01.03.21 - "ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು,”

 ಮೊದಲನೆಯ ವಾಚನ : ದಾನಿಯೇಲ 9: 4-10

“ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ವಾಗ್ದಾನಗಳನ್ನು ಪ್ರೀತಿಯಿಂದ ನೆರವೇರಿಸುತ್ತೀರಿ.

“ನಾವು ಪಾಪಾಪರಾಧಗಳನ್ನು ಮಾಡಿ, ಕೆಟ್ಟವರಾಗಿ ನಡೆದಿದ್ದೇವೆ; ನಿಮಗೆ ವಿರುದ್ಧ ತಿರುಗಿಬಿದ್ದು, ನಿಮ್ಮ ಆಜ್ಞಾವಿಧಿಗಳನ್ನು ತೊರೆದುಬಿಟ್ಟಿದ್ದೇವೆ. ಅರಸರಿಗೆ, ಒಡೆಯರಿಗೆ, ಹಿರಿಯರಿಗೆ ಹಾಗು ಜನಸಾಮಾನ್ಯರಿಗೆ ನಿಮ್ಮ ದಾಸರಾದ ಪ್ರವಾದಿಗಳು ನಿಮ್ಮ ಹೆಸರಿನಲ್ಲಿ ನುಡಿದ ಮಾತುಗಳಿಗೆ ನಾವು ಕಿವಿಗೊಡಲೇ ಇಲ್ಲ. ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಾವೋ ಲಜ್ಜೆಗೆಟ್ಟವರು. ಹೌದು, ಯೆಹೂದ್ಯರು ಹಾಗು ಜೆರುಸಲೇಮಿನ ನಿವಾಸಿಗಳು ಈಗಾಗಲೆ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ತಳ್ಳಲ್ಪಟ್ಟಿದ್ದಾರೆ. ದೂರದ ದೇಶಗಳಿಗೂ ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಎಲ್ಲ ಇಸ್ರಯೇಲರು ನಾಚಿಕೆಗೆ ಈಡಾಗಿದ್ದಾರೆ. ಸ್ವಾಮೀ, ನಿಮಗೆ ವಿರುದ್ಧ ಪಾಪಮಾಡಿದ್ದರಿಂದ ನಾವೂ ನಮ್ಮ ಅರಸರೂ ಒಡೆಯರೂ ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ. ನಮ್ಮ ದೇವರಾದ ಸರ್ವೇಶ್ವರ, ನಮ್ಮನ್ನು ಕರುಣಿಸುವವರೂ ಕ್ಷಮಿಸುವವರೂ ಆಗಿದ್ದಾರೆ. ಆದರೆ ನಾವು ಅವರಿಗೆ ವಿರುದ್ಧ ತಿರುಗಿಬಿದ್ದೆವು. ನಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳಲಿಲ್ಲ. ಅವರ ದಾಸರಾದ ಪ್ರವಾದಿಗಳ ಮುಖಾಂತರ ನಮಗೆ ಗೊತ್ತುಮಾಡಿದ ಸನ್ಮಾರ್ಗದಲ್ಲಿ ನಾವು ನಡೆಯಲಿಲ್ಲ.

ಶುಭಸಂದೇಶ : ಲೂಕ 6: 36-38 


ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ. “ನೀವು ಇತರರ ಬಗ್ಗೆ ತೀರ್ಪು ಕೊಡಬೇಡಿ. ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ; ಪರರನ್ನು ದಂಡನೆಗೆ ಗುರಿ ಮಾಡಬೇಡಿ, ದೇವರು ನಿಮ್ಮನ್ನೂ ದಂಡನೆಗೆ ಗುರಿ ಮಾಡುವುದಿಲ್ಲ. ಪರರನ್ನು ಕ್ಷಮಿಸಿರಿ, ದೇವರು ನಿಮ್ಮನ್ನೂ ಕ್ಷಮಿಸುವರು; ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು; ಅಳತೆಯಲ್ಲಿ ತುಂಬಿ, ಕುಲುಕಿ, ಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು,” ಎಂದರು.


ಮನಸ್ಸಿಗೊಂದಿಷ್ಟು : " ನೀವು ಕೊಟ್ಟ ಅಳತೆಯಲ್ಲೇ ನಿಮಗೂ ಕೊಡಲಾಗುತ್ತದೆ" ಎನ್ನುತ್ತಾರೆ ಯೇಸು . ಕ್ರೈಸ್ತರು  ಅಥವಾ ಕ್ರಿಸ್ತನ ಹಿಂಬಾಲಕರು  ಪಾಲಿಸಬೇಕಾದ ಮೌಲ್ಯಗಳು ಈ ಲೋಕದ ಅಳತೆಗೋಲಿನಲ್ಲಿ ಅಲ್ಲ , ಆದರೆ ದೇವರ ಅಳತೆಯಲ್ಲಿ. ನಮ್ಮ ಪ್ರೀತಿ, ಸಹನೆ, ಕ್ಷಮೆ ಎಲ್ಲವೂ ಮಾನವ ಅಳತೆಯನ್ನು ಮೀರಿ ದೈವತ್ವದ ಮಟ್ಟದಲ್ಲಿ ಇರಬೇಕೆನ್ನುವುದು ಕ್ರಿಸ್ತ ನಮ್ಮಿಂದ ಬಯಸುತ್ತಿದ್ದಾರೆ. "ಸಾಧ್ಯವೇ?" ಎನ್ನುವುದು ನಮ್ಮ ಪ್ರಶ್ನೆಯಾದರೆ, "ಎಲ್ಲವೂ  ಸಾಧ್ಯ" ಎನ್ನುವುದು ದೈವ ಪ್ರೀತಿಯನ್ನು ಅನುಭವಿಸಿರುವ ನಾವೇ ಕಂಡುಕೊಳ್ಳಬಹುದಾದ ಉತ್ತರ.    

ಆ ಅಳತೆಯ ಎತ್ತರಕ್ಕಾಗಿ ಹಾತೊರೆಯೋಣ.

28.02.21 - “ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ಈತನ ಮಾತಿಗೆ ಕಿವಿಗೊಡಿ,”

ಮೊದಲನೇ ವಾಚನ: ಆದಿಕಾ೦ಡ: 22: 1-2, 9-13, 15-18


ದೇವರು ಹೇಳಿದ ಸ್ಥಳಕ್ಕೆ ಬಂದು ಸೇರಿದಾಗ ಅಬ್ರಹಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿದ. ಕಟ್ಟಿಗೆಯನ್ನು ಅದರ ಮೇಲೆ ಒಟ್ಟಿ, ಮಗ ಇಸಾಕನ ಕೈಕಾಲುಗಳನ್ನು ಬಿಗಿದು, ಕಟ್ಟಿಗೆಗಳ ಮೇಲೆ ಅವನನ್ನು ಕೆಡವಿದ. ಬಳಿಕ ಮಗನನ್ನು ವಧಿಸಲು ಕೈಚಾಚಿ ಕತ್ತಿಯನ್ನು ಎತ್ತಿದ. ಆದರೆ ಸರ್ವೇಶ್ವರನ ದೂತನು ಆಕಾಶದಿಂದ, "ಅಬ್ರಹಾಮನೇ, ಹೇ ಅಬ್ರಹಾಮನೇ" ಎಂದು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ ಸಿದ್ಧನಿದ್ದೇನೆ” ಎಂದ. ದೂತನು ಅವನಿಗೆ, "ಹುಡುಗನ ಮೇಲೆ ಕೈಯೆತ್ತಬೇಡ; ಅವನಿಗೆ ಯಾವ ಹಾನಿಯನ್ನೂ ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿಂತೆಗೆಯಲಿಲ್ಲ; ಎಂತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ನನಗೆ ಚೆನ್ನಾಗಿ ಗೊತ್ತಾಯಿತು,” ಎಂದು ಹೇಳಿದನು.

 ಅಬ್ರಹಾಮನು ಕಣ್ಣೆತ್ತಿ ನೋಡಿದ. ತನ್ನ ಹಿಂದುಗಡೆ ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿಕೊಂಡಿತ್ತು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಅದನ್ನು ದಹನಬಲಿಯನ್ನಾಗಿ ಅರ್ಪಿಸಿದ.  “ಬೆಟ್ಟದ ಮೇಲೆ ಸರ್ವೇಶ್ವರ ಸ್ವಾಮಿಯೇ ಒದಗಿಸುತ್ತಾರೆ” ಎಂಬ ಹೇಳಿಕೆ ಇಂದಿಗೂ ರೂಢಿಯಲ್ಲಿದೆ. ಸರ್ವೇಶ್ವರ ಸ್ವಾಮಿಯ ದೂತನು ಆಕಾಶದಿಂದ ಮತ್ತೊಮ್ಮೆ ಅಬ್ರಹಾಮನನ್ನು ಕರೆದು, “ಸರ್ವೇಶ್ವರನ ವಾಕ್ಯವನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಬಲಿಕೊಡಲು ಹಿಂತೆಗೆಯದೆ ಹೋದುದರಿಂದ ನಾನು ನಿನ್ನನ್ನು ತಪ್ಪದೆ ಆಶೀರ್ವದಿಸುತ್ತೇನೆ; ನಿನ್ನ ಸಂತತಿಯನ್ನು ಹೆಚ್ಚಿಸಿಯೇ ಹೆಚ್ಚಿಸುತ್ತೇನೆ; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದ ಮರಳಿನಂತೆಯೂ ಅಸಂಖ್ಯವಾಗಿ ಮಾಡುತ್ತೇನೆ. ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಳ್ಳುವರು. ನೀನು ನನ್ನ ಮಾತನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ,” ಎಂದನು.


ಕೀರ್ತನೆ: 1116:10, 15, 16-19 
ಶ್ಲೋಕ: ನಡೆವನು ನಾನು ಪ್ರಭುವಿನ ಕಣ್ಣಮುಂದೆ, ಅಂತೆಯೇ ಬಾಳುವೆ ಜೀವಲೋಕದೊಳಿದ್ದೇ. 

ಎರಡನೆಯ ವಾಚನ: ರೋಮನರಿಗೆ: 8:31-34


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು? ದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು? ದೇವರೇ ಆರಿಸಿಕೊಂಡವರ ಮೇಲೆ ಯಾರು ತಾನೇ ದೋಷಾರೋಪಣೆ ಮಾಡಬಲ್ಲರು? ದೇವರೇ ಅವರನ್ನು ನಿರ್ದೋಷಿಗಳೆಂದು ನಿರ್ಣಯಿಸಿರುವಾಗ ಅವರನ್ನು ದೋಷಿಗಳೆಂದು ನಿರ್ಣಯಿಸುವವರು ಯಾರು? ಪ್ರಾಣತ್ಯಾಗ ಮಾಡಿದ್ದಲ್ಲದೆ ಪುನರುತ್ಥಾನ ಹೊಂದಿದ ಕ್ರಿಸ್ತಯೇಸುವೇ ದೇವರ ಬಲಪಾರ್ಶ್ವದಲ್ಲಿದ್ದುಕೊಂಡು ನಮ್ಮ ಪರವಾಗಿ ಬಿನ್ನಯಿಸುತ್ತಿದ್ದಾರೆ

ಶುಭಸ೦ದೇಶ: ಮಾರ್ಕ: 9: 2-10

ಆರು ದಿನಗಳ ಬಳಿಕ ಪೇತ್ರ, ಯಕೋಬ ಮತ್ತು ಯೊವಾನ್ನ ಇವರನ್ನು ಮಾತ್ರ ತಮ್ಮೊಡನೆ ಕರೆದುಕೊಂಡು ಯೇಸುಸ್ವಾಮಿ ಎತ್ತರವಾದ ಒಂದು ಬೆಟ್ಟಕ್ಕೆ ಹೋದರು. ಅಲ್ಲಿ ಆ ಶಿಷ್ಯರ ಕಣ್ಣೆದುರಿಗೇ ಯೇಸು ರೂಪಾಂತರ ಹೊಂದಿದರು. ಆಗ ಅವರ ಉಡುಪು ಅತ್ಯಂತ ಶುಭ್ರವಾಗಿ ಹೊಳೆಯಿತು. ಜಗದ ಯಾವ ಅಗಸನಿಂದಲೂ ಮಡಿ ಮಾಡಲಾಗದಷ್ಟು ಅದು ಬಿಳುಪಾಯಿತು. ಮೋಶೆ ಮತ್ತು ಎಲೀಯ ಪ್ರತ್ಯಕ್ಷರಾಗಿ ಯೇಸುವಿನೊಡನೆ ಮಾತನಾಡುತ್ತಿದ್ದುದು ಶಿಷ್ಯರಿಗೆ ಕಾಣಿಸಿತು. ಆಗ ಪೇತ್ರನು ಯೇಸುವಿಗೆ, “ಗುರುದೇವಾ, ನಾವು ಇಲ್ಲೇ ಇರುವುದು ಒಳ್ಳೆಯದು; ಅಪ್ಪಣೆಯಾಗಲಿ, ಮೂರು ಗುಡಾರಗಳನ್ನು ಕಟ್ಟುವೆವು; ತಮಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು,” ಎಂದನು. ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂದೇ ತಿಳಿಯಲಿಲ್ಲ. ಶಿಷ್ಯರು ಅಷ್ಟು ಭಯಭ್ರಾಂತ ಆಗಿದ್ದರು! ಅಷ್ಟರಲ್ಲಿ ಮೇಘವೊಂದು ಅವರನ್ನು ಆವರಿಸಿತು. ಅದರೊಳಗಿಂದ, “ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ಈತನ ಮಾತಿಗೆ ಕಿವಿಗೊಡಿ,” ಎಂಬ ವಾಣಿ ಕೇಳಿಸಿತು. ತಕ್ಷಣ, ಶಿಷ್ಯರು ಸುತ್ತಲೂ ನೋಡಲು ತಮ್ಮೊಂದಿಗೆ ಯೇಸುವೊಬ್ಬರನ್ನೇ ಹೊರತು ಬೇರೆ ಯಾರನ್ನೂ ಕಾಣಲಿಲ್ಲ.

ಅನಂತರ ಯೇಸು ಮತ್ತು ಅವರ ಶಿಷ್ಯರು ಬೆಟ್ಟದಿಂದ ಇಳಿದುಬರುವಾಗ, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರು. ಅಂತೆಯೇ ಶಿಷ್ಯರು ಇದನ್ನು ಯಾರಿಗೂ ಹೇಳಲಿಲ್ಲ; ಆದರೂ ‘ಸತ್ತು ಪುನರುತ್ಥಾನ ಹೊಂದುವುದು’ ಎಂದರೆ ಏನು? ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಂಡರು.

ಮನಸ್ಸಿಗೊಂದಿಷ್ಟು : ಯೇಸು ಜನರನ್ನು ಮಂತ್ರ ಮುಗ್ದರನ್ನಾಗಿ ಮಾಡಿಕೊಂಡು ತಮ್ಮನ್ನು ಹಿಂಬಾಲಿಸುವಂತೆ ಎಂದಿಗೂ ಮಾಡಿಕೊಳ್ಳಲಿಲ್ಲ. ಆದರೆ ಇಂದಿನ ಘಟನೆಯಲ್ಲಿ ಅವರ ದಿವ್ಯ ದರ್ಶನವನ್ನು ಕಂಡು  ಆಪ್ತ ಶಿಷ್ಯರು ಬೆರಗಾಗುತ್ತಾರೆ.   

“ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ಈತನ ಮಾತಿಗೆ ಕಿವಿಗೊಡಿ" ಎಂಬುದೇ ರೂಪಾಂತರ ಘಟನೆಯ ನಿಜ ಸಂದೇಶ ಎನ್ನುತ್ತಾರೆ ಪೋಪ್ ಫ್ರಾನ್ಸಿಸ್.  ನಾವು ಸದಾ ಯೇಸುವಿನ ಮಾತಿಗೆ ಕಿವಿಯಾಗಿರಬೇಕು.  ಅಂತೆಯೇ  ಆ ರೂಪಾಂತರದ ವೈಭವದಲ್ಲೇ ಉಳಿಯದೆ ಮುಂದಿನ ಶಿಲುಬೆಯ ಮರಣಕ್ಕೆ ಯೇಸು ಸಿದ್ದರಾಗುತ್ತಾರೆ. ಅದೇ ವಾಸ್ತವ. 

ಶಿಲುಬೆ ನಮ್ಮ ವಾಸ್ತವ ಕೂಡ. ನಂತರದ ಪುನರುತ್ಥಾನವೂ. 

16.10.2026 - IIಶುಕ್ರವಾರ IIನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿ

  ಮೊದಲನೆಯ ವಾಚನ: ರೋಮನರಿಗೆ 4:1-8 ಸಹೋದರರೇ, ವಂಶಾನುಕ್ರಮವಾಗಿ ನಮ್ಮ ಮೂಲಪಿತನಾದ ಅಬ್ರಹಾಮನ ಅನುಭವವನ್ನು ಕುರಿತು ಏನು ಹೇಳೋಣ? ಆತನು ತನ್ನ ಸತ್ಕಾರ್ಯಗಳಿಂದ ದೇವರೊಡನೆ...