರಸ್ವಾಮಿಗೆ!
ಶುಭಸ೦ದೇಶ: ಲೂಕ 4:14-22
ಆ ಕಾಲದಲ್ಲಿ ಯೇಸುಸ್ವಾಮಿ ಪವಿತ್ರಾತ್ಮ ಶಕ್ತಿಯಿಂದ ಕೂಡಿ ಗಲಿಲೇಯಕ್ಕೆ ಮರಳಿಬಂದರು. ಅವರ ವಿಷಯ ಸುತ್ತಮುತ್ತೆಲ್ಲಾ ಹರಡಿತು. ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಅವರು ಬೋಧಿಸುತ್ತಾ ಬಂದರು. ಎಲ್ಲರೂ ಅವರನ್ನು ಹೊಗಳುವವರೇ! ಯೇಸುಸ್ವಾಮಿ ತಾವು ಬೆಳೆದ ಊರಾದ ನಜರೇತಿಗೆ ಬಂದರು. ವಾಡಿಕೆಯ ಪ್ರಕಾರ ಸಬ್ಬತ್‍ದಿನ ಪ್ರಾರ್ಥನಾಮಂದಿರಕ್ಕೆ ಹೋದರು. ಅಲ್ಲಿ ಪವಿತ್ರ ಗ್ರಂಥವನ್ನು ಓದುವುದಕ್ಕೆ ಅವರು ಎದ್ದು ನಿಂತಾಗ, ಪ್ರವಾದಿ ಯೆಶಾಯನ ಗ್ರಂಥದ ಸುರುಳಿಯನ್ನು ಅವರ ಕೈಗೆ ಕೊಟ್ಟರು. ಅದನ್ನು ಬಿಚ್ಚಿದಾಗ ಈ ಕೆಳಗಿನ ವಚನಗಳು ಯೇಸುವಿನ ಕಣ್ಣಿಗೆ ಬಿದ್ದವು: “ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ ದೇವರು ತಮ್ಮ ಜನತೆಯನ್ನು ಉದ್ಧರಿಸುವ ಕಾಲ ಬಂತೆಂದು ಸಾರಲೂ ಅವರು ನನ್ನನ್ನು ಕಳುಹಿಸಿದ್ದಾರೆ.” ಈ ವಾಕ್ಯವನ್ನು ಓದಿ, ಸುರುಳಿಯನ್ನು ಸುತ್ತಿ, ಪ್ರಾರ್ಥನಾಮಂದಿರದ ಸೇವಕನ ಕೈಗಿತ್ತು, ಯೇಸು ಕುಳಿತುಕೊಂಡರು. ಅಲ್ಲಿದ್ದ ಎಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು. ಆಗ ಯೇಸು, “ನೀವು ಈ ಪವಿತ್ರ ವಾಕ್ಯವನ್ನು ಕೇಳುತ್ತಿದ್ದ ಹಾಗೆಯೇ ಅದು ಇಂದು ನೆರವೇರಿತು,” ಎಂದು ವಿವರಿಸಲಾರಂಭಿಸಿದರು. ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. “ಇವನು ಜೋಸೆಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.
Amen.....
ReplyDeleteAmen.....
ReplyDeleteDevarige Stuthi Sallally
ReplyDelete