mo ಮೊದಲನೆಯ ವಾಚನ : ಯೆಶಾಯ 55:10-11
ಮಳೆಯೂ ಹಿಮವೂ ಆಕಾಶಮಂಡಲದಿಂದಿಳಿದು ಬಂದು ತೋಯಿಸಿ, ಹಸಿರುಗೊಳಿಸಿ, ಹುಲುಸು ಮಾಡುತ್ತವೆ ಭೂಮಿಯನು. ಬಿತ್ತುವವನಿಗೆ ಬೀಜ, ಉಣ್ಣುವವನಿಗೆ ಆಹಾರ ಒದಗಿಸದೆ, ಹಿಂದಿರುಗಿ ಬರುವುದಿಲ್ಲ ಅವು ಸುಮ್ಮನೆ ಬಂದಲ್ಲಿಗೆ. ಅಂತೆಯೇ, ನನ್ನ ಬಾಯಿಂದ ಹೊರಡುವ ಮಾತು ನನ್ನ ಇಷ್ಟಾರ್ಥವನು ನೆರವೇರಿಸಿದ ಹೊರತು, ನನ್ನ ಉದ್ದೇಶವನು ಕೈಗೂಡಿಸಿದ ಹೊರತು. ನನ್ನ ಬಳಿಗೆ ವ್ಯರ್ಥವಾಗಿ ಹಿಂದಿರುಗದುಶುಭಸಂದೇಶ :ಮತ್ತಾಯ 6:7-15
ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೊಠಡಿಗೆ ಹೋಗು; ಬಾಗಿಲನ್ನು ಮುಚ್ಚು; ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆ ಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.” “ಪ್ರಾರ್ಥನೆ ಮಾಡುವಾಗ ಪರಕೀಯರಂತೆ ನಿರರ್ಥಕ ಪದಗಳನ್ನು ಪಿಸುಗುಟ್ಟಬೇಡ. ತಮ್ಮ ಪ್ರಾರ್ಥನೆ ದೀರ್ಘವಾದಷ್ಟೂ ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ. ನೀವು ಅವರಂತೆ ಆಗಬೇಡಿ. ನಿಮ್ಮ ಅಗತ್ಯಗಳೇನೆಂದು ನೀವು ಕೇಳುವುದಕ್ಕೆ ಮೊದಲೇ ನಿಮ್ಮ ತಂದೆಗೆ ಗೊತ್ತಿದೆ. ಆದುದರಿಂದ ಹೀಗೆಂದು ಪ್ರಾರ್ಥನೆ ಮಾಡಿ:
‘ಸ್ವರ್ಗ ದಲ್ಲಿರುವ ಓ ನಮ್ಮ ತಂದೆಯೇ,
ನಿಮ್ಮ ಪವಿತ್ರ ನಾಮ ಪೂಜಿತವಾಗಲಿ;
ನಿಮ್ಮ ಸಾಮ್ರಾಜ್ಯ ಬರಲಿ;
ನಿಮ್ಮ ಚಿತ್ತ ಸ್ವರ್ಗದಲ್ಲಿ ನೆರವೇರುವ ಪ್ರಕಾರ ಜಗತ್ತಿನಲ್ಲಿಯೂ ನೆರವೇರಲಿ.
ನಮ್ಮ ಅನುದಿನದ ಆಹಾರವನ್ನು ನಮಗಿಂದು ಕೊಡಿ.
ನಮಗೆ ತಪ್ಪುಮಾಡಿದವರನ್ನು ನಾವು ಕ್ಷಮಿಸುವ ಪ್ರಕಾರ
ನಾವು ಮಾಡಿದ ತಪ್ಪುಗಳನ್ನು ಕ್ಷಮಿಸಿ.
ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’
“ಜನರ ತಪ್ಪುಗಳನ್ನು ನೀವು ಕ್ಷಮಿಸಿದರೆ ಸ್ವರ್ಗದಲ್ಲಿರುವ ನಿಮ್ಮ ತಂದೆ ನಿಮ್ಮನ್ನು ಕ್ಷಮಿಸುವರು.
ಜನರನ್ನು ನೀವು ಕ್ಷಮಿಸದಿದ್ದರೆ, ನಿಮ್ಮ ತಂದೆಯೂ ನಿಮ್ಮ ತಪ್ಪುಗಳನ್ನು ಕ್ಷಮಿಸರು.”
No comments:
Post a Comment