ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

28.02.21 - “ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ಈತನ ಮಾತಿಗೆ ಕಿವಿಗೊಡಿ,”

ಮೊದಲನೇ ವಾಚನ: ಆದಿಕಾ೦ಡ: 22: 1-2, 9-13, 15-18


ದೇವರು ಹೇಳಿದ ಸ್ಥಳಕ್ಕೆ ಬಂದು ಸೇರಿದಾಗ ಅಬ್ರಹಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿದ. ಕಟ್ಟಿಗೆಯನ್ನು ಅದರ ಮೇಲೆ ಒಟ್ಟಿ, ಮಗ ಇಸಾಕನ ಕೈಕಾಲುಗಳನ್ನು ಬಿಗಿದು, ಕಟ್ಟಿಗೆಗಳ ಮೇಲೆ ಅವನನ್ನು ಕೆಡವಿದಬಳಿಕ ಮಗನನ್ನು ವಧಿಸಲು ಕೈಚಾಚಿ ಕತ್ತಿಯನ್ನು ಎತ್ತಿದಆದರೆ ಸರ್ವೇಶ್ವರನ ದೂತನು ಆಕಾಶದಿಂದ, "ಅಬ್ರಹಾಮನೇ, ಹೇ ಅಬ್ರಹಾಮನೇ" ಎಂದು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ ಸಿದ್ಧನಿದ್ದೇನೆಎಂದದೂತನು ಅವನಿಗೆ, "ಹುಡುಗನ ಮೇಲೆ ಕೈಯೆತ್ತಬೇಡ; ಅವನಿಗೆ ಯಾವ ಹಾನಿಯನ್ನೂ ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿಂತೆಗೆಯಲಿಲ್ಲ; ಎಂತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ನನಗೆ ಚೆನ್ನಾಗಿ ಗೊತ್ತಾಯಿತು,” ಎಂದು ಹೇಳಿದನು.

 ಅಬ್ರಹಾಮನು ಕಣ್ಣೆತ್ತಿ ನೋಡಿದ. ತನ್ನ ಹಿಂದುಗಡೆ ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿಕೊಂಡಿತ್ತು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಅದನ್ನು ದಹನಬಲಿಯನ್ನಾಗಿ ಅರ್ಪಿಸಿದ.  “ಬೆಟ್ಟದ ಮೇಲೆ ಸರ್ವೇಶ್ವರ ಸ್ವಾಮಿಯೇ ಒದಗಿಸುತ್ತಾರೆಎಂಬ ಹೇಳಿಕೆ ಇಂದಿಗೂ ರೂಢಿಯಲ್ಲಿದೆ. ಸರ್ವೇಶ್ವರ ಸ್ವಾಮಿಯ ದೂತನು ಆಕಾಶದಿಂದ ಮತ್ತೊಮ್ಮೆ ಅಬ್ರಹಾಮನನ್ನು ಕರೆದು, “ಸರ್ವೇಶ್ವರನ ವಾಕ್ಯವನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಬಲಿಕೊಡಲು ಹಿಂತೆಗೆಯದೆ ಹೋದುದರಿಂದ ನಾನು ನಿನ್ನನ್ನು ತಪ್ಪದೆ ಆಶೀರ್ವದಿಸುತ್ತೇನೆನಿನ್ನ ಸಂತತಿಯನ್ನು ಹೆಚ್ಚಿಸಿಯೇ ಹೆಚ್ಚಿಸುತ್ತೇನೆ; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದ ಮರಳಿನಂತೆಯೂ ಅಸಂಖ್ಯವಾಗಿ ಮಾಡುತ್ತೇನೆ. ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಳ್ಳುವರುನೀನು ನನ್ನ ಮಾತನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ,” ಎಂದನು.


ಕೀರ್ತನೆ: 1116:10, 15, 16-19 
ಶ್ಲೋಕ: ನಡೆವನು ನಾನು ಪ್ರಭುವಿನ ಕಣ್ಣಮುಂದೆ, ಅಂತೆಯೇ ಬಾಳುವೆ ಜೀವಲೋಕದೊಳಿದ್ದೇ. 

ಎರಡನೆಯ ವಾಚನ: ರೋಮನರಿಗೆ: 8:31-34


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರುದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರುದೇವರೇ ಆರಿಸಿಕೊಂಡವರ ಮೇಲೆ ಯಾರು ತಾನೇ ದೋಷಾರೋಪಣೆ ಮಾಡಬಲ್ಲರು? ದೇವರೇ ಅವರನ್ನು ನಿರ್ದೋಷಿಗಳೆಂದು ನಿರ್ಣಯಿಸಿರುವಾಗ ಅವರನ್ನು ದೋಷಿಗಳೆಂದು ನಿರ್ಣಯಿಸುವವರು ಯಾರು? ಪ್ರಾಣತ್ಯಾಗ ಮಾಡಿದ್ದಲ್ಲದೆ ಪುನರುತ್ಥಾನ ಹೊಂದಿದ ಕ್ರಿಸ್ತಯೇಸುವೇ ದೇವರ ಬಲಪಾರ್ಶ್ವದಲ್ಲಿದ್ದುಕೊಂಡು ನಮ್ಮ ಪರವಾಗಿ ಬಿನ್ನಯಿಸುತ್ತಿದ್ದಾರೆ

ಶುಭಸ೦ದೇಶ: ಮಾರ್ಕ: 9: 2-10

ಆರು ದಿನಗಳ ಬಳಿಕ ಪೇತ್ರ, ಯಕೋಬ ಮತ್ತು ಯೊವಾನ್ನ ಇವರನ್ನು ಮಾತ್ರ ತಮ್ಮೊಡನೆ ಕರೆದುಕೊಂಡು ಯೇಸುಸ್ವಾಮಿ ಎತ್ತರವಾದ ಒಂದು ಬೆಟ್ಟಕ್ಕೆ ಹೋದರು. ಅಲ್ಲಿ ಶಿಷ್ಯರ ಕಣ್ಣೆದುರಿಗೇ ಯೇಸು ರೂಪಾಂತರ ಹೊಂದಿದರುಆಗ ಅವರ ಉಡುಪು ಅತ್ಯಂತ ಶುಭ್ರವಾಗಿ ಹೊಳೆಯಿತು. ಜಗದ ಯಾವ ಅಗಸನಿಂದಲೂ ಮಡಿ ಮಾಡಲಾಗದಷ್ಟು ಅದು ಬಿಳುಪಾಯಿತುಮೋಶೆ ಮತ್ತು ಎಲೀಯ ಪ್ರತ್ಯಕ್ಷರಾಗಿ ಯೇಸುವಿನೊಡನೆ ಮಾತನಾಡುತ್ತಿದ್ದುದು ಶಿಷ್ಯರಿಗೆ ಕಾಣಿಸಿತುಆಗ ಪೇತ್ರನು ಯೇಸುವಿಗೆ, “ಗುರುದೇವಾ, ನಾವು ಇಲ್ಲೇ ಇರುವುದು ಒಳ್ಳೆಯದು; ಅಪ್ಪಣೆಯಾಗಲಿ, ಮೂರು ಗುಡಾರಗಳನ್ನು ಕಟ್ಟುವೆವು; ತಮಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು,” ಎಂದನುಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂದೇ ತಿಳಿಯಲಿಲ್ಲ. ಶಿಷ್ಯರು ಅಷ್ಟು ಭಯಭ್ರಾಂತ ಆಗಿದ್ದರುಅಷ್ಟರಲ್ಲಿ ಮೇಘವೊಂದು ಅವರನ್ನು ಆವರಿಸಿತು. ಅದರೊಳಗಿಂದ, “ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ಈತನ ಮಾತಿಗೆ ಕಿವಿಗೊಡಿ,” ಎಂಬ ವಾಣಿ ಕೇಳಿಸಿತುತಕ್ಷಣ, ಶಿಷ್ಯರು ಸುತ್ತಲೂ ನೋಡಲು ತಮ್ಮೊಂದಿಗೆ ಯೇಸುವೊಬ್ಬರನ್ನೇ ಹೊರತು ಬೇರೆ ಯಾರನ್ನೂ ಕಾಣಲಿಲ್ಲ.

ಅನಂತರ ಯೇಸು ಮತ್ತು ಅವರ ಶಿಷ್ಯರು ಬೆಟ್ಟದಿಂದ ಇಳಿದುಬರುವಾಗ, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರುಅಂತೆಯೇ ಶಿಷ್ಯರು ಇದನ್ನು ಯಾರಿಗೂ ಹೇಳಲಿಲ್ಲ; ಆದರೂಸತ್ತು ಪುನರುತ್ಥಾನ ಹೊಂದುವುದುಎಂದರೆ ಏನು? ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಂಡರು.

ಮನಸ್ಸಿಗೊಂದಿಷ್ಟು : ಯೇಸು ಜನರನ್ನು ಮಂತ್ರ ಮುಗ್ದರನ್ನಾಗಿ ಮಾಡಿಕೊಂಡು ತಮ್ಮನ್ನು ಹಿಂಬಾಲಿಸುವಂತೆ ಎಂದಿಗೂ ಮಾಡಿಕೊಳ್ಳಲಿಲ್ಲ. ಆದರೆ ಇಂದಿನ ಘಟನೆಯಲ್ಲಿ ಅವರ ದಿವ್ಯ ದರ್ಶನವನ್ನು ಕಂಡು  ಆಪ್ತ ಶಿಷ್ಯರು ಬೆರಗಾಗುತ್ತಾರೆ.   

“ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ಈತನ ಮಾತಿಗೆ ಕಿವಿಗೊಡಿ" ಎಂಬುದೇ ರೂಪಾಂತರ ಘಟನೆಯ ನಿಜ ಸಂದೇಶ ಎನ್ನುತ್ತಾರೆ ಪೋಪ್ ಫ್ರಾನ್ಸಿಸ್.  ನಾವು ಸದಾ ಯೇಸುವಿನ ಮಾತಿಗೆ ಕಿವಿಯಾಗಿರಬೇಕು.  ಅಂತೆಯೇ  ಆ ರೂಪಾಂತರದ ವೈಭವದಲ್ಲೇ ಉಳಿಯದೆ ಮುಂದಿನ ಶಿಲುಬೆಯ ಮರಣಕ್ಕೆ ಯೇಸು ಸಿದ್ದರಾಗುತ್ತಾರೆ. ಅದೇ ವಾಸ್ತವ. 

ಶಿಲುಬೆ ನಮ್ಮ ವಾಸ್ತವ ಕೂಡ. ನಂತರದ ಪುನರುತ್ಥಾನವೂ. 

No comments:

Post a Comment